AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ದೇಣಿಗೆ ಹಗರಣ; 8 ಆರೋಪಿಗಳಿಗೂ 14 ದಿನಗಳ ನ್ಯಾಯಾಂಗ ಬಂಧನ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗದ ಆರೋಪ ಎದುರಿಸುತ್ತಿರುವ ಎಲ್ಲಾ 8 ಮಂದಿ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಇಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ ನಂತರ ಈ ಆದೇಶವನ್ನು ಹೊರಡಿಸಲಾಗಿದೆ.

ರಾಮ ಮಂದಿರ ದೇಣಿಗೆ ಹಗರಣ; 8 ಆರೋಪಿಗಳಿಗೂ 14 ದಿನಗಳ ನ್ಯಾಯಾಂಗ ಬಂಧನ
Ram Mandir RowImage Credit source: TV9
ಸುಷ್ಮಾ ಚಕ್ರೆ
|

Updated on: Jun 29, 2026 | 4:46 PM

Share

ಮುಖ್ಯಾಂಶಗಳು

  • ರಾಮ ಮಂದಿರದ ದೇಣಿಗೆ ಕದ್ದ 8 ಆರೋಪಿಗಳಿಗೆ ಹಿನ್ನಡೆ
  • ಎಲ್ಲ ಆರೋಪಿಗಳಿಗೂ 14 ದಿನ ನ್ಯಾಯಾಂಗ ಬಂಧನ
  • ಆರೋಪಿಗಳ ಪರ ವಾದ ಮಾಡಲ್ಲ ಎಂದ ವಕೀಲರು

ಅಯೋಧ್ಯೆ, ಜೂನ್ 29: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ (Ram Temple Donation Row) ಎಲ್ಲಾ 8 ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಇಂದಿನಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೀಗಾಗಿ, ಈ ಆರೋಪಿಗಳು ಜುಲೈ 13ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ. 3 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಎಂಟೂ ಜನ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಅಯೋಧ್ಯೆ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿತು.

ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿದ್ದ ದೇಣಿಗೆ ಹಣ ಮತ್ತು ಚಿನ್ನ, ಬೆಳ್ಳಿ ವಸ್ತುಗಳ ದುರುಪಯೋಗವು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಗರಣದ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಅದರ ಸದಸ್ಯ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ಶನಿವಾರ, ಈ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು ಎಂದು ಟ್ರಸ್ಟ್ ಭರವಸೆ ನೀಡಿತ್ತು.

ಚಂಪತ್ ರಾಯ್ ಅವರ ಮಾಜಿ ಚಾಲಕ ಸೇರಿದಂತೆ ದೇಣಿಗೆ ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ 8 ಜನರನ್ನು ಕಳೆದ ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ತಿಂಗಳಿಗೆ 15 ಸಾವಿರ ರೂ. ಸಂಬಳ, 22ನೇ ವಯಸ್ಸಿಗೆ ಕೋಟ್ಯಾಧಿಪತಿ: ರಾಮಮಂದಿರ ಕಾಣಿಕೆ ಲೂಟಿ ಮಾಡಿದ ಅನುಕಲ್ಪ್ ಮಿಶ್ರಾ ಅಕ್ರಮ ಆಸ್ತಿ ಕಂಡು ಪೊಲೀಸರೇ ಶಾಕ್!

ಆರೋಪಿಗಳ ಪರ ವಾದಿಸದಂತೆ ವಕೀಲರ ಸಂಘದ ನಿರ್ಣಯ;

ಅಯೋಧ್ಯೆಯ ಫೈಜಾಬಾದ್ ಬಾರ್ ಅಸೋಸಿಯೇಷನ್ ಇಂದು ಒಂದು ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದು, ತನ್ನ ಯಾವುದೇ ಸದಸ್ಯರು ರಾಮ ಮಂದಿರ ದೇಣಿಗೆ ಕಳ್ಳತನದ ಆರೋಪಿಗಳ ಪರವಾಗಿ ವಕಾಲತ್ ವಹಿಸುವುದಿಲ್ಲ ಎಂದು ಘೋಷಿಸಿದೆ. ಈ ಆದೇಶವನ್ನು ಉಲ್ಲಂಘಿಸುವ ಯಾವುದೇ ವಕೀಲರಿಗೆ 5 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಅಸೋಸಿಯೇಷನ್ ಎಚ್ಚರಿಸಿದೆ. ಇದರಿಂದಾಗಿ ಆರೋಪಿಗಳ ಕಾನೂನು ಹೋರಾಟಕ್ಕೆ ವಕೀಲರು ಸಿಗದಂತಾಗಿದೆ.

ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ:

ರಾಮ ಮಂದಿರದ ದೇಣಿಗೆ ದುರುಪಯೋಗದ ಆರೋಪಗಳ ಕುರಿತು ನಿಷ್ಪಕ್ಷಪಾತ ಮತ್ತು ಕಾಲಮಿತಿಯ ತನಿಖೆಯನ್ನು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಷಯವನ್ನು ಬೇಸಿಗೆ ರಜೆಯ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ರಾಮನ ಹಣ ಕದ್ದವರಿಗೆ ಮತ್ತೊಂದು ಶಾಕ್; ಆರೋಪಿಗಳ ಪರ ವಾದಿಸುವ ವಕೀಲರಿಗೆ 5 ಲಕ್ಷ ರೂ. ದಂಡದ ಎಚ್ಚರಿಕೆ!

ರಾಮ ಮಂದಿರ ಟ್ರಸ್ಟ್‌ನ ವಿನಂತಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರವು ಜೂನ್ 13ರಂದು ಈ ಹಗರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು. ಈ ಎಸ್‌ಐಟಿಯಲ್ಲಿ ಲಕ್ನೋ ವಿಭಾಗೀಯ ಕಮಿಷನರ್ ವಿಜಯ್ ವಿಶ್ವಾಸ್ ಪಂತ್, ಐಜಿಪಿ ಕಿರಣ್ ಎಸ್ ಮತ್ತು ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿ ನೀಲ್ ರತನ್ ಇದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​