AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakesh Tikait: ಅಗ್ನಿಪಥ್ ಹೊಸ ಸೇನಾ ನೇಮಕಾತಿ ರೈತರ ಮಕ್ಕಳ ಪರವಾಗಿಲ್ಲ; ರಾಕೇಶ್ ಟಿಕಾಯತ್ ಟೀಕೆ

Agnipath Scheme Protests: ದೇಶದ ಯುವಕರು ಕೇವಲ 4 ವರ್ಷಗಳ ಕಾಲ ಸೇನೆಯ ಕೆಲಸವನ್ನು ಮಾಡುತ್ತಾರೆ. ಆದರೆ, ಶಾಸಕರು 80 ವರ್ಷ ವಯಸ್ಸಿನವರೆಗೆ ಸೇವೆಯಲ್ಲಿ ಮುಂದುವರಿಯುತ್ತಾರೆ. ಶಾಸಕರಂತೆ ರಾಷ್ಟ್ರದ ಯುವಕರಿಗೂ ಪಿಂಚಣಿ ಸಿಗಬೇಕು ಎಂದು ರಾಕೇಶ್ ಟಿಕಾಯತ್ ಒತ್ತಾಯಿಸಿದ್ದಾರೆ.

Rakesh Tikait: ಅಗ್ನಿಪಥ್ ಹೊಸ ಸೇನಾ ನೇಮಕಾತಿ ರೈತರ ಮಕ್ಕಳ ಪರವಾಗಿಲ್ಲ; ರಾಕೇಶ್ ಟಿಕಾಯತ್ ಟೀಕೆ
ರಾಕೇಶ್ ಟಿಕಾಯತ್Image Credit source: times now
TV9 Web
| Updated By: ಸುಷ್ಮಾ ಚಕ್ರೆ|

Updated on:Jun 18, 2022 | 11:14 AM

Share

ಹರಿದ್ವಾರ: ಕೇಂದ್ರ ಸರ್ಕಾರದಿಂದ ಹೊಸದಾಗಿ ಆರಂಭಿಸಲಾಗಿರುವ ಅಗ್ನಿಪಥ್ (Agnipath) ಸೇನಾ ನೇಮಕಾತಿ ಪ್ರಕ್ರಿಯೆಯನ್ನು ವಿರೋಧಿಸಿ ರೈತ ಮುಖಂಡ ಮತ್ತು ಭಾರತೀಯ ಕಿಸಾನ್ ಯೂನಿಯನ್ (BKU) ವಕ್ತಾರ ರಾಕೇಶ್ ಟಿಕಾಯತ್ (Rakesh Tikait) ದೇಶಾದ್ಯಂತ ಚಳವಳಿ ನಡೆಸುವುದಾಗಿ ಘೋಷಿಸಿದ್ದಾರೆ. ಹೊಸ ನೇಮಕಾತಿ ಯೋಜನೆಯು ರೈತರ ಪುತ್ರರ ಹಿತದೃಷ್ಟಿಯಿಂದಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯ ವಿರುದ್ಧ ರೈತರು ರಾಷ್ಟ್ರವ್ಯಾಪಿ ಚಳವಳಿ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾಲ್ಕು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಸೇನೆಯಿಂದ ನಿವೃತ್ತರಾದ ನಂತರ ರೈತನ ಮಗ ಏನು ಮಾಡಬೇಕು? ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಹರಿದ್ವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಕೇಶ್ ಟಿಕಾಯತ್, ಮಧ್ಯಸ್ಥಗಾರರ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಬೇಕು. ಈ ಹಿಂದೆ 15-21 ವರ್ಷ ಸೇವಾವಧಿ ಇತ್ತು, ಈಗ ಅದನ್ನು ನಾಲ್ಕು ವರ್ಷಕ್ಕೆ ಇಳಿಸಲಾಗಿದೆ. ಹೀಗಾದರೆ, 4 ವರ್ಷದ ಬಳಿಕ ಯುವಕರು ಏನು ಮಾಡಬೇಕು? ಸೇನೆಯ ರೀತಿಯಲ್ಲೇ ಶಾಸಕರು ಎರಡನೇ ಬಾರಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ನೀತಿಯನ್ನು ಸರ್ಕಾರ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ಅಗ್ನಿಪಥ್​​ ಯೋಜನೆ ವಿರುದ್ಧ ಬಿಹಾರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಅಶ್ರುವಾಯು ಪ್ರಯೋಗ

ಇದನ್ನೂ ಓದಿ
Image
Agnipath Scheme: ಅಗ್ನಿಪಥ್ ಯೋಜನೆಯ ಅಗ್ನಿವೀರರ ಗರಿಷ್ಠ ವಯೋಮಿತಿ 23 ವರ್ಷಕ್ಕೆ ಏರಿಕೆ; ಶೀಘ್ರದಲ್ಲೇ ನೇಮಕಾತಿ ಶುರು
Image
Agnipath Scheme: ಅಗ್ನಿಪಥ್ ಯೋಜನೆಗೆ ವಿರೋಧವೇಕೆ? ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾರಣವೇನು?
Image
Agnipath Scheme: ಅಗ್ನಿಪಥ್​ ಯೋಜನೆ ಕುರಿತ ವದಂತಿಗಳೇನು; ಸರ್ಕಾರ ನೀಡಿದ ಸ್ಪಷ್ಟನೆಯೇನು?
Image
Agnipath Scheme: ಕೇವಲ 3 ವರ್ಷಗಳಿಗೆ ಸೈನಿಕರನ್ನು ನೇಮಿಸುವ ಕೇಂದ್ರದ ‘ಅಗ್ನಿಪಥ’ ಯೋಜನೆಗೆ ಚಾಲನೆ

ದೇಶದ ಯುವಕರು ಕೇವಲ ನಾಲ್ಕು ವರ್ಷಗಳ ಕಾಲ ಸೇನೆಯ ಕೆಲಸವನ್ನು ಮಾಡುತ್ತಾರೆ. ಆದರೆ, ಶಾಸಕರು 80 ವರ್ಷ ವಯಸ್ಸಿನವರೆಗೆ ಸೇವೆಯಲ್ಲಿ ಮುಂದುವರಿಯುತ್ತಾರೆ. ಶಾಸಕರಂತೆ ರಾಷ್ಟ್ರದ ಯುವಕರಿಗೂ ಪಿಂಚಣಿ ಸಿಗಬೇಕು ಎಂದಿರುವ ಅವರು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡದಂತೆ ಯುವಕರು ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೂನ್ 14ಕ್ಕೆ ಉದ್ಘಾಟನೆ ಮಾಡಿದ್ದರು. ಇದು ಭಾರತೀಯ ಸಶಸ್ತ್ರ ಪಡೆಗಳಿಗೆ ನೇಮಕಾತಿಯಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರುವ ಯೋಜನೆಯಾಗಿದ್ದು, ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗೆ 46,000 ಸೈನಿಕರನ್ನು ಸೇರಿಸಿಕೊಳ್ಳುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಅಗ್ನಿಪಥ್ ಅಥವಾ ಅಗ್ನಿಪತ್ ಸಶಸ್ತ್ರ ಪಡೆಗಳಿಗೆ ಸೇರಲು ಬಯಸುವ ಭಾರತೀಯ ಯುವಕರಿಗೆ ನೇಮಕಾತಿ ಯೋಜನೆಯಾಗಿದೆ. ಪ್ರವೇಶವನ್ನು ಆರಂಭದಲ್ಲಿ 4 ವರ್ಷಗಳ ಅವಧಿಗೆ ನಿಗದಿಪಡಿಸಲಾಗುತ್ತದೆ. ಈ 4 ವರ್ಷಗಳಲ್ಲಿ, ನೇಮಕಗೊಂಡವರಿಗೆ ಅಗತ್ಯವಿರುವ ಕೌಶಲ್ಯಗಳಲ್ಲಿ ಸಶಸ್ತ್ರ ಪಡೆಗಳಿಂದ ತರಬೇತಿ ನೀಡಲಾಗುತ್ತದೆ. ಈ ಯೋಜನೆಯಡಿ ನೇಮಕಗೊಂಡವರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ.

ಈ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷ ಒಟ್ಟು 46 ಸಾವಿರ ಸೈನಿಕರನ್ನು ನೇಮಿಸಿಕೊಳ್ಳಲಾಗುತ್ತದೆ. ಇವರಲ್ಲಿ ಶೇ. 25ರಷ್ಟು ಖಾಯಂ ಆಯೋಗಕ್ಕಾಗಿ 15 ವರ್ಷಗಳ ಹೆಚ್ಚುವರಿ ಅವಧಿಗೆ ಉಳಿಸಿಕೊಳ್ಳಲಾಗುವುದು. ಉಳಿದವರಿಗೆ ನಿವೃತ್ತಿಗೆ ಅವಕಾಶ ನೀಡಿ ಅವರಿಗೆ ಸೇವಾ ನಿಧಿಯನ್ನು ನೀಡಲಾಗುತ್ತದೆ. ಅದರ ಮೊತ್ತ 11.71 ಲಕ್ಷ ರೂ.ಗಳಾಗಿರುತ್ತವೆ. ಈ ಮೊತ್ತವು ತೆರಿಗೆ ಮುಕ್ತವಾಗಿರುತ್ತದೆ. ಸಶಸ್ತ್ರ ಪಡೆಗಳಲ್ಲಿ ನಿಯಮಿತ ಕೇಡರ್ ಆಗಿ ನೋಂದಣಿಗೆ ಆಯ್ಕೆಯಾದ ವ್ಯಕ್ತಿಗಳು ಕನಿಷ್ಠ 15 ವರ್ಷಗಳ ಅವಧಿಗೆ ಸೇವೆ ಸಲ್ಲಿಸಬೇಕಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:12 am, Sat, 18 June 22

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ