ಜನವರಿ 22ರಂದು ಮಧ್ಯಾಹ್ನ 12.20ಕ್ಕೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ

ಅಯೋಧ್ಯೆ ರಾಮಮಂದಿರದಲ್ಲಿ ರಾಮ್ ಲಲ್ಲಾನ ಪ್ರತಿಷ್ಠಾಪನೆಯು ಜನವರಿ 22 ರಂದು ಮಧ್ಯಾಹ್ನ 12.20 ಕ್ಕೆ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೋಮವಾರ ತಿಳಿಸಿದ್ದಾರೆ. ಇದಾದ ನಂತರ ಆರತಿ ಮಾಡಿ, ಪ್ರಸಾದ ವಿತರಣೆ ಮಾಡಿ, ಸೂರ್ಯಾಸ್ತದ ನಂತರ ದೀಪ ಹಚ್ಚಲಾಗುವುದು.

ಜನವರಿ 22ರಂದು ಮಧ್ಯಾಹ್ನ 12.20ಕ್ಕೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ
ರಾಮ ಮಂದಿರ
Follow us
ರಶ್ಮಿ ಕಲ್ಲಕಟ್ಟ
|

Updated on:Jan 01, 2024 | 4:22 PM

ಅಯೋಧ್ಯೆ ಜನವರಿ 01: ಅಯೋಧ್ಯೆಯಲ್ಲಿ (Ayodhya) ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ (Ram mandir) ರಾಮ್ ಲಲ್ಲಾನ (Ram Lalla) ಪ್ರತಿಷ್ಠಾಪನೆಯು ಜನವರಿ 22 ರಂದು ಮಧ್ಯಾಹ್ನ 12.20 ಕ್ಕೆ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೋಮವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ‘ಪ್ರಾಣ ಪ್ರತಿಷ್ಠೆ ಮಧ್ಯಾಹ್ನ 12.20ಕ್ಕೆ ನಡೆಯಲಿದ್ದು, ಬಳಿಕ ಆರತಿ ಮಾಡಿ, ಸ್ಥಳೀಯ ಹಾಗೂ ಮಾರುಕಟ್ಟೆಗಳಲ್ಲಿ ಪ್ರಸಾದ ವಿತರಣೆ ಮಾಡಿ, ಸೂರ್ಯಾಸ್ತದ ನಂತರ ದೀಪ ಹಚ್ಚಲಾಗುವುದು ಎಂದು ಹೇಳಿದ್ದಾರೆ.

“ಇಡೀ ಜಗತ್ತಿಗೆ ಇದೇ ರೀತಿಯ ಮನವಿಯನ್ನು ಪ್ರಧಾನಿ ಮಾಡಿದ್ದಾರೆ” ಎಂದು ಅವರು ಹೇಳಿದರು. ಪ್ರಾಣಪ್ರತಿಷ್ಠೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಅಯೋಧ್ಯೆಯಲ್ಲಿ ಸೋಮವಾರ ನಡೆದ ‘ಅಕ್ಷತ್’ ವಿತರಣಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ರಾಯ್ ಭಾಗವಹಿಸಿದ್ದರು.

ಅಯೋಧ್ಯೆಯ ರಾಮಮಂದಿರ ಆವರಣ ಅಲಂಕಾರ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ನರ್ಸರಿಯಿಂದ ಬೋಗನ್‌ವಿಲ್ಲಾ ಹೂವುಗಳನ್ನು ಅಯೋಧ್ಯೆಯ ರಾಮಮಂದಿರದ ಆವರಣವನ್ನು  ಅಲಂಕರಿಸಲು ಬಳಸಲಾಗುತ್ತದೆ. ಭೋಪಾಲ್ ಮೂಲದ ನಿಸರ್ಗ್ ನರ್ಸರಿ ಮಾಲೀಕ ರಾಮ್‌ಕುಮಾರ್ ರಾಥೋಡ್ ಅವರು ಹೂವುಗಳಿಗಾಗಿ ಆರ್ಡರ್  ಸ್ವೀಕರಿಸಿದ್ದಾರೆ. ಅವರು ಈಗಾಗಲೇ ಉತ್ತರ ಪ್ರದೇಶದ ಅಯೋಧ್ಯೆಗೆ 10,000 ಹೂವುಗಳ ತಲಾ ಎರಡು ಸರಕುಗಳನ್ನು ರವಾನಿಸಿದ್ದಾರೆ.

ಜನವರಿ 22 ರಂದು ಭಗವಾನ್ ರಾಮನ ‘ಪ್ರಾಣ ಪ್ರತಿಷ್ಠಾ’ (ಪ್ರತಿಷ್ಠಾಪನೆ) ಸಂದರ್ಭವನ್ನು ಗುರುತಿಸಲು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಬರುವ ನಿರೀಕ್ಷೆಯಿದೆ. ನಾವು ಅಯೋಧ್ಯೆಯ ರಾಮ ಜನ್ಮಭೂಮಿಯಿಂದ ಐದು-ಆರು ವಿಧದ ಹೂವುಗಳನ್ನು ಒದಗಿಸಲು ಆರ್ಡರ್  ಸ್ವೀಕರಿಸಿದ್ದೇವೆ. ಇವುಗಳಲ್ಲಿ ಬಿಳಿ, ಕಿತ್ತಳೆ, ಕೆಂಪು ಮತ್ತು ಹಳದಿ ಸೇರಿದಂತೆ ವಿವಿಧ ಬಣ್ಣಗಳ ಬೋಗನ್‌ವಿಲ್ಲಾ ಸೇರಿವೆ” ಎಂದು ರಾಥೋಡ್ ಹೇಳಿದರು.

ಇದನ್ನೂ ಓದಿ:ಅಯೋಧ್ಯೆ ರಾಮಮಂದಿರ: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆ

ಈ ಜಾತಿಯ ಹೂವುಗಳು ಎಲ್ಲಾ ಋತುಗಳಲ್ಲಿ ಅರಳುತ್ತವೆ. ಹೆಚ್ಚಿನ ಕಾಳಜಿ ಅಗತ್ಯವಿಲ್ಲ ಮತ್ತು ಕಡಿಮೆ ಪ್ರಮಾಣದ ನೀರಿನಿಂದ ಅವುಗಳನ್ನು ನಿರ್ವಹಿಸಬಹುದು ಎಂದು ಅವರು ಹೇಳಿದರು.ರಾಥೋಡ್ ಕುಟುಂಬದ ಒಡೆತನದ ನರ್ಸರಿಯು ರಾಮ ಮಂದಿರದ ಆವರಣ ಮತ್ತು ಅದರ ಕಾರಿಡಾರ್‌ನಲ್ಲಿ ನೆಡಲು ಹರಾಜು ಪ್ರಕ್ರಿಯೆಯ ನಂತರ ಹೂವುಗಳನ್ನು ಪೂರೈಸುವ ಆರ್ಡರ್ ಪಡೆದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Mon, 1 January 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್