Ram Mandir Inauguration: ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ
ಅಯೋಧ್ಯೆ(Ayodhya)ಯಲ್ಲಿ ಇಂದು ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ(LK Advani) ಪಾಲ್ಗೊಳ್ಳುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಶೀತ ವಾತಾವರಣವಿರುವ ಕಾರಣ 96 ವರ್ಷದ ನಾಯಕ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಹಿರಿಯ ನಾಯಕರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಈ ಮಹಾ ಕಾರ್ಯಕ್ರಮಕ್ಕೆ ಹಾಜರಾಗದಂತೆ ಈ ಹಿಂದೆ ವಿನಂತಿಸಲಾಗಿತ್ತು.
ಅಯೋಧ್ಯೆ(Ayodhya)ಯಲ್ಲಿ ಇಂದು ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ(LK Advani) ಪಾಲ್ಗೊಳ್ಳುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಶೀತ ವಾತಾವರಣವಿರುವ ಕಾರಣ 96 ವರ್ಷದ ನಾಯಕ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಹಿರಿಯ ನಾಯಕರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಈ ಮಹಾ ಕಾರ್ಯಕ್ರಮಕ್ಕೆ ಹಾಜರಾಗದಂತೆ ಈ ಹಿಂದೆ ವಿನಂತಿಸಲಾಗಿತ್ತು.
ಅಡ್ವಾಣಿಯವರೊಂದಿಗೆ ರಾಮಮಂದಿರ ಚಳವಳಿಯ ನೇತೃತ್ವ ವಹಿಸಿದ್ದ ಮುರಳಿ ಮನೋಹರ್ ಜೋಶಿ ಅವರನ್ನೂ ಸಮಾರಂಭದಿಂದ ಹೊರಗುಳಿಯುವಂತೆ ಕೇಳಲಾಯಿತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ (ರಾಮ ಮಂದಿರ ಟ್ರಸ್ಟ್) ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಅಡ್ವಾಣಿ ಮತ್ತು ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ವಿನಂತಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಇಂದು ಬಹು ನಿರೀಕ್ಷಿತ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಬೃಹತ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ದೇಶಾದ್ಯಂತದ ಸಾವಿರಾರು ದಾರ್ಶನಿಕರು ಸೇರಿದಂತೆ ಎಲ್ಲಾ ವರ್ಗಗಳ 7,000 ಕ್ಕೂ ಹೆಚ್ಚು ಅತಿಥಿಗಳನ್ನು ಪವಿತ್ರ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಮತ್ತಷ್ಟು ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಗೈರಾಗುವ ಸಾಧ್ಯತೆ
ಆಹ್ವಾನಿತರಲ್ಲಿ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಬಿಗ್ಬಿ ಅಮಿತಾಭ್ ಬಚ್ಚನ್, ಉದ್ಯಮಿಗಳಾದ ಅನಿಲ್ ಅಂಬಾನಿ, ಗೌತಮ್ ಅದಾನಿ ಕೂಡ ಸೇರಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಕೃಷ್ಣ ಗೋಪಾಲ್ ಮತ್ತು ರಾಮ್ ಲಾಲ್ ಅವರು ಅಲೋಕ್ ಕುಮಾರ್ ಅವರೊಂದಿಗೆ ಎಲ್‌ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಆಹ್ವಾನ ನೀಡಿದ್ದರು.
ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಎಲ್‌ಕೆ ಅಡ್ವಾಣಿ ಭೇಟಿ ನೀಡುವ ಸಂದರ್ಭದಲ್ಲಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದರು. ಆದರೆ ಈಗ ಇಬ್ಬರು ಬರುವುದು ಅನುಮಾನ ಎಂದು ಹೇಳಲಾಗುತ್ತಿದೆ.
ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ಕಾಂಗ್ರೆಸ್ ನಿರಾಕರಿಸಿದೆ. ಕಾಂಗ್ರೆಸ್‌ನ ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಸಮಾರಂಭದ ಆಹ್ವಾನ ತಿರಸ್ಕರಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ