ರಾಮಮಂದಿರ ವ್ಯವಹಾರ ಮೇಲ್ವಿಚಾರಣೆ ನಡೆಸಲು ಆರ್ಥಿಕ-ಕಾನೂನು ಸಲಹಾ ಸಮಿತಿಗಳ ರಚನೆ; ಭೂ ಖರೀದಿ ಅಕ್ರಮ ಆರೋಪದ ಬೆನ್ನಲ್ಲೇ ನಿರ್ಧಾರ

Ram Temple: ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಖರೀದಿ ಮಾಡುವಾಗ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ. ಅಷ್ಟೇ ಅಲ್ಲ, ಇದರಲ್ಲಿ ಚಂಪತ್​ ರಾಯ್​​ರನ್ನೇ ನೇರವಾಗಿ ಹೊಣೆ ಮಾಡಲಾಗುತ್ತಿದೆ.

ರಾಮಮಂದಿರ ವ್ಯವಹಾರ ಮೇಲ್ವಿಚಾರಣೆ ನಡೆಸಲು ಆರ್ಥಿಕ-ಕಾನೂನು ಸಲಹಾ ಸಮಿತಿಗಳ ರಚನೆ; ಭೂ ಖರೀದಿ ಅಕ್ರಮ ಆರೋಪದ ಬೆನ್ನಲ್ಲೇ ನಿರ್ಧಾರ
ಶ್ರೀರಾಮ ಮಂದಿರ
Follow us
TV9 Web
| Updated By: Lakshmi Hegde

Updated on: Jul 11, 2021 | 12:18 PM

ದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ (Ram Temple) ನಿರ್ಮಾಣ ಕಾರ್ಯ ಒಂದು ಕಡೆ ಭರದಿಂದ ನಡೆಯುತ್ತಿದೆ. ಈ ಮಧ್ಯೆ ಇಲ್ಲಿ ಭೂಮಿ ಖರೀದಿ ಬಗ್ಗೆ ವಿವಾದವೊಂದು ಎದ್ದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾರ್ಚ್​ನಲ್ಲಿ ಇಲ್ಲಿ ಸ್ವಲ್ಪ ಹೆಚ್ಚುವರಿ ಭೂಮಿಯನ್ನು ಖರೀದಿಸಿದ್ದರ ಬಗ್ಗೆ ಆಪ್, ಸಮಾಜವಾದಿ ಪಕ್ಷ, ಕಾಂಗ್ರೆಸ್​​ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಇಲ್ಲಿ ಅಕ್ರಮ ನಡೆದಿದೆ ಎಂದು ಸಿಬಿಐ ತನಿಖೆಗೂ ಒತ್ತಾಯಿಸಿವೆ. ಈ ಬೆನ್ನಲ್ಲೇ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Shree Ram Janmbhoomi Teerth Kshetra Trust)​ ಒಂದು ಮಹತ್ವದ ನಿರ್ಧಾರ ಪ್ರಕಟಿಸಿದೆ. ರಾಮಮಂದಿರಕ್ಕೆ ಸಂಬಂಧಪಟ್ಟ ವ್ಯವಹಾರಗಳನ್ನು ನೋಡಿಕೊಳ್ಳಲು ಆರ್ಥಿಕ ಮತ್ತು ಕಾನೂನು ಸಲಹಾ ಸಮಿತಿಗಳನ್ನು ರಚಿಸುವುದಾಗಿ ಹೇಳಿಕೊಂಡಿದೆ.

ಚಿತ್ರಕೂಟದಲ್ಲಿ ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರಚಾರಕ್​ ಬೈಠೆಕ್​ ಆಯೋಜಿಸಲಾಗಿದ್ದು, ಅದಕ್ಕೂ ಮೊದಲೇ ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಚಂಪತ್​ ರಾಯ್​ ಅವರು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾಗಿದ್ದಾರೆ. ಈ ವೇಳೆ ಅಯೋಧ್ಯೆಯಲ್ಲಿ ಸದ್ಯ ಎದ್ದಿರುವ ಭೂಮಿ ವಿವಾದದ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ದೇವಾಲಯದ ಆವರಣಕ್ಕಾಗಿ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇನ್ನಷ್ಟು ಭೂಮಿ ಖರೀದಿ ಮಾಡಿದೆ. ಆದರೆ ಇದರಲ್ಲಿ ಅವ್ಯವಹಾರ ನಡೆದಿದ್ದು, ಅಕ್ರಮದಲ್ಲಿ ಚಂಪತ್​ ರಾಯ್​ ಮತ್ತು ಟ್ರಸ್ಟ್​ನ ಇನ್ನೊಬ್ಬ ಸದಸ್ಯ ಅನಿಲ್​ ಮಿಶ್ರಾ ಪಾಲಿದೆ ಎಂದು ಆಮ್​ ಆದ್ಮಿ ಪಕ್ಷದ ಸಂಸದ ಸಂಜಯ್​ ಸಿಂಗ್​ ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ್ದ ಆರ್​ಎಸ್​ಎಸ್​, ರಾಮಮಂದಿರ ನಿರ್ಮಾಣಕ್ಕೆ ಅಡ್ಡಿ ಪಡಿಸಲು ವಿರೋಧ ಪಕ್ಷಗಳು ರಾಜಕೀಯ ಹುನ್ನಾರ ನಡೆಸುತ್ತಿವೆ ಎಂದು ಹೇಳಿತ್ತು.

ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಖರೀದಿ ಮಾಡುವಾಗ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ. ಅಷ್ಟೇ ಅಲ್ಲ, ಇದರಲ್ಲಿ ಚಂಪತ್​ ರಾಯ್​​ರನ್ನೇ ನೇರವಾಗಿ ಹೊಣೆ ಮಾಡಲಾಗುತ್ತಿದೆ. ಈ ಮಧ್ಯೆ ಚಂಪತ್​ ರಾಯ್​ರನ್ನು ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆಗೆಯಲಾಗುತ್ತದೆ ಎಂಬುದೊಂದು ಮಾತೂ ಕೇಳಿಬರುತ್ತಿದೆ. ಆದರೆ ಇದನ್ನು ವಿಶ್ವ ಹಿಂದು ಪರಿಷತ್​ನ ಜಂಟಿ ಕಾರ್ಯದರ್ಶಿ ಸುರೇಂದರ್​ ಜೈನ್​ ತಳ್ಳಿ ಹಾಕಿದ್ದಾರೆ. ಶ್ರೀರಾಮಂದಿರ ನಿರ್ಮಾಣ ಕಾರ್ಯದಲ್ಲಿ ಚಂಪತ್ ರಾಯ್​ ಸಕ್ರಿಯರಾಗಿದ್ದಾರೆ. ಅವರನ್ನು ನೇಮಕ ಮಾಡಿದ್ದು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್. ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ, ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ; ಸಂಸದೆ ಸುಮಲತಾ

Ram Temple trust to set up economic legal advisory committees To oversee the transaction

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ