ಪ್ರಧಾನಿ ಮೋದಿ ರಾಮ ಮಂದಿರ ಪ್ರಾಣಪ್ರತಿಷ್ಠೆ ಮಾಡುತ್ತಿದ್ದರೆ, ವಿರೋಧ ಪಕ್ಷಗಳ ನಾಯಕರು ಎಲ್ಲಿದ್ರು?

ಅಯೋಧ್ಯೆ(Ayodhya)ಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ನೆರವೇರಿಸಿದ್ದಾರೆ. ಈ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ್ದ ವಿರೋಧ ಪಕ್ಷಗಳ ನಾಯಕರು ಹಾಗಾದರೆ ಎಲ್ಲಿದ್ದರು ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.

ಪ್ರಧಾನಿ ಮೋದಿ ರಾಮ ಮಂದಿರ ಪ್ರಾಣಪ್ರತಿಷ್ಠೆ ಮಾಡುತ್ತಿದ್ದರೆ, ವಿರೋಧ ಪಕ್ಷಗಳ ನಾಯಕರು ಎಲ್ಲಿದ್ರು?
ರಾಮ ಮಂದಿರImage Credit source: NDTV
Follow us
ನಯನಾ ರಾಜೀವ್
|

Updated on: Jan 22, 2024 | 2:17 PM

ಅಯೋಧ್ಯೆ(Ayodhya)ಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ನೆರವೇರಿಸಿದ್ದಾರೆ. ಈ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ್ದ ವಿರೋಧ ಪಕ್ಷಗಳ ನಾಯಕರು ಹಾಗಾದರೆ ಎಲ್ಲಿದ್ದರು ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.

ವಿರೋಧಪಕ್ಷ ನಾಯಕರು ಈ ಕಾರ್ಯಕ್ರಮವನ್ನು ಬಿಜೆಪಿ-ಆರ್​ಎಸ್​ಎಸ್​ ಕಾರ್ಯಕ್ರಮ ಎಂದು ಬಣ್ಣಿಸಿದ್ದರು. ಮುಂಬರುವ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮತಗಳನ್ನು ಸೆಳೆಯುವ ಗುರಿ ಹೊಂದಿದ್ದಾರೆ ಎಂದು ಹೇಳಿದ್ದರು.

ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭದಲ್ಲಿ 7,000 ಕ್ಕೂ ಹೆಚ್ಚು ಜನರು ಸೇರಿದ್ದರು. ರಾಮಮಂದಿರ ಟ್ರಸ್ಟ್ ಪ್ರತಿಪಕ್ಷದ ನಾಯಕರಿಗೆ ಆಹ್ವಾನಗಳನ್ನು ಕಳುಹಿಸಿತ್ತು.ದರೆ ಅವರಲ್ಲಿ ಹೆಚ್ಚಿನವರು ಕಾರ್ಯಕ್ರಮವನ್ನು ಬಿಟ್ಟುಬಿಡಲು ನಿರ್ಧರಿಸಿದರು. ಕೆಲವರು ಇದೊಂದು ರಾಜಕೀಯ ಘಟನೆ ಎಂದು ಹೇಳಿದರೆ, ಇನ್ನು ಕೆಲವರು ನಂತರ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಹೇಳಿದ್ದರು.

ಮತ್ತಷ್ಟು ಓದಿ: Ram Mandir Inauguration: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ರಾಮ

ಅಸ್ಸಾಂನಲ್ಲಿದ್ದಾರೆ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ನಿರತರಾಗಿದ್ದಾರೆ. ಕಳೆದ ವಾರ ಮಣಿಪುರದಿಂದ ಯಾತ್ರೆ ಆರಂಭವಾಗಿದೆ. ರಾಜ್ಯದ ಸಮಾಜ ಸುಧಾರಕ ಸಂತ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್ ಜಿಲ್ಲೆಯ ಬಟಾದ್ರವ ಥಾನ್‌ಗೆ ರಾಹುಲ್ ಗಾಂಧಿ ಇಂದು ಭೇಟಿ ನೀಡಬೇಕಿತ್ತು ಆದರೆ ಅಧಿಕಾರಿಗಳು ಪ್ರವೇಶಿಸಲು ಅವಕಾಶ ನೀಡಲಿಲ್ಲ.

ರಾಮಮಂದಿರ ಉದ್ಘಾಟನೆಯಿಂದಾಗಿ ದೇಗುಲಕ್ಕೆ ಭಾರೀ ಜನಸಂದಣಿಯ ನಿರೀಕ್ಷೆಯಿರುವುದರಿಂದ ಅವರನ್ನು ಸ್ವಾಗತಿಸಲು ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಸರ್ಕಾರದ ಒತ್ತಡದಿಂದಾಗಿ ರಾಹುಲ್ ಗಾಂಧಿ ಅವರಿಗೆ ದೇಗುಲ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿ ಸರ್ವಧರ್ಮ ಮೆರವಣಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಂದು ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಸರ್ವಧರ್ಮ ಮೆರವಣಿಗೆ ಆಯೋಜಿಸಿದ್ದಾರೆ. ಕೋಲ್ಕತ್ತಾದ ಕಾಳಿಘಾಟ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ರ್ಯಾಲಿಯನ್ನು ನಡೆಸುವುದಾಗಿ ಬ್ಯಾನರ್ಜಿ ಹೇಳಿದ್ದಾರೆ. ಎಲ್ಲ ಧರ್ಮದ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ರಾಮ ಮಂದಿರದ ಶಂಕುಸ್ಥಾಪನೆಯನ್ನು ಬಿಜೆಪಿ ಚುನಾವಣಾ ಗಿಮಿಕ್ ಆಗಿ ಬಳಸುತ್ತಿದೆ ಎಂದು ಟಿಎಂಸಿ ವರಿಷ್ಠರು ಆರೋಪಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಶೋಭಾ ಯಾತ್ರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶೋಭಾ ಯಾತ್ರೆ ಆಯೋಜಿಸಿದ್ದಾರೆ, ಜತೆಗೆ ಸುಂದರಕಾಂಡ ಪ್ರವಚನ, ಆರತಿಯನ್ನೂ ಯೋಜಿಸಿದ್ದಾರೆ.

ಉದ್ಧವ್ ಠಾಕ್ರೆ ದೇವಸ್ಥಾನದಲ್ಲಿ ಪ್ರಾರ್ಥನೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಾಸಿಕ್​ನ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗೋದಾವರಿ ನದಿಯ ದಡದಲ್ಲಿ ಮಹಾ ಆರತಿ ಮಾಡಲಿದ್ದಾರೆ.

ಅಖಿಲೇಶ್​ ಯಾದವ್ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಪಡೆದ ಅಖಿಲೇಶ್ ಯಾದವ್, ಸಮಾಜವಾದಿ ನಾಯಕ ಜನೇಶ್ವರ್ ಮಿಶ್ರಾ ಅವರಿಗೆ ಗೌರವ ಸಲ್ಲಿಸಲು ಯೋಜಿಸಿದ್ದರು. ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದ ಬಳಿಕ ಕುಟುಂಬ ಸಮೇತ ಅಯೋಧ್ಯೆಯ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಅವರು ಹೇಳಿದ್ದಾರೆ.

ಶರದ್ ಯಾದವ್ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮತ್ತು ಅವರ ಕುಟುಂಬ ನಂತರದ ದಿನಗಳಲ್ಲಿ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ