Ram Mandir Inauguration:ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಗೃಹ ಸಚಿವ ಅಮಿತ್ ಶಾ, ಕಾರಣವೇನು?

ಅಯೋಧ್ಯೆಯಲ್ಲಿ ಇಂದು ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

Ram Mandir Inauguration:ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಗೃಹ ಸಚಿವ ಅಮಿತ್ ಶಾ, ಕಾರಣವೇನು?
ಅಮಿತ್ ಶಾ
Image Credit source: The Economic Times

Updated on: Jan 22, 2024 | 10:37 AM

ಅಯೋಧ್ಯೆ(Ayodhya)ಯಲ್ಲಿ ಇಂದು ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ(Amit Shah) ಪಾಲ್ಗೊಳ್ಳುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಈ ಪಟ್ಟಿಯಲ್ಲಿ ಹಲವು ಬಿಜೆಪಿ ನಾಯಕರು ಕೂಡ ಇದ್ದಾರೆ. ಬಿಜೆಪಿಯ ಹಿರಿಯ ಹಲವು ನಾಯಕರು ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ನೇರಪ್ರಸಾರವನ್ನು ವಿವಿಧ ದೇವಸ್ಥಾನಗಳಿಂದ ವೀಕ್ಷಿಸಲಿದ್ದಾರೆ.

ಈ ಪಟ್ಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರೂ ಕೂಡ ಇದೆ. ಅಮಿತ್ ಶಾ ಅವರು ಕುಟುಂಬದೊಂದಿಗೆ ಬಿರ್ಲಾ ಮಂದಿರದಲ್ಲಿ ಉಪಸ್ಥಿತರಿರಲಿದ್ದು ಸುಮಾರು ಮೂರು ಗಂಟೆಗಳ ಕಾಲ ಲೈವ್ ಸ್ಟ್ರೀಮಿಂಗ್ ವೀಕ್ಷಿಸಲಿದ್ದಾರೆ.
ದೇವಾಲಯದ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ.

ಮತ್ತಷ್ಟು ಓದಿ: Ram Mandir Inauguration: ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ

ವರದಿಗಳ ಪ್ರಕಾರ ಈ ವರ್ಷದ ಅಂತ್ಯದ ವೇಳೆಗೆ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಆರತಿಯಲ್ಲಿ ಪಾಲ್ಗೊಳ್ಳುವ ಭಕ್ತರು ಒಂದು ವಿಷಯವನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನಿಂದ ಮಾಡಿದ ಪಾಸ್​ ಅನ್ನು ಭಕ್ತರು ಪಡೆಯಬಹುದು. ಈ ಪಾಸ್ ಪಡೆದ ಬಳಿಕವೇ ಆರತಿಯಲ್ಲಿ ಭಾಗವಹಿಸಬಹುದು, ಐಡಿ ಇದ್ದರೆ ಮಾತ್ರ ಪಾಸ್​ ನೀಡಲಾಗುತ್ತದೆ.

 

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:29 am, Mon, 22 January 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us