ರಾಮಲಲ್ಲಾ ಇನ್ಮುಂದೆ ಟೆಂಟ್​​​ನಲ್ಲಿ ಅಲ್ಲ, ದಿವ್ಯ ಮಂದಿರದಲ್ಲಿ ಇರುತ್ತಾನೆ: ನರೇಂದ್ರ ಮೋದಿ

ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ. ಇಷ್ಟು ವರ್ಷಗಳ ಕಾಲ ನಾವು ಸಮಯ ತೆಗೆದುಕೊಂಡಿದ್ದಕ್ಕೆ ಪ್ರಭು ಶ್ರೀರಾಮನಲ್ಲಿ ಕ್ಷಮೆಯಾಚಿಸುವೆ. ಪ್ರಭು ಶ್ರೀರಾಮನ ಆಗಮನದಿಂದ ಇಡೀ ದೇಶ ಸಂಭ್ರಮಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಮಲಲ್ಲಾ ಇನ್ಮುಂದೆ ಟೆಂಟ್​​​ನಲ್ಲಿ ಅಲ್ಲ, ದಿವ್ಯ ಮಂದಿರದಲ್ಲಿ ಇರುತ್ತಾನೆ: ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Jan 22, 2024 | 2:55 PM

ಅಯೋಧ್ಯೆ ಜನವರಿ 22: ಅಯೋಧ್ಯೆಯ (Ayodhya) ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ (Ram Lalla) ಪ್ರಾಣ ಪ್ರತಿಷ್ಠಾ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi),ಇಂದು ನಮ್ಮೆಲ್ಲರ ರಾಮ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ.ಈ ಶುಭ ಘಳಿಗೆಯಲ್ಲಿ ಎಲ್ಲರಿಗೂ ಶುಭಾಶಯ ಎಂದಿದ್ದಾರೆ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ ಮಾತುಗಳು ಹೊರಳದೇ ಗಂಟಲು ಕಟ್ಟುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​​ನಲ್ಲಿ ಇರಲ್ಲ . ನಮ್ಮ ರಾಮಲಲ್ಲಾ ದಿವ್ಯ ಮಂದಿರದಲ್ಲಿ ಇರುತ್ತಾನೆ. ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದು ಮೋದಿ ಹೇಳಿದ್ದಾರೆ.

ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ. ಪ್ರಭು ಶ್ರೀರಾಮನ ಬಳಿ ನಾನು ಕ್ಷಮೆಯಾಚಿಸುತ್ತೇನೆ. ಇಷ್ಟು ವರ್ಷಗಳ ಕಾಲ ನಾವು ಸಮಯ ತೆಗೆದುಕೊಂಡಿದ್ದಕ್ಕೆ ಕ್ಷಮೆಯಾಚಿಸುವೆ. ಪ್ರಭು ಶ್ರೀರಾಮನ ಆಗಮನದಿಂದ ಇಡೀ ದೇಶ ಸಂಭ್ರಮಗೊಂಡಿದೆ ಎಂದಿದ್ದಾರೆ ಮೋದಿ.

ದೇಶದ ಪ್ರತಿ ಮನೆಯಲ್ಲಿಂದು ರಾಮ ಜ್ಯೋತಿ ಬೆಳಗಲಿದೆ

ಪ್ರಭು ಶ್ರೀರಾಮನ ಅಸ್ತಿತ್ವಕ್ಕಾಗಿ ನಮ್ಮ ದೇಶದಲ್ಲಿ ಕಾನೂನು ಸಂಘರ್ಷ ಕೂಡ ನಡೆದಿದೆ. ಭಾರತದ ನ್ಯಾಯದೇವತೆ ಆದೇಶದಂತೆ ನ್ಯಾಯಬದ್ಧವಾಗಿ ಮಂದಿರ ನಿರ್ಮಾಣವಾಗಿದೆ. ಇಂದು ಇಡೀ ದೇಶ ಇಂದು ರಾಮ ದೀಪಾವಳಿ ಆಚರಿಸುತ್ತಿದೆ. ದೇಶದ ಪ್ರತಿ ಮನೆಯಲ್ಲೂ ಇಂದು ಸಂಜೆ ಶ್ರೀರಾಮನ ಜ್ಯೋತಿ ಬೆಳಗಲಿದೆ. ಕಾಲಚಕ್ರ ಮತ್ತೆ ಬದಲಾವಣೆಯಾಗಿದೆ. ನನ್ನ 11 ದಿನಗಳ ಉಪವಾಸ ವ್ರತ ಶ್ರೀರಾಮನ ಮಂದಿರದಲ್ಲಿ ಅಂತ್ಯಗೊಳಿಸಿದ್ದೇನೆ. ಸಮುದ್ರದಿಂದ ಸರಯೂವರೆಗೆ ಯಾತ್ರೆಯ ಅವಕಾಶ ಸಿಕ್ಕಿದೆ. ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ. ಪ್ರತಿ ಯುಗದ ಜನರು ರಾಮನನ್ನು ಗೆಲ್ಲಿಸಿದ್ದಾರೆ. ರಾಮರಸ ನಮ್ಮ ಜೀವನದ ರೀತಿ, ಅದು ನಿರಂತರವಾದದ್ದು. ರಾಮಮಂದಿರ ನಿರ್ಮಾಣ ಕೇವಲ ವಿಜಯ ಅಲ್ಲ, ವಿನಯದಿಂದ ಕೂಡಿದೆ ಎಂದು ಮೋದಿ ಹೇಳಿದರು.

ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲು ನಾವು ಜೀವಂತವಾಗಿರುವುದೇ ಒಂದು ಸೌಭಾಗ್ಯ

ಈ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲು ನಾವು ಜೀವಂತವಾಗಿರುವುದೇ ಒಂದು ಸೌಭಾಗ್ಯ ಎಂದರು. ಸಾವಿರಾರು ವರ್ಷಗಳ ನಂತರವೂ ಜನರು ಈ ದಿನಾಂಕ, ಕ್ಷಣವನ್ನು ನೆನಪಿಸಿಕೊಳ್ಳುತ್ತಾರೆ. ಇದನ್ನು ನಾವು ನೋಡುತ್ತಿರುವುದು ರಾಮನ ಪರಮ ಆಶೀರ್ವಾದ” ಎಂದು ಮೋದಿ ಹೇಳಿದ್ದಾರೆ. ಪ್ರಭು ಶ್ರೀರಾಮನಲ್ಲಿ ಕ್ಷಮೆ ಕೋರಿದ ಪ್ರಧಾನಿ ಏನಾದರೂ ಲೋಪ ಸಂಭವಿಸಿದ್ದರಿಂದಲೇ ಈ ಹಂತವನ್ನು ತಲುಪಲು ತುಂಬಾ ಸಮಯ ತೆಗೆದುಕೊಂಡಿದ್ದಿರಬಹುದು  ಎಂದು ಹೇಳಿದರು.

ಇದನ್ನೂ ಓದಿ:ಪ್ರಾಣ ಪ್ರತಿಷ್ಠೆ ವಿಧಿವಿಧಾನ ನೆರವೇರಿದ ಬಳಿಕ ಬಾಲರಾಮನಿಗೆ ಸಾಷ್ಟಾಂಗವೆರಗಿದ ಪ್ರಧಾನಿ ನರೇಂದ್ರ ಮೋದಿ

“ರಾಮನ ಅಸ್ತಿತ್ವವನ್ನು ಪ್ರಶ್ನಿಸಲಾಗಿದೆ” ಎಂದು ಹೇಳಿದ ಪ್ರಧಾನಿ, “ಭಾರತದ ಸಂವಿಧಾನದಲ್ಲಿ, ಅದರ ಮೊದಲ ಪುಟದಲ್ಲಿ, ಶ್ರೀರಾಮನಿದ್ದಾನೆ. ಕಾನೂನಿನ ಘನತೆಯನ್ನು ಕಾಪಾಡಿದ್ದಕ್ಕಾಗಿ ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳುತ್ತೇನೆ”. ರಾಮಮಂದಿರ ನಿರ್ಮಾಣಕ್ಕೆ ಕೆಲವರು ಬೆಂಕಿ ಹಚ್ಚುತ್ತಾರೆ ಎಂದು ಎಚ್ಚರಿಸಿದ್ದರು. “ರಾಮನು ಬೆಂಕಿಯಲ್ಲ, ಅವನು ಶಕ್ತಿ. ರಾಮನು ವಿವಾದವಲ್ಲ, ಅವನು ಪರಿಹಾರ. ರಾಮನು ನಮ್ಮವನಲ್ಲ, ಅವನು ಎಲ್ಲರ ರಾಮ” ಎಂದಿದ್ದಾರೆ.

ಇಂದು, ನಾವು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಯನ್ನು ಮಾತ್ರವಲ್ ಭಾರತದ ಅಖಂಡ ಏಕತೆಯ ಪ್ರಾಣ ಪ್ರತಿಷ್ಠೆಯನ್ನು ಸಹ ನೋಡಿದ್ದೇವೆ. ಭವಿಷ್ಯದಲ್ಲಿ ದೇಶದ ಅಭಿವೃದ್ಧಿಯ ಕನಸು ಬಗ್ಗೆ ಹೇಳಿದ ಮೋದಿ, “ರಾಮನ ಮಂದಿರವನ್ನು ನಿರ್ಮಿಸಲಾಗಿದೆ. ಈಗ ಏನು? ಪ್ರತಿಯೊಬ್ಬ ನಾಗರಿಕನ ಪ್ರಜ್ಞೆಯು ದೇವ್ (ದೇವರು) ದೇಶ (ದೇಶ) ಮತ್ತು ರಾಮನಿಂದ ರಾಷ್ಟ್ರದವರೆಗೆ ವಿಸ್ತರಿಸಬೇಕು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Mon, 22 January 24