AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest: ಕೇಂದ್ರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ; ಇಂದು ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಲಿರುವ ರಾಕೇಶ್​ ಟಿಕಾಯತ್​

ಈ ಬಾರಿ ನರೇಂದ್ರ ಮೋದಿಯವರು ವಿಧಾನಸಭೆ ಚುನಾವಣೆಯಲ್ಲಿ ಸೋಲಲಿ ಎಂಬ ಆಶಯದೊಂದಿಗೆ, ವಿಧಾನಸಭೆ ಚುನಾವಣೆಗೂ ಮೊದಲು ಪಶ್ಚಿಮಬಂಗಾಳಕ್ಕೆ ಭೇಟಿ ನೀಡಿ, ಟಿಎಂಸಿ ಪರ ಪ್ರಚಾರ ನಡೆಸಿದ್ದ ರಾಕೇಶ್​ ಟಿಕಾಯತ್​, ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಲಿದ್ದಾರೆ.

Farmers Protest: ಕೇಂದ್ರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ; ಇಂದು ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಲಿರುವ ರಾಕೇಶ್​ ಟಿಕಾಯತ್​
ರಾಕೇಶ್ ಟಿಕಾಯತ್​
TV9 Web
| Edited By: |

Updated on: Jun 09, 2021 | 9:34 AM

Share

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಯನ್ನು ತೀವ್ರ ಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುವ ಸಲುವಾಗಿ ರೈತ ಮುಖಂಡ ರಾಕೇಶ್​ ಟಿಕಾಯತ್​ ಅವರು ಇಂದು ಮಧ್ಯಾಹ್ನ 3ಗಂಟೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಲಿದ್ದಾರೆ. ಸದ್ಯ ದೆಹಲಿಯ ಗಡಿಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ಯಾವೆಲ್ಲ ಯೋಜನೆ ರೂಪಿಸಬಹುದು ಎಂಬ ಬಗ್ಗೆ ಇಂದು ರಾಕೇಶ್ ಟಿಕಾಯತ್​​ ಕೋಲ್ಕತ್ತದಲ್ಲಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.

ಈ ಬಾರಿ ನರೇಂದ್ರ ಮೋದಿಯವರು ವಿಧಾನಸಭೆ ಚುನಾವಣೆಯಲ್ಲಿ ಸೋಲಲಿ ಎಂಬ ಆಶಯದೊಂದಿಗೆ, ವಿಧಾನಸಭೆ ಚುನಾವಣೆಗೂ ಮೊದಲು ಪಶ್ಚಿಮಬಂಗಾಳಕ್ಕೆ ಭೇಟಿ ನೀಡಿ, ಟಿಎಂಸಿ ಪರ ಪ್ರಚಾರ ನಡೆಸಿದ್ದ ರಾಕೇಶ್​ ಟಿಕಾಯತ್​, ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿ ಸಹಜವಾಗಿಯೇ ಕುತೂಹಲ ಮೂಡಿಸಿದೆ. ಹಾಗೇ ಮತ್ತೊಮ್ಮೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಪಟ್ಟಕ್ಕೇರಿದ ಮಮತಾ ಬ್ಯಾನರ್ಜಿಯವರಿಗೆ ರಾಕೇಶ್​ ಅಭಿನಂದನೆ ಸಲ್ಲಿಸಲಿದ್ದಾರೆ.

ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ವಿರೋಧಿಸಿ ಕಳೆದ ನವೆಂಬರ್​​ನಿಂದಲೂ ದೆಹಲಿಯ ಗಡಿಭಾಗಗಳಲ್ಲಿ ರಾಕೇಶ್ ಟಿಕಾಯತ್​ ಸೇರಿ ನೂರಾರು ರೈತರು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮಮತಾ ಬ್ಯಾನರ್ಜಿ ಸಹ ಈ ಕೃಷಿಕಾಯ್ದೆಗಳನ್ನು ವಿರೋಧಿಸುತ್ತಿದ್ದು, ತಾನು ರೈತರ ಪ್ರತಿಭಟನೆಗಳಿಗೆ ಬೆಂಬಲ ನೀಡುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಉತ್ತರ ಕರ್ನಾಟಕ ಸ್ಪೆಷಲ್ ಉದುರು ಸಜ್ಜಕ; ಸಿಹಿಯಾದ ಅಡುಗೆ ಇಷ್ಟಪಡುವವರು ಮಾಡಿ ಸವಿಯಿರಿ

(Rakesh Tikait to meet Mamata Banerjee today in kolkata)

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!