ಡಾ. ಅಂಬೇಡ್ಕರ್​ರಿಗೆ ಗೌರವ ನಮನ ಸಲ್ಲಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ

| Updated By: Lakshmi Hegde

Updated on: Apr 14, 2022 | 11:23 AM

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್​ ಮಾಡಿ, ಅಂಬೇಡ್ಕರ್ ರಚಿಸಿದ ಪವಿತ್ರ ಸಂವಿಧಾನ ನಮ್ಮ ದೇಶಕ್ಕೆ ಆಧಾರಸ್ತಂಭವಾಗಿದೆ ಎಂದು ಹೇಳಿದ್ದಾರೆ.

ಡಾ. ಅಂಬೇಡ್ಕರ್​ರಿಗೆ ಗೌರವ ನಮನ ಸಲ್ಲಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ
ಡಾ. ಬಿ.ಆರ್​.ಅಂಬೇಡ್ಕರ್​
Follow us on

ರಾಷ್ಟ್ರಪತಿ ರಾಮನಾಥ್​ ಕೋವಿಂದ್​, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ದೇಶದ ಜನರಿಗೆ ಇಂದು ಅಂಬೇಡ್ಕರ್ ಜಯಂತಿ ಶುಭಾಶಯಗಳನ್ನು ಕೋರಿದ್ದಾರೆ. ಹಾಗೇ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸ್ಮರಣೆ ಮಾಡಿದ್ದಾರೆ. ಭಾರತದ ಪ್ರಗತಿಗೆ ಡಾ. ಬಿ.ಆರ್.ಅಂಬೇಡ್ಕರ್ ನೀಡಿದ ಕೊಡುಗೆ ಸದಾ ಸ್ಮರಣೀಯ ಎಂದು ಹೇಳಿದ್ದಾರೆ. ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಟ್ವೀಟ್ ಮಾಡಿ, ಬಾಬಾ ಸಾಹೇಬ್​ ಅಂಬೇಡ್ಕರ್​ ಅವರಿಗೆ ಗೌರವ ಪೂರ್ವಕ ನಮನಗಳು. ಅವರು ಸಾಮಾಜಿಕ ನ್ಯಾಯದ ಪರವಾಗಿದ್ದ ಪ್ರಬಲ ವಕೀಲರಾಗಿದ್ದರು. ಸಂವಿಧಾನವನ್ನು ರಚಿಸುವ ಮೂಲಕ ಆಧುನಿಕ ಭಾರತಕ್ಕೆ ಅಡಿಗಲ್ಲು ಹಾಕಿದರು. ನಾನು ಮೊದಲು ಭಾರತೀಯ, ನಂತರವೂ ಭಾರತೀಯ ಮತ್ತು ಕೊನೆವರೆಗೂ ಭಾರತೀಯ ಎಂಬ ತತ್ವವನ್ನು ಹಾಕಿಕೊಟ್ಟರು. ಇದಕ್ಕೆ ಬದ್ಧವಾಗಿ, ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣ ಮಾಡುವಲ್ಲಿ ನಮ್ಮ ಪಾತ್ರ ನಿರ್ವಹಿಸೋಣ ಎಂದು ಹೇಳಿದ್ದಾರೆ.

ಹಾಗೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಬಾಬಾ ಸಾಹೇಬ್ ಅಂಬೇಡ್ಕರ್​ ಅವರಿಗೆ ಗೌರವ ನಮನಗಳು. ಭಾರತದ ಅಭಿವೃದ್ಧಿಗಾಗಿ ಅವರು ನೀಡಿದ ಕೊಡುಗೆಗಳೆಂದೂ ಸ್ಮರಣೀಯ. ಅಂಬೇಡ್ಕರ್​ ಕನಸಿನ ಭಾರತ ನಿರ್ಮಾಣ ಮಾಡಲು ನಾವು ಬದ್ಧರಾಗಿದ್ದೇವೆ ಎಂಬುದನ್ನು ಈ ದಿನ ನಾನು ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ. ಹಾಗೇ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ಅದರಲ್ಲಿ ಅಂಬೇಡ್ಕರ್ ಜೀವನ, ಸಾಧನೆ ಬಗ್ಗೆ ಪ್ರಧಾನಿ ಮೋದಿಯವರು ಮಾತನಾಡಿದ್ದನ್ನು ಕೇಳಬಹುದು.

ದೇಶದೆಲ್ಲೆಡೆ ಅಂಬೇಡ್ಕರ್ ಜಯಂತಿ ಆಚರಣೆ ನಡೆಯುತ್ತಿದ್ದು, ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಬಾಬಾ ಸಾಹೇಬ್​​ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.  ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್​ ಮಾಡಿ, ಬಾಬಾ ಸಾಹೇಬ್​ ಅಂಬೇಡ್ಕರ್ ಅವರ 131ನೇ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನಗಳು. ಇವರು ರಚಿಸಿದ ಪವಿತ್ರ ಸಂವಿಧಾನ ನಮ್ಮ ದೇಶಕ್ಕೆ ಆಧಾರಸ್ತಂಭವಾಗಿದೆ ಎಂದು ಹೇಳಿದ್ದಾರೆ. ಹಾಗೇ, ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಾನು ಇನ್ಮುಂದೆ ತುಂಬ ಡೇಂಜರಸ್​​ ಮನುಷ್ಯ ಎಂದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್​

Published On - 11:21 am, Thu, 14 April 22