ಭಾರತದಾದ್ಯಂತ ರೈಲು ನಿಲ್ದಾಣಗಳಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನೇರ ಪ್ರಸಾರ

ದೇಶದಾದ್ಯಂತ ರೈಲು ನಿಲ್ದಾಣಗಳಲ್ಲಿ ಕನಿಷ್ಠ 9,000 ಸ್ಕ್ರೀನ್‌ಗಳು ಲಭ್ಯವಿವೆ.ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರಸಾರವನ್ನು ತೋರಿಸಲು ಈ ಪರದೆಗಳನ್ನು ಬಳಸಬಹುದು ಎಂದು ಸರ್ಕಾರಿ ಮೂಲಗಳು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಭಾರತದಾದ್ಯಂತ ರೈಲು ನಿಲ್ದಾಣಗಳಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನೇರ ಪ್ರಸಾರ
ಭಾರತೀಯ ರೈಲ್ವೆ
Follow us
|

Updated on: Jan 18, 2024 | 7:31 PM

ಮುಂಬೈ, ಜನವರಿ 18: ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯ (Ayodhya) ರಾಮ ಮಂದಿರದ (Ram Mandir) ಉದ್ಘಾಟನಾ ಸಮಾರಂಭವನ್ನು (ಪ್ರಾಣ ಪ್ರತಿಷ್ಠಾ) ದೇಶಾದ್ಯಂತ ರೈಲ್ವೆ ನಿಲ್ದಾಣಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ರೈಲ್ವೆ (Indian Railways) ಹೇಳಿದೆ. ದೇಶದಾದ್ಯಂತ ರೈಲು ನಿಲ್ದಾಣಗಳಲ್ಲಿ ಕನಿಷ್ಠ 9,000 ಸ್ಕ್ರೀನ್‌ಗಳು ಲಭ್ಯವಿವೆ.ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರಸಾರವನ್ನು ತೋರಿಸಲು ಈ ಪರದೆಗಳನ್ನು ಬಳಸಬಹುದು ಎಂದು ಸರ್ಕಾರಿ ಮೂಲಗಳು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಜನವರಿ 22 ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚಲಾಗುವುದು ಎಂದು ಕೇಂದ್ರ ಸರ್ಕಾರ ಗುರುವಾರ ಘೋಷಿಸಿತು. ಈ ಸಂಬಂಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಮಧ್ಯಾಹ್ನ 02:30 ರವರೆಗೆ ಅರ್ಧ ದಿನ ಮುಚ್ಚಿರುತ್ತದೆ.

“ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠಾವನ್ನು ಜನವರಿ 22, 2024 ರಂದು ಭಾರತದಾದ್ಯಂತ ಆಚರಿಸಲಾಗುವುದು. ಆಚರಣೆಯಲ್ಲಿ ನೌಕರರನ್ನು ಸಕ್ರಿಯಗೊಳಿಸಲು, ಜನವರಿ 22, 2024 ರಂದು 14:30 ಗಂಟೆಗಳವರೆಗೆ ಒಂದು ದಿನ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳನ್ನು ಅರ್ಧಕ್ಕೆ ಮುಚ್ಚಲು ನಿರ್ಧರಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಿದೆ

ಪ್ರಾಣ ಪ್ರತಿಷ್ಠಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ</h3

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ “ಅಭಿಜಿತ್ ಮುಹೂರ್ತ”ದಲ್ಲಿ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಸಮಾರಂಭದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ರಾಮಮಂದಿರ ಜ್ಞಾಪಕಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

121 ಆಚಾರ್ಯರು ಧಾರ್ಮಿಕ ವಿಧಿಗಳನ್ನು ನಡೆಸಲಿದ್ದಾರೆ. ಗಣೇಶ್ವರ ಶಾಸ್ತ್ರಿ ದ್ರಾವಿಡ್ ಅವರು ಅನುಷ್ಠಾನದ ಎಲ್ಲಾ ಪ್ರಕ್ರಿಯೆಗಳ ಮೇಲ್ವಿಚಾರಣೆ, ಸಮನ್ವಯ, ನಿರೂಪಣೆ ಮತ್ತು ನಿರ್ದೇಶನವನ್ನು ಮಾಡಲಿದ್ದಾರೆ. ಪ್ರಧಾನ ಪುರೋಹಿತರಾಗಿ ಕಾಶಿಯ ಲಕ್ಷ್ಮೀಕಾಂತ ಮಥುರಾನಾಥ ದೀಕ್ಷಿತರು ಇರಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ