AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Donation Row ದೇಣಿಗೆ ಕಳ್ಳತನದ ವಿವಾದ; ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಅಯೋಧ್ಯೆಯಲ್ಲಿ ಇಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿರ್ಣಾಯಕ ಸಭೆ ನಡೆದಿದೆ. ಈ ಸಭೆಯಲ್ಲಿ ರಾಮ ಮಂದಿರದ ದೇಣಿಗೆ ಕಳ್ಳತನದ ಆರೋಪದ ಪ್ರಕರಣದ ಕುರಿತು ಚರ್ಚೆಗಳು ನಡೆದಿವೆ. ಈ ನಡುವೆ, ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಮಾಜಿ ಟ್ರಸ್ಟಿ ಅನಿಲ್ ಮಿಶ್ರಾ ಅವರು ಸಭೆಗೆ ಗೈರಾಗಿದ್ದರು. ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಟ್ರಸ್ಟಿಗಳು ಚಂಪತ್ ರಾಯ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

Ram Temple Donation Row ದೇಣಿಗೆ ಕಳ್ಳತನದ ವಿವಾದ; ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ
Champat RaiImage Credit source: PTI
ಸುಷ್ಮಾ ಚಕ್ರೆ
|

Updated on:Jul 06, 2026 | 4:59 PM

Share

ಮುಖ್ಯಾಂಶಗಳು

  • ರಾಮ ಮಂದಿರದ ದೇಣಿಗೆ ಕಳ್ಳತನ ವಿವಾದ
  • ರಾಮ ಮಂದಿರ ಟ್ರಸ್ಟ್​ನಿಂದ ಇಂದು ಮಹತ್ವದ ಸಭೆ
  • ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಅಯೋಧ್ಯೆ, ಜುಲೈ 6: ಅಯೋಧ್ಯೆಯ ರಾಮ ಮಂದಿರಕ್ಕೆ (Ram Temple Donation Theft Row) ಬಂದ ದೇಣಿಗೆ ಹಣದ ಆಪಾದಿತ ಕಳ್ಳತನದ ತನಿಖೆ ನಡೆಯುತ್ತಿರುವ ನಡುವೆಯೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇಂದು ಚಂಪತ್ ರಾಯ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಅಯೋಧ್ಯೆಯ ಮಂದಿರದ ಆವರಣದಲ್ಲಿ ನಡೆದ ನಿರ್ಣಾಯಕ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಚಂಪತ್ ರಾಯ್ ಅವರ ಸ್ಥಾನಕ್ಕೆ ಬಜರಂಗ್ ಬಾಗ್ರ ಅವರನ್ನು ಟ್ರಸ್ಟ್‌ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಮ ಮಂದಿರದ ದೇಣಿಗೆ ಹಣ ದುರುಪಯೋಗದ ಆರೋಪದ ತನಿಖೆ ಚುರುಕುಗೊಂಡ ಹಿನ್ನೆಲೆಯಲ್ಲಿ ಜೂನ್ 26ರಂದೇ ಚಂಪತ್ ರಾಯ್ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದಕ್ಕೂ ಒಂದು ದಿನ ಮುಂಚಿತವಾಗಿ ಪೊಲೀಸರು ಚಂಪತ್ ರಾಯ್ ಅವರ ಚಾಲಕ ಟಿನ್ನು ಸೇರಿದಂತೆ 8 ಜನರನ್ನು ಬಂಧಿಸಿದ್ದರು. ಚಂಪತ್ ರಾಯ್ ಅವರೊಂದಿಗೆ ಟ್ರಸ್ಟ್‌ನ ಮತ್ತೊಬ್ಬ ಟ್ರಸ್ಟಿ ಅನಿಲ್ ಮಿಶ್ರಾ ಕೂಡ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಇಬ್ಬರು ನಾಯಕರ ಹೆಸರು ದೇಣಿಗೆ ಕಳ್ಳತನದ ವಿವಾದಕ್ಕೆ ಲಿಂಕ್ ಆಗಿದ್ದರೂ, ಇವರ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ದಾಖಲಾಗಿಲ್ಲ.

ಇದನ್ನೂ ಓದಿ: ರಾಮ ಮಂದಿರ ದೇಣಿಗೆ ವಿವಾದ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಟ್ರಸ್ಟಿಗಳ ಅಸಮಾಧಾನ:

ಮೂಲಗಳ ಪ್ರಕಾರ, ಈ ದೇಣಿಗೆ ಕಳ್ಳತನವು ಟ್ರಸ್ಟ್‌ನ ವಿಶ್ವಾಸಾರ್ಹತೆ, ರಾಮ ಭಕ್ತರ ಭಾವನೆಗಳು ಮತ್ತು ಸಾರ್ವಜನಿಕರ ನಂಬಿಕೆಗೆ ಧಕ್ಕೆ ತಂದಿದೆ ಎಂದು ಬಹುತೇಕ ಟ್ರಸ್ಟಿಗಳು ಸಭೆಯಲ್ಲಿ ಬೇಸರ ಹೊರಹಾಕಿದ್ದಾರೆ. ಈ ವಿವಾದದ ಸುತ್ತ ಹರಡಿರುವ ಗೊಂದಲ ಮತ್ತು ತಪ್ಪು ಮಾಹಿತಿಯ ಬಗ್ಗೆ ಸದಸ್ಯರು ಕಳವಳ ವ್ಯಕ್ತಪಡಿಸಿದ್ದು, ಇದು ದೇಶಾದ್ಯಂತ ತಪ್ಪು ಸಂದೇಶವನ್ನು ರವಾನಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ದೇಣಿಗೆ ವಿವಾದ: ಕೊನೆಗೂ ಮೌನ ಮುರಿದ ಟ್ರಸ್ಟ್ ಅಧ್ಯಕ್ಷರು, ಪ್ರಧಾನಿ, ಸಿಎಂಗೆ ಭಾವುಕ ಪತ್ರ

ರಾಮ ಮಂದಿರದ ದೇಣಿಗೆ ವಿವಾದದ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಭಕ್ತರು ತಾವು ನೀಡಿದ್ದ ಹಣ ದುರುಪಯೋಗವಾಗಿರುವ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ಪ್ರಕರಣದ ತನಿಖೆಗೆ ಎಸ್​ಐಟಿಯನ್ನೂ ರಚನೆ ಮಾಡಲಾಗಿದೆ. ಈ ವಿವಾದದ ಬಳಿಕ ನಡೆದ ಇಂದಿನ ಸಭೆಯು 2020ರಲ್ಲಿ ಟ್ರಸ್ಟ್ ರಚನೆಯಾದ ನಂತರದ ಅತ್ಯಂತ ಮಹತ್ವದ ಸಭೆ ಎಂದು ಪರಿಗಣಿಸಲಾಗಿದೆ.

ಚಂಪತ್ ರಾಯ್ ಗೈರು:

ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಮ ಮಂದಿರದ ಸಂಕೀರ್ಣದಲ್ಲೇ ಇದ್ದರೂ ಸಭೆಗೆ ಹಾಜರಾಗಿರಲಿಲ್ಲ. ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿರಿ ಅವರು ಕರೆದಿದ್ದ ಈ ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ವಹಿಸಿದ್ದರು. ಸಭೆಯಲ್ಲಿ ಹಿರಿಯ ಟ್ರಸ್ಟಿಗಳು, ಸರ್ಕಾರದ ಪ್ರತಿನಿಧಿಗಳು ಮತ್ತು ಕಾನೂನು ತಜ್ಞರು ಭಾಗವಹಿಸಿದ್ದರು.

ಪ್ರಸ್ತುತ ಎಸ್‌ಐಟಿ ಮತ್ತು ಪೊಲೀಸರು ಈ ದೇಣಿಗೆ ಹಗರಣದ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಭಾಗವಾಗಿ ಚಂಪತ್ ರಾಯ್, ಅನಿಲ್ ಮಿಶ್ರಾ ಮತ್ತು ಗೋಪಾಲ್ ರಾವ್ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆಯಾದರೂ, ಇವರ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂಬುದು ಗಮನಾರ್ಹ ಸಂಗತಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Mon, 6 July 26

Follow Us
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ
ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು
ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು