AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ದೇಣಿಗೆ ಹಗರಣಕ್ಕೆ ಭಾರಿ ತಿರುವು, ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ, ಏನೇನಿದೆ?

Ayodhya Ram Mandir: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ 15 ಪುಟಗಳ ವರದಿ ಸಲ್ಲಿಸಿದೆ. ಈ ವರದಿಯು ದೇಣಿಗೆ ಸಂಗ್ರಹ ಮತ್ತು ನಿರ್ವಹಣೆಯಲ್ಲಿ ವ್ಯಾಪಕ ಅಕ್ರಮಗಳನ್ನು ಬಯಲಿಗೆಳೆದಿದೆ. ಚಿನ್ನ, ಬೆಳ್ಳಿಗೆ ದಾಖಲೆಗಳಿಲ್ಲದಿರುವುದು, ಭಕ್ತರ ಸಂಖ್ಯೆ ಹೆಚ್ಚಿದ್ದರೂ ಆದಾಯ ಕುಸಿದಿರುವುದು, ಹಾಗೂ ಚಂಪತ್ ರಾಯ್ ಸಮಿತಿಯ ನಿರ್ಲಕ್ಷ್ಯ ಪ್ರಮುಖ ಆರೋಪಗಳು. ಹಲವಾರು ಉದ್ಯೋಗಿಗಳ ಆಸ್ತಿ ದಿಢೀರ್ ಹೆಚ್ಚಳವೂ ತನಿಖೆಗೆ ಒಳಪಟ್ಟಿದೆ. ಕಟ್ಟುನಿಟ್ಟಿನ ಕ್ರಮಗಳಿಗೆ ಎಸ್‌ಐಟಿ ಶಿಫಾರಸು ಮಾಡಿದೆ.

ರಾಮ ಮಂದಿರ ದೇಣಿಗೆ ಹಗರಣಕ್ಕೆ ಭಾರಿ ತಿರುವು, ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ, ಏನೇನಿದೆ?
ರಾಮ ಮಂದಿರ
ನಯನಾ ರಾಜೀವ್
|

Updated on: Jun 24, 2026 | 11:14 AM

Share

ಅಯೋಧ್ಯೆ, ಜೂನ್ 24: ಅಯೋಧ್ಯೆಯ ಶ್ರೀ ರಾಮ ಮಂದಿರ(Ram Mandir)ದ ಕಾಣಿಕೆ ಹಣದ ದುರುಪಯೋಗ ಮತ್ತು ಕಳ್ಳತನದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತನ್ನ 15 ಪುಟಗಳ ಮೊದಲ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಈ ವರದಿಯಲ್ಲಿ ದೇವಸ್ಥಾನದ ಇಡೀ ದೇಣಿಗೆ ವ್ಯವಸ್ಥೆಯಲ್ಲಿ ನಡೆದಿರುವ ಭೀಕರ ಅಕ್ರಮಗಳನ್ನು ಬಯಲಿಗೆಳೆಯಲಾಗಿದ್ದು, ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳ ನಡೆ ಈಗ ತೀವ್ರ ಸಂಶಯದ ಸುಳಿಗೆ ಸಿಲುಕಿದೆ.

ಎಸ್‌ಐಟಿ ಪತ್ತೆಹಚ್ಚಿದ ದೋಷಗಳು ಚಿನ್ನ-ಬೆಳ್ಳಿಗೆ ದಾಖಲೆಯೇ ಇಲ್ಲ: ದೇವಸ್ಥಾನದ ಬ್ಯಾಂಕ್ ಖಾತೆಗಳ ಪ್ರಕಾರ, ಪ್ರತಿ ತಿಂಗಳು ಸರಾಸರಿ 25 ಲಕ್ಷ ಭಕ್ತರು ಹಾಗೂ ಕುಂಭಮೇಳದ ಸಮಯದಲ್ಲಿ ಬರೋಬ್ಬರಿ 1 ಕೋಟಿ ಭಕ್ತರು ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಆದರೆ, ಭಕ್ತರು ನೀಡಿದ ಧಾನ್ಯ, ಎಣ್ಣೆ, ತುಪ್ಪ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳಿಗೆ ಟ್ರಸ್ಟ್‌ನಲ್ಲಿ ಯಾವುದೇ ನಿರ್ದಿಷ್ಟ ರಶೀದಿ ಅಥವಾ ಪುರಾವೆಗಳೇ ಸಿಕ್ಕಿಲ್ಲ.

ಹೆಚ್ಚಿದ ಭಕ್ತರು, ಕುಸಿದ ಆದಾಯ: ಹಲವಾರು ತಿಂಗಳುಗಳಲ್ಲಿ ಮಂದಿರಕ್ಕೆ ಬರುವ ಭಕ್ತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಿದ್ದರೂ, ಬ್ಯಾಂಕಿಗೆ ಜಮೆಯಾದ ಕಾಣಿಕೆ ಹಣ ಮಾತ್ರ ತೀವ್ರವಾಗಿ ಕುಸಿದಿದೆ. ಈ ಬಗ್ಗೆ ಪ್ರಶ್ನಿಸಿದಾಗ, ಆ ತಿಂಗಳುಗಳಲ್ಲಿ ಭಕ್ತರು ನೋಟುಗಳಿಗಿಂತ ನಾಣ್ಯಗಳನ್ನೇ ಹೆಚ್ಚು ಹಾಕಿದ್ದರು ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡಿದ್ದಾರೆ.

ದೇವಸ್ಥಾನದ ಅನೇಕ ಉದ್ಯೋಗಿಗಳು ಯಾವುದೇ ಲಿಖಿತ ಆದೇಶ ಅಥವಾ ಅಧಿಕೃತ ನೇಮಕಾತಿ ಪತ್ರಗಳಿಲ್ಲದೆಯೇ ಹಣಕಾಸಿನ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವುದು ಪತ್ತೆಯಾಗಿದೆ.

ಮತ್ತಷ್ಟು ಓದಿ: ರಾಮ ಮಂದಿರ ದೇಣಿಗೆಯಲ್ಲಿ ಭಾರಿ ಲೋಪ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮತ್ತಷ್ಟು ಆಘಾತಕಾರಿ ಸತ್ಯಗಳು ಬಯಲು

ಚಂಪತ್ ರಾಯ್ ಸಮಿತಿಯ ಭಾರಿ ನಿರ್ಲಕ್ಷ್ಯ ಕಾಣಿಕೆ ಎಣಿಕೆ ಮಾಡುವ ಮತ್ತು ದೇಣಿಗೆಯನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿ ಹೊತ್ತಿದ್ದ ಸಮಿತಿಯು ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಎಂದು ವರದಿ ಹೇಳಿದೆ. ಟ್ರಸ್ಟ್‌ನ ಅತ್ಯುನ್ನತ ಹುದ್ದೆಯಲ್ಲಿರುವ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ನೌಕರರ ಪಾತ್ರ ಈ ಹಗರಣದಲ್ಲಿ ಶಂಕಾಸ್ಪದವಾಗಿದೆ ಎಂದು ಎಸ್‌ಐಟಿ ನೇರವಾಗಿ ಬೆರಳು ತೋರಿಸಿದೆ.

ಎಸ್‌ಐಟಿ ಈಗಾಗಲೇ 60 ಕ್ಕೂ ಹೆಚ್ಚು ಜನರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ದೇವಸ್ಥಾನದಲ್ಲಿ ಕೆಲಸ ಮಾಡುವ ಹಲವಾರು ಸಾಮಾನ್ಯ ಉದ್ಯೋಗಿಗಳ ಆಸ್ತಿ ಮತ್ತು ವೈಯಕ್ತಿಕ ಆದಾಯ ಕಳೆದ 5 ವರ್ಷಗಳಲ್ಲಿ ದಿಢೀರನೆ ಹಲವು ಪಟ್ಟು ವೇಗವಾಗಿ ಹೆಚ್ಚಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಮುಂದಿನ ನಡೆ: ಟ್ರಸ್ಟ್‌ನ ಆಡಳಿತವನ್ನು ಬಲಪಡಿಸಲು ಹಲವು ಕಟ್ಟುನಿಟ್ಟಿನ ಸಲಹೆಗಳನ್ನು ನೀಡಿರುವ ಎಸ್‌ಐಟಿ, ಕೇವಲ ಒಂದು ವಾರದಲ್ಲಿ ಪ್ರಾಥಮಿಕ ತನಿಖಾ ವರದಿಯನ್ನು ಪೂರ್ಣಗೊಳಿಸಿದ್ದು, ಮುಂದಿನ 15 ದಿನಗಳಲ್ಲಿ ಇಡೀ ಹಗರಣದ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ