ಜನವರಿ 22ರಂದು ಅಯೋಧ್ಯೆಯಲ್ಲಿ ಮೂರ್ತಿ ಪ್ರತಿಷ್ಠಾಪನೆ; ಮೋದಿಗೆ ರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನ
ಇತ್ತೀಚೆಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ನನ್ನನ್ನು ಭೇಟಿಯಾಗಲು ನನ್ನ ನಿವಾಸಕ್ಕೆ ಬಂದಿದ್ದರು. ಅವರು ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರಲು ನನ್ನನ್ನು ಆಹ್ವಾನಿಸಿದ್ದಾರೆ..ನನ್ನ ಜೀವನದಲ್ಲಿ ನಾನು ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಅಯೋಧ್ಯೆ ಅಕ್ಟೋಬರ್ 25: ಜನವರಿ 22, 2024 ರಂದು ಅಯೋಧ್ಯೆಯಲ್ಲಿ (Ayodhya) ಭಗವಾನ್ ರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಲು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಅಧಿಕೃತವಾಗಿ ಆಹ್ವಾನ ನೀಡಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ (Sri Ram Janmbhoomi Trust)ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಜನವರಿ 22, 2024 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ಮೂರ್ತಿ ಸ್ಥಾಪಿಸುವ ದಿನಾಂಕವನ್ನು ದೃಢಪಡಿಸಿದರು.
“ಜೈ ಸಿಯಾ ರಾಮ್! ಇಂದು ಭಾವನೆಗಳ ತುಂಬಿದ ದಿನ. ಇತ್ತೀಚೆಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ನನ್ನನ್ನು ಭೇಟಿಯಾಗಲು ನನ್ನ ನಿವಾಸಕ್ಕೆ ಬಂದಿದ್ದರು. ಅವರು ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರಲು ನನ್ನನ್ನು ಆಹ್ವಾನಿಸಿದ್ದಾರೆ.. ನನ್ನ ಜೀವನದಲ್ಲಿ ನಾನು ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
जय सियाराम!
आज का दिन बहुत भावनाओं से भरा हुआ है। अभी श्रीराम जन्मभूमि तीर्थ क्षेत्र ट्रस्ट के पदाधिकारी मुझसे मेरे निवास स्थान पर मिलने आए थे। उन्होंने मुझे श्रीराम मंदिर में प्राण-प्रतिष्ठा के अवसर पर अयोध्या आने के लिए निमंत्रित किया है।
मैं खुद को बहुत धन्य महसूस कर रहा… pic.twitter.com/rc801AraIn
— Narendra Modi (@narendramodi) October 25, 2023
ಅಯೋಧ್ಯೆ ವಿವಾದದ ಕುರಿತು 2019 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಿತು . ಸುಪ್ರೀಂಕೋರ್ಟ್ ತೀರ್ಪಿನ ನಂತರ, ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಕೇಂದ್ರವು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ಸ್ಥಾಪಿಸಿತು.
#WATCH | General Secretary of Sri Ram Janambhoomi Trust Champat Rai on meeting PM Narendra Modi and confirming January 22, 2024 as the date of installation of Lord Ram idol in the Garbhagriha of the Ram Mandir in Ayodhya, Uttar Pradesh. pic.twitter.com/wBtWetiNW6
— ANI (@ANI) October 25, 2023
ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣವು ಸ್ಥಿರವಾದ ವೇಗದಲ್ಲಿ ಪ್ರಗತಿಯಲ್ಲಿದೆ. ರಾಮ ಲಲ್ಲಾನ ವಿಗ್ರಹವು ದೇವಾಲಯದ ಗರ್ಭಗುಡಿಯಲ್ಲಿರುತ್ತದೆ.
ಇದನ್ನೂ ಓದಿ: ಮೋದಿ ವಿರುದ್ಧ ಸುಳ್ಳು ಆರೋಪ ಮಾಡಿದಕ್ಕೆ ಪ್ರಿಯಾಂಕಾ ವಿರುದ್ಧ ಕ್ರಮ ಕೈಗೊಳ್ಳಿ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಆಗಸ್ಟ್ 5, 2020 ರಂದು ಪ್ರಧಾನಿ ಮೋದಿಯವರು ರಾಮಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:19 pm, Wed, 25 October 23