ಎಎಪಿ ಸಂಸದ ರಾಘವ್ ಚಡ್ಡಾ ಅಮಾನತನ್ನು ಹಿಂಪಡೆದ ರಾಜ್ಯಸಭೆ

ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರ ಅಮಾನತು ಕ್ರಮವನ್ನು ರಾಜ್ಯಸಭೆ ಇಂದು (ಡಿ.04) ಹಿಂಪಡೆದಿದೆ. ಐವರು ರಾಜ್ಯಸಭಾ ಸಂಸದರ ನಕಲಿ ಸಹಿ ಮಾಡಿದ ಆರೋಪ ಹೊತ್ತಿರುವ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತು. ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅಮಾನತಿನಲ್ಲಿ ಇಡಲಾಗುವುದು ಎಂದು ರಾಜ್ಯಸಭೆಯಲ್ಲಿ ಹೇಳಲಾಗಿತು. ಇದೀಗ ಅವರ ಅಮಾನತು ಕ್ರಮವನ್ನು ಹಿಂಪಡೆಯಾಗಲಿದೆ.

ಎಎಪಿ ಸಂಸದ ರಾಘವ್ ಚಡ್ಡಾ ಅಮಾನತನ್ನು ಹಿಂಪಡೆದ ರಾಜ್ಯಸಭೆ
ರಾಘವ್ ಚಡ್ಡಾ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 04, 2023 | 3:03 PM

ದೆಹಲಿ, ಡಿ.04: ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ (Raghav Chadha) ಅವರ ಅಮಾನತು ಕ್ರಮವನ್ನು ರಾಜ್ಯಸಭೆ ಇಂದು (ಡಿ.04) ಹಿಂಪಡೆದಿದೆ. ಐವರು ರಾಜ್ಯಸಭಾ ಸಂಸದರ ನಕಲಿ ಸಹಿ ಮಾಡಿದ ಆರೋಪ ಹೊತ್ತಿರುವ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತು. ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅಮಾನತಿನಲ್ಲಿ ಇಡಲಾಗುವುದು ಎಂದು ರಾಜ್ಯಸಭೆಯಲ್ಲಿ ಹೇಳಲಾಗಿತು. ರಾಘವ್ ಚಡ್ಡಾ ಅವರು ಮಾಡಿದ್ದು ಅಕ್ರಮ ಎಂದು ಪಿಯೂಷ್ ಗೋಯಲ್ ಅವರು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು. ಚಡ್ಡಾ ಅವರ ನಡವಳಿಕೆಯು ಅನಿರೀಕ್ಷಿತ ಮತ್ತು ಸಂಸತ್ತಿನ ಸದಸ್ಯರಿಗೆ ತಕ್ಕುದಾದುದು ಅಲ್ಲ. ಚಡ್ಡಾ ಅವರು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಗೋಯಲ್ ಅಮಾನತು ಪ್ರಸ್ತಾಪವನ್ನು ಮಂಡಿಸಿದರು.

ಇದೀಗ ಚಳಿಗಾಲದ ಅಧಿವೇಶನದ ಮೊದಲ ದಿನವೇ ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಮಂಡಿಸಿದ ಮನವಿಯ ಮೇರೆಗೆ ಅಮಾನತು ರದ್ದುಗೊಳಿಸಲಾಯಿತು. ಅಮಾನತು ವಿಷಯವನ್ನು ಚರ್ಚಿಸಲು ಇಂದು ಮಧ್ಯಾಹ್ನ ಸಂಸತ್ತಿನಲ್ಲಿ ರಾಜ್ಯಸಭೆಯ ವಿಶೇಷಾಧಿಕಾರ ಸಮಿತಿ ಸಭೆ ನಡೆಯಿತು.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ, ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು

ಅಮಾನತು ಹಿಂಪಡೆದ ನಂತರ, ಚಾಡಾ ಅವರು ವಿಡಿಯೋ ಸಂದೇಶದ ಮೂಲಕ ಸುಪ್ರೀಂ ಕೋರ್ಟ್ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 11ರಂದು ನನ್ನನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಯಿತು. ನನ್ನ ಅಮಾನತು ಹಿಂಪಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಹೋಗಿದ್ದೆ. ಸುಪ್ರೀಂ ಕೋರ್ಟ್ ಇದನ್ನು ಅರಿತಿದೆ ಮತ್ತು ಈಗ ನನ್ನ ಅಮಾನತು 115 ದಿನಗಳ ನಂತರ ಹಿಂಪಡೆದಿದೆ. ನನ್ನ ಅಮಾನತು ರದ್ದುಗೊಂಡಿರುವುದಕ್ಕೆ ನನಗೆ ಸಂತೋಷವಾಗಿದೆ ಮತ್ತು ನಾನು ಸುಪ್ರೀಂ ಕೋರ್ಟ್ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Mon, 4 December 23

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’