Acharya Satyendra Das: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

|

Updated on: Feb 12, 2025 | 9:47 AM

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು. ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

Acharya Satyendra Das: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ
ಸತ್ಯೇಂದ್ರ ದಾಸ್
Image Credit source: Hindustan Times
Follow us on

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು. ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುದಿಂದ ಬಳಲುತ್ತಿದ್ದರು. ಜತೆಗೆ, ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿದ್ದು, ನ್ಯೂರಾಲಜಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸತ್ಯೇಂದ್ರ ದಾಸ್ 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು.

ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕೆಲವು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಯೋಗಕ್ಷೇಮ ವಿಚಾರಿಸಿದ್ದರು. ಸತ್ಯೇಂದ್ರ ದಾಸ್ ಅವರ ನಿಧನಕ್ಕೆ ಶೋಕ ವ್ಯಕ್ತವಾಗಿದೆ. ಆಚಾರ್ಯ ಸತ್ಯೇಂದ್ರ ದಾಸ್ ಅವರ ನಿಧನವನ್ನು ರಾಮ ಮಂದಿರ ಟ್ರಸ್ಟ್ ದೃಢಪಡಿಸಿದೆ. ಅವರು 1993 ರಿಂದ ರಾಮನನ್ನು ಪೂಜಿಸುತ್ತಿದ್ದರು. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ದೇವಾಲಯದ ಆಡಳಿತ ಮಂಡಳಿಗೆ ಸಂಬಂಧಿಸಿದ ಇತರರು ಮುಖ್ಯ ಅರ್ಚಕರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:40 am, Wed, 12 February 25