ರಾಮನವಮಿ-ಹನುಮಜಯಂತಿ ವೇಳೆ ಕೋಮು ಸಂಘರ್ಷ; ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲ

ರಾಮನವಮಿ ಮತ್ತು ಹನುಮಾನ್​ ಜಯಂತಿ ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರಿಗೆ ಕಲ್ಲು ಎಸೆಯಲಾಗಿದೆ. ಅಷ್ಟೇ ಅಲ್ಲ, ಅವರತ್ತ ಗುಂಡು ಹಾರಿಸಲಾಗಿದೆ. ಇಂಥ ಘಟನೆಗಳು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯನ್ನುಂಟು ಮಾಡುತ್ತಿವೆ ಎಂದು ಪಿಐಎಲ್​ನಲ್ಲಿ ಹೇಳಲಾಗಿದೆ.

ರಾಮನವಮಿ-ಹನುಮಜಯಂತಿ ವೇಳೆ ಕೋಮು ಸಂಘರ್ಷ; ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲ
ಘಟನಾ ಸ್ಥಳದ ಚಿತ್ರಣ
Follow us
TV9 Web
| Updated By: Lakshmi Hegde

Updated on:Apr 18, 2022 | 12:59 PM

ರಾಮನವಮಿ ಮತ್ತು ಹನುಮಜಯಂತಿ ಎರಡೂ ದಿನ ದೇಶದ ವಿವಿಧ ಭಾಗಗಳಲ್ಲಿ ಕೋಮುಸಂಘರ್ಷ ಉಂಟಾಗಿದೆ. ಹಿಂಸಾಚಾರದಲ್ಲಿ ಹಲವು ವಾಹನಗಳು ಧ್ವಂಸಗೊಂಡಿವೆ. ಮನೆಗಳಿಗೆ ಹಾನಿಯಾಗಿದೆ. ರಾಮನವಮಿಯಂದು ಗುಜರಾತ್​​ನಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದ. ಹೀಗೆ ನಡೆದ ಕೋಮು ಗಲಭೆ ಪ್ರಕರಣಗಳೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿವೆ. ಗಲಭೆ, ಹಿಂಸಾಚಾರ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಯಾಗಬೇಕು. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡಬೇಕು ಎಂದು ವಕೀಲ ಹಾಗೂ ಹೋರಾಟಗಾರ ವಿನೀತ್​ ಜಿಂದಾಲ್​ ಎಂಬುವರು ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA) ನಡೆಸಬೇಕೂ ಎಂದೂ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಶ್ರೀರಾಮನವಮಿ ಮತ್ತು ಹನುಮಾನ್​ ಜಯಂತಿಯಂದು ಹಿಂದುಗಳು ಶಾಂತರೀತಿಯಲ್ಲಿಯೇ ಮೆರವಣಿಗೆ ನಡೆಸುತ್ತಿದ್ದರು. ಆದರೆ ಅದರ ಮೆಲೆ ಕಲ್ಲು ತೂರಲಾಯಿತು. ಬಳಿಕ ಅದೇ ಹಿಂಸಾಚಾರಕ್ಕೆ ಕಾರಣವಾಯಿತು. ಭಾರತದ ಸಾಮಾಜಿಕ ಸಮತೋಲನವನ್ನು ಹಾಳುಗೆಡವುವ ಸಲುವಾಗಿ, ದೇಶಾದ್ಯಂತ ಇರುವ ಹಿಂದೂಗಳನ್ನು ಗುರಿಯಾಗಿಸಿಕೊಂಡು  ಬೇಕೆಂದೇ ಇಂಥ ಕೃತ್ಯಗಳನ್ನು ಮಾಡಿದ್ದು ಕಾಣಿಸುತ್ತದೆ. ಹಾಗೇ, ಇದರಲ್ಲಿ ಐಸಿಸ್​ ಮತ್ತು ಇತರ ದೇಶವಿರೋಧಿ ಶಕ್ತಿಗಳಿಗೆ ಹಣಕಾಸು ಸಹಾಯ ಮಾಡುವವರ ಕೈವಾಡ ಇದೆಯಾ ಎಂಬ ಬಗ್ಗೆಯೂ ತನಿಖೆಯಾಗಬೇಕು ಎಂದು ಜಿಂದಲ್​ ಅವರು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ರಾಮನವಮಿ ಮತ್ತು ಹನುಮಾನ್​ ಜಯಂತಿ ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರಿಗೆ ಕಲ್ಲು ಎಸೆಯಲಾಗಿದೆ. ಅಷ್ಟೇ ಅಲ್ಲ, ಅವರತ್ತ ಗುಂಡು ಹಾರಿಸಲಾಗಿದೆ. ಇಂಥ ಘಟನೆಗಳು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯನ್ನುಂಟು ಮಾಡುತ್ತಿವೆ. ಅಷ್ಟೇ ಅಲ್ಲ, ಇದು ಹಿಂದುಗಳ ಭಾವನೆಯನ್ನು ಕೆರಳಿಸುವ ಜತೆಗೆ, ಪ್ರತೀಕಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ ಎಂದೂ ಪಿಐಎಲ್​ನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೇ, ಇನ್ನೊಬ್ಬ ವಕೀಲರಾದ ಅಮೃತ್​​ಪಾಲ್ ಸಿಂಗ್​ ಖಲ್ಸಾ  ದೆಹಲಿಯ ಜಹಂಗೀರ್​ಪುರಿಯಲ್ಲಿ ಹನುಮಾನ್ ಜಯಂತಿಯಂದು ನಡೆದ ಕೋಮು ಸಂಘರ್ಷದ ತನಿಖೆಗೆ ಆಗ್ರಹಿಸಿ ಒಂದು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.  ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದಲ್ಲಿ, ಹಾಲಿ ನ್ಯಾಯಾಧೀಶರ ಸಮಿತಿಯೊಂದನ್ನು ರಚಿಸಬೇಕು ಎಂದೂ ಒತ್ತಾಯಿಸಿದ್ದಾರೆ. ದೆಹಲಿಯ ಜಹಂಗೀರ್​​ಪುರಿಯಲ್ಲಿ ಶನಿವಾರ ನಡೆದ ಹನುಮಾನ್​ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟವಾಗಿದ್ದಲ್ಲದ್ದೆ ಕೋಮು ಸಂಘರ್ಷ ಉಂಟಾಗಿತ್ತು. ಇದರಲ್ಲಿ ಎಂಟು ಮಂದಿ ಪೊಲೀಸರು, ನಾಗರಿಕರು ಗಾಯಗೊಂಡಿದ್ದು, ಇಲ್ಲಿಯವರೆಗೆ 21 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ಗೆ ಮತ್ತೆ ವಕ್ಕರಿಸಿದ ಕೊರೊನಾ: ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಕೋವಿಡ್ ಪಾಸಿಟಿವ್

Published On - 11:55 am, Mon, 18 April 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್