Ram Mandir Inauguration:ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಗೃಹ ಸಚಿವ ಅಮಿತ್ ಶಾ, ಕಾರಣವೇನು?
ಅಯೋಧ್ಯೆಯಲ್ಲಿ ಇಂದು ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಯೋಧ್ಯೆ(Ayodhya)ಯಲ್ಲಿ ಇಂದು ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ(Amit Shah) ಪಾಲ್ಗೊಳ್ಳುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಈ ಪಟ್ಟಿಯಲ್ಲಿ ಹಲವು ಬಿಜೆಪಿ ನಾಯಕರು ಕೂಡ ಇದ್ದಾರೆ. ಬಿಜೆಪಿಯ ಹಿರಿಯ ಹಲವು ನಾಯಕರು ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ನೇರಪ್ರಸಾರವನ್ನು ವಿವಿಧ ದೇವಸ್ಥಾನಗಳಿಂದ ವೀಕ್ಷಿಸಲಿದ್ದಾರೆ.
ಈ ಪಟ್ಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರೂ ಕೂಡ ಇದೆ. ಅಮಿತ್ ಶಾ ಅವರು ಕುಟುಂಬದೊಂದಿಗೆ ಬಿರ್ಲಾ ಮಂದಿರದಲ್ಲಿ ಉಪಸ್ಥಿತರಿರಲಿದ್ದು ಸುಮಾರು ಮೂರು ಗಂಟೆಗಳ ಕಾಲ ಲೈವ್ ಸ್ಟ್ರೀಮಿಂಗ್ ವೀಕ್ಷಿಸಲಿದ್ದಾರೆ. ದೇವಾಲಯದ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ.
ಮತ್ತಷ್ಟು ಓದಿ: Ram Mandir Inauguration: ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ
ವರದಿಗಳ ಪ್ರಕಾರ ಈ ವರ್ಷದ ಅಂತ್ಯದ ವೇಳೆಗೆ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಆರತಿಯಲ್ಲಿ ಪಾಲ್ಗೊಳ್ಳುವ ಭಕ್ತರು ಒಂದು ವಿಷಯವನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನಿಂದ ಮಾಡಿದ ಪಾಸ್ ಅನ್ನು ಭಕ್ತರು ಪಡೆಯಬಹುದು. ಈ ಪಾಸ್ ಪಡೆದ ಬಳಿಕವೇ ಆರತಿಯಲ್ಲಿ ಭಾಗವಹಿಸಬಹುದು, ಐಡಿ ಇದ್ದರೆ ಮಾತ್ರ ಪಾಸ್ ನೀಡಲಾಗುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:29 am, Mon, 22 January 24