ರಾಷ್ಟ್ರಪತಿ ಮುರ್ಮುಗೆ ಒಂದು ರಾಷ್ಟ್ರ, ಒಂದು ಚುನಾವಣೆ ವರದಿ ಸಲ್ಲಿಸಿದ ರಾಮ್​ನಾಥ್​​ ಕೋವಿಂದ್ ನೇತೃತ್ವದ ಸಮಿತಿ

ಒಂದು ರಾಷ್ಟ್ರ, ಒಂದು ಚುನಾವಣೆಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ನೇತೃತ್ವದ ಸಮಿತಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.

ರಾಷ್ಟ್ರಪತಿ ಮುರ್ಮುಗೆ ಒಂದು ರಾಷ್ಟ್ರ, ಒಂದು ಚುನಾವಣೆ ವರದಿ ಸಲ್ಲಿಸಿದ ರಾಮ್​ನಾಥ್​​ ಕೋವಿಂದ್ ನೇತೃತ್ವದ ಸಮಿತಿ
ರಾಮ್​ನಾಥ್​ ಕೋವಿಂದ್
Follow us
ನಯನಾ ರಾಜೀವ್
|

Updated on: Mar 14, 2024 | 12:17 PM

ಮಾಜಿ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್(Ramnath Kovind) ನೇತೃತ್ವದ ಉನ್ನತ ಮಟ್ಟದ ಸಮಿತಿ ಇಂದು ಒಂದು ರಾಷ್ಟ್ರ, ಒಂದು ಚುನಾವಣೆ(One Nation One Election) ಕುರಿತು ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ. ಈ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಮತದಾನವನ್ನು ನಡೆಸುವುದನ್ನು ಸೂಚಿಸುತ್ತದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದೆ.

ಭಾರತದಲ್ಲಿ, ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ಅದು ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಹಿಂದಿನಿಂದಲೂ ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಿದ್ದಾರೆ.

ಕೋವಿಂದ್ ನೇತೃತ್ವದ ಸಮಿತಿಯ ಇತರ ಸದಸ್ಯರು – ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಆಗಿದ್ದಾರೆ.

ಮತ್ತಷ್ಟು ಓದಿ:ಒಂದು ರಾಷ್ಟ್ರ, ಒಂದು ಚುನಾವಣೆ: ಸಾರ್ವಜನಿಕರ ಸಲಹೆ ಕೇಳಿದ ಕೋವಿಂದ್ ನೇತೃತ್ವದ ಸಮಿತಿ

ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿತು. ಕಳೆದ ಸೆಪ್ಟೆಂಬರ್‌ನಲ್ಲಿ ರಚಿತವಾದ ಸಮಿತಿಯು ಅಸ್ತಿತ್ವದಲ್ಲಿರುವ ಸಾಂವಿಧಾನಿಕ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳನ್ನು ಅನ್ವೇಷಿಸಲು ಮತ್ತು ಶಿಫಾರಸುಗಳನ್ನು ಮಾಡುವ ಕಾರ್ಯವನ್ನು ಮಾಡಲಾಗಿತ್ತು.

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿತ್ತು ಆದರೆ ಅವರು ನಿರಾಕರಿಸಿದರು, ಸಮಿತಿಯನ್ನು ನೆಪಮಾತ್ರ ಎಂದು ಬಣ್ಣಿಸಿದರು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾಗಿದ್ದಾರೆ.

ವರದಿಯು 18,626 ಪುಟಗಳನ್ನು ಹೊಂದಿದೆ. 191 ದಿನಗಳ ಕಾಲ ತಜ್ಞರು, ಸಂಶೋಧನಾಕಾರರ ನಡುವೆ ಸಮಾಲೋಚನೆ ನಡೆಸಿ ಸಿದ್ಧಪಡಿಸಲಾಗಿದೆ. 15 ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್‌ಕೆ ಸಿಂಗ್ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿಯ ಪ್ರಾಚಿ ಮಿಶ್ರಾ ಅವರ ಏಕಕಾಲಿಕ ಚುನಾವಣೆಗಳ ಆರ್ಥಿಕ ಕಾರ್ಯಸಾಧ್ಯತೆಯ ಕುರಿತಾದ ವಿಚಾರವನ್ನು ವರದಿ ಒಳಗೊಂಡಿದೆ.

ಏಕಕಾಲದಲ್ಲಿ ಚುನಾವಣೆ ನಡೆಸಲು ಅಗತ್ಯವಾದ ಆರ್ಥಿಕ ಮತ್ತು ಆಡಳಿತಾತ್ಮಕ ಸಂಪನ್ಮೂಲಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್