ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧಿಸಿದ ಭಯೋತ್ಪಾದನ ನಿಗ್ರಹ ದಳ
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರತಿಯೊಂದು ಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಗುರುವಾರ, ಜನವರಿ 19 ರಂದು, ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಅಯೋಧ್ಯೆ(Ayodhya)ಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರ(Ram Mandir) ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರತಿಯೊಂದು ಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಗುರುವಾರ, ಜನವರಿ 19 ರಂದು, ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಮಾತನಾಡಿ, ಗುರುವಾರ ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಶಂಕಿತ ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಜಿಪಿ ಕುಮಾರ್ ಹೇಳಿದ್ದಾರೆ.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಗಳ ಮೇರೆಗೆ ನಡೆಸುತ್ತಿರುವ ತಪಾಸಣೆ ಅಭಿಯಾನದ ಭಾಗವಾಗಿ, ಯುಪಿ-ಎಟಿಎಸ್ ಅಯೋಧ್ಯೆ ಜಿಲ್ಲೆಯ ಮೂವರು ಅನುಮಾನಾಸ್ಪದ ಜನರನ್ನು ಬಂಧಿಸಿದೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ.
ಮತ್ತಷ್ಟು ಓದಿ: ರಾಮಮಂದಿರ ಜ್ಞಾಪಕಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಇದುವರೆಗೂ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬಹಿರಂಗವಾಗಿಲ್ಲ. ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ಕೆಲವು ದಿನಗಳ ಮೊದಲು ಈ ಘಟನೆ ನಡೆದಿದೆ. ಉತ್ತರ ಪ್ರದೇಶ ಸರ್ಕಾರವು ಡ್ರೋನ್‌ಗಳ ಮೂಲಕ ಕಣ್ಗಾವಲು ಹೆಚ್ಚಿಸಿದೆ. ರಾಜ್ಯ ಸರ್ಕಾರವು ನಗರದಾದ್ಯಂತ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು ಎನ್ವಿಡಿ ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ.
ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಗಣ್ಯರು ಹಾಗೂ ಸಮಾಜದ ಎಲ್ಲ ವರ್ಗದ ಜನರು ಪಾಲ್ಗೊಳ್ಳಲಿದ್ದಾರೆ. ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಾಗಿದ್ದಾರೆ. ವಾರಾಣಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಜನವರಿ 22 ರಂದು ರಾಮಲಲ್ಲಾ ಅವರ ಮಹಾಮಸ್ತಕಾಭಿಷೇಕದ ಮುಖ್ಯ ವಿಧಿವಿಧಾನವನ್ನು ನೆರವೇರಿಸಲಿದ್ದಾರೆ.
ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯಲ್ಲಿ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತದೆ. ಸಮಾರಂಭದ ದಿನಾಂಕ ಹತ್ತಿರವಾಗುತ್ತಿದ್ದಂತೆ ಅಯೋಧ್ಯೆಯಲ್ಲಿ ರಾಮಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳಿಗೂ ಹೆಚ್ಚು ಕಾಲ ಕಾದಿದ್ದರಿಂದ ರಾಮ ಭಕ್ತರು ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಯಸುತ್ತಿದ್ದಾರೆ. ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆವಹಿಸಲಾಗುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ