ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠೆ ಕಾಂಗ್ರೆಸ್‌ನಲ್ಲಿ ನಷ್ಟದ ಭಾವನೆ ಮೂಡಿಸುತ್ತಿದೆ: ಧರ್ಮೇಂದ್ರ ಪ್ರಧಾನ್

ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಭವ್ಯವಾದ ದೇವಾಲಯವು ಭಾರತದ ಜನರ ಬಹುಕಾಲದ ಬಯಕೆಯಾಗಿತ್ತು. ಪ್ರಾಣ ಪ್ರತಿಷ್ಠೆಯ ದಿನಾಂಕವು ದೇಶಾದ್ಯಂತ ದೈವಿಕತೆ, ಆನಂದ ಮತ್ತು ಸಂತೋಷದ ಅಲೆಗಳನ್ನು ಸೃಷ್ಟಿಸುತ್ತಿದ್ದರೆ, ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ನಷ್ಟ, ಕತ್ತಲೆ ಮತ್ತು ಭಯದ ಭಾವನೆಯನ್ನು ಸೃಷ್ಟಿಸುತ್ತಿದೆ ಎಂದ ಧರ್ಮೇಂದ್ರ ಪ್ರಧಾನ್

ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠೆ ಕಾಂಗ್ರೆಸ್‌ನಲ್ಲಿ ನಷ್ಟದ ಭಾವನೆ ಮೂಡಿಸುತ್ತಿದೆ: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
Follow us
| Updated By: Digi Tech Desk

Updated on:Dec 28, 2023 | 11:10 AM

ದೆಹಲಿ ಡಿಸೆಂಬರ್ 27: ರಾಮಮಂದಿರದ (Ram mandir) ಬಗ್ಗೆ ಸ್ಯಾಮ್ ಪಿತ್ರೋಡಾ (Sam Pitroda) ಅವರು ಪ್ರಶ್ನೆಗಳನ್ನು ಎತ್ತಿರುವ ನಂತರ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan )ಅವರು ಬುಧವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾಂಗ್ರೆಸ್ ನಲ್ಲಿ ನಷ್ಟ, ಕತ್ತಲೆ ಮತ್ತು ಭಯದ ಭಾವನೆಯನ್ನು ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ. ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಪಿತ್ರೋಡಾ ಅವರು, ಪ್ರಧಾನಿಯಿಂದಲೇ ದೇಶದಲ್ಲಿ ಒಳ್ಳೆಯದಾಗುತ್ತದೆ ಎಂಬ ಈ ವ್ಯಾಪಕವಾದ ಭಾವನೆಯಿಂದ ನಾನು ಚಿಂತಿತನಾಗಿದ್ದೇನೆ. “ನಾವು ತಪ್ಪು ದಿಕ್ಕಿನಲ್ಲಿದ್ದೇವೆ ಎಂಬ ಸಂಕೇತಗಳು ನನಗೆ ಸಿಗುತ್ತಿವೆ. ಮತ್ತು ಇಡೀ ರಾಷ್ಟ್ರವು ರಾಮ ಮಂದಿರ ಮತ್ತು ರಾಮ ಜನ್ಮಭೂಮಿ, ದಿಯಾ ಜಲವೋ ಎಂದು ಹೇಳುವಾಗ ಅದು ನನ್ನನ್ನು ಕಾಡುತ್ತದೆ ನನಗೆ, ಧರ್ಮ ಎಂಬುದು ತುಂಬಾ ವೈಯಕ್ತಿಕ ಮತ್ತು ರಾಷ್ಟ್ರೀಯ ವಿಷಯಗಳೆಂದರೆ ಶಿಕ್ಷಣ, ಉದ್ಯೋಗ, ಬೆಳವಣಿಗೆ, ಆರ್ಥಿಕತೆ, ಹಣದುಬ್ಬರ, ಆರೋಗ್ಯ, ಪರಿಸರ, ಮಾಲಿನ್ಯ. ಆದರೆ ಅದರ ಬಗ್ಗೆ ಯಾರೂ ಮಾತನಾಡುವುದಿಲ್ಲ ಎಂದು ಹೇಳಿದ್ದರು.

ಇದಕ್ಕೆ ಎಕ್ಸ್ ಪೋಸ್ಟ್ ನಲ್ಲಿ ಪ್ರತಿಕ್ರಿಯಿಸಿರುವ ಧರ್ಮೇಂದ್ರ ಪ್ರಧಾನ್ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಭವ್ಯವಾದ ದೇವಾಲಯವು ಭಾರತದ ಜನರ ಬಹುಕಾಲದ ಬಯಕೆಯಾಗಿತ್ತು. ಪ್ರಾಣ ಪ್ರತಿಷ್ಠೆಯ ದಿನಾಂಕವು ದೇಶಾದ್ಯಂತ ದೈವಿಕತೆ, ಆನಂದ ಮತ್ತು ಸಂತೋಷದ ಅಲೆಗಳನ್ನು ಸೃಷ್ಟಿಸುತ್ತಿದ್ದರೆ, ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ನಷ್ಟ, ಕತ್ತಲೆ ಮತ್ತು ಭಯದ ಭಾವನೆಯನ್ನು ಸೃಷ್ಟಿಸುತ್ತಿದೆ ಎಂದಿದ್ದಾರೆ.

ರಾಮ ಮಂದಿರದ ಬಗ್ಗೆ ಸ್ಯಾಮ್ ಪಿತ್ರೋಡಾ ಅವರ ಎದೆಯುರಿ ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಭಗವಾನ್ ರಾಮ ಮತ್ತು ಹಿಂದೂಗಳ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ದೀರ್ಘಕಾಲದ ಅಲರ್ಜಿಯನ್ನು ಪ್ರತಿಬಿಂಬಿಸುತ್ತದೆ. ಅಂತಹ ಜನರು ಆಂತರಿಕ ವಲಯದಲ್ಲಿದ್ದು, ಭಾರತದ ಆತ್ಮ, ಮನಸ್ಸು ಮತ್ತು ಮನಸ್ಥಿತಿಯೊಂದಿಗೆ ಕಾಂಗ್ರೆಸ್ ಏಕೆ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ ಎಂಬುದು ಗೊತ್ತಿಲ್ಲದ ಸಂಗತಿಯೇನಲ್ಲ ಎಂದು ಪ್ರಧಾನ್ ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರು ANI ಗೆ ನೀಡಿದ ಸಂದರ್ಶನದಲ್ಲಿ ರಾಮಮಂದಿರದ ಬಗ್ಗೆ ಪ್ರಶ್ನೆಯನ್ನು ಎತ್ತಿದ್ದು “ರಾಮ ಮಂದಿರವು ನಿಜವಾದ ಸಮಸ್ಯೆಯೇ ಅಥವಾ ನಿರುದ್ಯೋಗ ಮತ್ತು ಹಣದುಬ್ಬರವೇ ನಿಜವಾದ ಸಮಸ್ಯೆಯೇ ಎಂದು ಕೇಳಿದ್ದರು.” “ನನಗೆ ಯಾವುದೇ ಧರ್ಮದ ಸಮಸ್ಯೆ ಇಲ್ಲ, ಒಮ್ಮೆ ದೇವಸ್ಥಾನಕ್ಕೆ ಹೋಗುವುದು ಸರಿ, ಆದರೆ ನೀವು ಅದನ್ನು ಮುಖ್ಯ ವೇದಿಕೆಯನ್ನಾಗಿ ಮಾಡಲು ಸಾಧ್ಯವಿಲ್ಲ, 40 ರಷ್ಟು ಜನರು ಬಿಜೆಪಿಗೆ ಮತ ಹಾಕಿದ್ದಾರೆ ಮತ್ತು 60 ರಷ್ಟು ಜನರು ಬಿಜೆಪಿಗೆ ಮತ ಹಾಕಿಲ್ಲ. ಅವರು ಪ್ರತಿಯೊಬ್ಬರ ಪ್ರಧಾನ ಮಂತ್ರಿ ಮತ್ತು ಪಕ್ಷದ ಪ್ರಧಾನಿಯಲ್ಲ ಮತ್ತು ಇದು ಭಾರತದ ಜನರು ಬಯಸಿದ ಸಂದೇಶವಾಗಿದೆ.

ಇದನ್ನೂ ಓದಿ: ಪ್ರಧಾನಿ ಕಚೇರಿಗೆ ಭೇಟಿ ನೀಡಿದ ಮಕ್ಕಳು; ವಿಡಿಯೊ ಹಂಚಿಕೊಂಡ ನರೇಂದ್ರ ಮೋದಿ

ಉದ್ಯೋಗದ ಬಗ್ಗೆ ಮಾತನಾಡಿ, ಹಣದುಬ್ಬರದ ಬಗ್ಗೆ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸವಾಲುಗಳ ಬಗ್ಗೆ ಮಾತನಾಡಿ. ಅವರು (ಜನರು) ನಿಜವಾದ ಸಮಸ್ಯೆಗಳೇನು ಎಂಬುದನ್ನು ನಿರ್ಧರಿಸಬೇಕು- ರಾಮಮಂದಿರ ನಿಜವಾದ ಸಮಸ್ಯೆಯೇ? ಅಥವಾ ನಿರುದ್ಯೋಗವೇ. ರಾಮಮಂದಿರ ನಿಜವಾದ ಸಮಸ್ಯೆಯೇ ಅಥವಾ ಹಣದುಬ್ಬರ ನಿಜವಾದ ಸಮಸ್ಯೆಯೇ? ನಿಮ್ಮ ಧರ್ಮವನ್ನು ಆಚರಿಸಿ ಆದರೆ ರಾಜಕೀಯದಿಂದ ಧರ್ಮವನ್ನು ಪ್ರತ್ಯೇಕಿಸಿ” ಎಂದು ಸಾಗರೋತ್ತರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಿತ್ರೋಡಾ ಒತ್ತಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Wed, 27 December 23

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​