AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿ ಕ್ಷಿಪಣಿ ಪಿತಾಮಹ ಡಾ. ರಾಮ್ ನಾರಾಯಣ್ ಅಗರ್ವಾಲ್ ನಿಧನ

ಕ್ಷಿಪಣಿ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್(83) ಹೈದರಾಬಾದ್​ನಲ್ಲಿ ನಿಧನರಾಗಿದ್ದಾರೆ. ಅವರು ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್​ ಕ್ಷಿಪಣಿ ತಯಾರಿಕೆಯಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ರಾಮ್ ನಾರಾಯಣ್ ಅವರನ್ನು ಅಗ್ನಿ ಕ್ಷಿಪಣಿ ಪಿತಾಮಹ ಎಂದೇ ಕರೆಯುತ್ತಿದ್ದರು. ಪದ್ಮಭೂಷಣ ಪುರಸ್ಕೃತ ಆರ್​ಎನ್ ಅಗರ್ವಾಲ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೈದರಾಬಾದ್​ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಡಿಆರ್​ಡಿಓ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಡಾ. ರಾಮ್ ನಾರಾಯಣ್ ಅಗರ್ವಾಲ್ ಅವರು ಅತ್ಯುತ್ತಮ ವೈಮಾನಿಕ ವಿಜ್ಞಾನಿ ಅವರ ನಿದನದಿಂದ ತುಂಬಾ ದುಃಖವಾಗಿದೆ. ಭಾರತದ ದೀರ್ಘ ವ್ಯಾಪ್ತಿಯ ಕ್ಷಿಪಣಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದಿದ್ದಾರೆ.

ಅಗ್ನಿ ಕ್ಷಿಪಣಿ ಪಿತಾಮಹ ಡಾ. ರಾಮ್ ನಾರಾಯಣ್ ಅಗರ್ವಾಲ್ ನಿಧನ
ರಾಮ್​ ನಾರಾಯಣ್
ನಯನಾ ರಾಜೀವ್
|

Updated on:Aug 16, 2024 | 9:47 AM

Share

ದೇಶದ ಖ್ಯಾತ ಕ್ಷಿಪಣಿ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್(83) ಹೈದರಾಬಾದ್​ನಲ್ಲಿ ನಿಧನರಾಗಿದ್ದಾರೆ. ಅವರು ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್​ ಕ್ಷಿಪಣಿ ತಯಾರಿಕೆಯಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ರಾಮ್ ನಾರಾಯಣ್ ಅವರನ್ನು ಅಗ್ನಿ ಕ್ಷಿಪಣಿ ಪಿತಾಮಹ ಎಂದೇ ಕರೆಯುತ್ತಿದ್ದರು. ಪದ್ಮಭೂಷಣ ಪುರಸ್ಕೃತ ಆರ್​ಎನ್ ಅಗರ್ವಾಲ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೈದರಾಬಾದ್​ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಡಿಆರ್​ಡಿಓ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಡಾ. ರಾಮ್ ನಾರಾಯಣ್ ಅಗರ್ವಾಲ್ ಅವರು ಅತ್ಯುತ್ತಮ ವೈಮಾನಿಕ ವಿಜ್ಞಾನಿ ಅವರ ನಿದನದಿಂದ ತುಂಬಾ ದುಃಖವಾಗಿದೆ. ಭಾರತದ ದೀರ್ಘ ವ್ಯಾಪ್ತಿಯ ಕ್ಷಿಪಣಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದಿದ್ದಾರೆ.

DRDO ತಯಾರಿಸಿದ ಅಗ್ನಿ ಕ್ಷಿಪಣಿಯನ್ನು ಭಾರತದ ಪರಮಾಣು ಸಾಮರ್ಥ್ಯದ ಬೆನ್ನೆಲುಬು ಎಂದು ಪರಿಗಣಿಸಲಾಗಿದೆ. ಇಲ್ಲಿಯವರೆಗೆ, ಅಗ್ನಿ ಕ್ಷಿಪಣಿಯ ಐದು ರೂಪಾಂತರಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಕ್ಷಿಪಣಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುವಂತೆ ಮಾಡುವುದು ಇದರ ಉದ್ದೇಶವಾಗಿತ್ತು. ಅಗ್ನಿ 1- 700-800 ಕಿ.ಮೀ, ಅಗ್ನಿ 2 – 2000 ಕಿ.ಮೀಗಿಂತ ಹೆಚ್ಚು, ಅಗ್ನಿ 3 – 2500 ಕಿ.ಮೀಗಿಂತ ಹೆಚ್ಚು, ಅಗ್ನಿ 4 – 3500 ಕಿ.ಮೀಗಿಂತ ಹೆಚ್ಚು ಮತ್ತು ಅಗ್ನಿ 5 – 5000 ಕಿ.ಮೀಗಿಂತ ಹೆಚ್ಚು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತಷ್ಟು ಓದಿ: Israel Gaza War: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್​ ವೈಮಾನಿಕ ದಾಳಿ, ಮಕ್ಕಳು ಸೇರಿ 35 ಮಂದಿ ಸಾವು

ಡಾ. ಅಗರ್ವಾಲ್ ಅವರು ಎಎಸ್​ಎಲ್​ ನಿರ್ದೇಶಕರಾಗಿ ನಿವೃತ್ತರಾದರು ಮತ್ತು ಎರಡು ದಶಕಗಳ ಕಾಲ ದೇಶದ ಮಹತ್ವಾಕಾಂಕ್ಷೆಯ ಅಗ್ನಿ ಕ್ಷಿಪಣಿ ಕಾರ್ಯಕ್ರಮವನ್ನು ಮನ್ನಡೆಸಿದರು. ವಿಜ್ಞಾನಿಯಾಗಿ ತಮ್ಮ ವೃತ್ತಿಜೀವನದಲ್ಲಿ, ಡಾ ಅಗರ್ವಾಲ್ ಡಾ ಅರುಣಾಚಲಂ ಮತ್ತು ಡಾ ಎಪಿಜೆ ಅಬ್ದುಲ್ ಕಲಾಂ ಅವರಂತಹ ವಿಜ್ಞಾನಿಗಳೊಂದಿಗೆ ಕೆಲಸ ಮಾಡಿದ್ದಾರೆ.

ಅಗ್ನಿ ಕ್ಷಿಪಣಿಯು 1983 ರಲ್ಲಿ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಇಂಟಿಗ್ರೇಟೆಡ್ ಗೈಡೆಡ್ ಮಿಸೈಲ್ ಡೆವಲಪ್‌ಮೆಂಟ್ ಪ್ರೋಗ್ರಾಂ ಅಡಿಯಲ್ಲಿ ಅಭಿವೃದ್ಧಿಪಡಿಸಲು ಬಯಸಿದ ಐದು ಕ್ಷಿಪಣಿಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:46 am, Fri, 16 August 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ