ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಲಲ್ಲಾ ಮಹಾಮಸ್ತಕಾಭಿಷೇಕಕ್ಕೆ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್(Sachin Tendulkar), ವಿರಾಟ್ ಕೊಹ್ಲಿ(Virat Kohli), ಹಿರಿಯ ನಟ ಅಮಿತಾಭ್ ಬಚ್ಚನ್(Amitabh Bachchan) ಮತ್ತು ಉದ್ಯಮಿ ಮುಕೇಶ್ ಅಂಬಾನಿ ಸೇರಿದಂತೆ 7 ಸಾವಿರ ಗಣ್ಯರನ್ನು ಆಹ್ವಾನಿಸಿದೆ.
ದೂರದರ್ಶನದಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯಲ್ಲಿ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಿದ ಅರುಣ್ ಗೋವಿಲ್ (ಲಾರ್ಡ್ ರಾಮ್), ಮತ್ತು ಸೀತಾ ದೇವಿಯ ಪಾತ್ರವನ್ನು ನಿರ್ವಹಿಸಿದ ದೀಪಿಕಾ ಚಿಖಾಲಿಯಾ ಅವರಿಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನವನ್ನು ಕಳುಹಿಸಲಾಗಿದೆ.
ಜನವರಿ 22, 2024 ರಂದು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಈಗಾಗಲೇ ಆಹ್ವಾನಿಸಲಾಗಿದೆ. ಟ್ರಸ್ಟ್ 3,000 ವಿವಿಐಪಿಗಳು ಸೇರಿದಂತೆ 7,000 ಜನರಿಗೆ ಆಹ್ವಾನ ಕಳುಹಿಸಿದೆ.
1992ರಲ್ಲಿ ಹತ್ಯೆಗೀಡಾದ ಕರಸೇವಕರ ಕುಟುಂಬಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಆಹ್ವಾನಿತ ವಿವಿಐಪಿಗಳಲ್ಲಿ ಆರ್ಎಸ್ಎಸ್ನ ಸರಸಂಘ ಚಾಲಕ ಮೋಹನ್ ಭಾಗವತ್, ಯೋಗ ಗುರು ರಾಮ್ ದೇವ್, ಕೈಗಾರಿಕೋದ್ಯಮಿ ರತನ್ ಟಾಟಾ, ಕೈಗಾರಿಕೋದ್ಯಮಿ ಗೌತಮ್ ಅದಾನಿ ಕೂಡ ಸೇರಿದ್ದಾರೆ.
ಮತ್ತಷ್ಟು ಓದಿ: ಅಯೋಧ್ಯೆಯ ರಾಮ ಮಂದಿರದ ಅರ್ಚಕ ಹುದ್ದೆಗೆ ಬಂತು ಬರೋಬ್ಬರಿ 3000 ಅರ್ಜಿ!
ಅಯೋಧ್ಯೆಯಲ್ಲಿ ರಾಮಲಲ್ಲಾನ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಎಲ್ಲಾ ಜಿಲ್ಲೆಗಳ ಪ್ರತಿಷ್ಠಿತ ದೇವಾಲಯಗಳಲ್ಲಿ ಜನವರಿ 14 ರಿಂದ (ಮಕರ ಸಂಕ್ರಾಂತಿ) ಜನವರಿ 22 ರವರೆಗೆ ನಿರಂತರವಾಗಿ ರಾಮಾಯಣ, ರಾಮಚರಿತಮಾನಸ ಮತ್ತು ಹನುಮಾನ್ ಚಾಲೀಸವನ್ನು ಪಠಿಸಬೇಕು ಎಂಬುದು ಯೋಗಿ ಸರ್ಕಾರದ ಯೋಜನೆಯಾಗಿದೆ.
ಪ್ರಸ್ತುತ ಅಯೋಧ್ಯೆಯಲ್ಲಿ 30 ಸಾವಿರದ 500 ಕೋಟಿ ರೂ.ಗಳ 178 ಅಭಿವೃದ್ಧಿ ಯೋಜನೆಗಳ ಕಾಮಗಾರಿ ನಡೆಯುತ್ತಿದೆ. ಖಾಸಗಿ ವಲಯದ ಸಹಭಾಗಿತ್ವವನ್ನು ಸೇರಿಸಿದರೆ, ಮುಂದಿನ ದಿನಗಳಲ್ಲಿ 50 ಸಾವಿರ ಕೋಟಿ ರೂ.ಗಳ ಯೋಜನೆಗಳು ಇಲ್ಲಿ ರೂಪುಗೊಂಡವು. ಇದರಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ