AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ನಮ್ಮ ರಾಮನನ್ನು ‘ಕಪ್ಪು’ ಮಾಡಿದ್ದೀರಿ: ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ

ನಾವು ರಾಮನ ಬಣ್ಣ ಕಂದು ಎಂದು ಓದಿದ್ದೇವೆ.ಆದರೆ ಅಯೋಧ್ಯೆಯಲ್ಲಿರುವ ರಾಮಮಂದಿರದಲ್ಲಿರುವ ರಾಮ ಕಪ್ಪು ಬಣ್ಣದ್ದು ಎಂದು ಕಾಂಗ್ರೆಸ್ ಶಾಸಕ ಹೇಳಿದ್ದಾರೆ. ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಚರ್ಚೆ ನಡೆಯುತ್ತಿರುವಾಗ ಶಾಸಕ ಆದೇಶ್ ಸಿಂಗ್ ಚೌಹಾಣ್ ಈ ಮಾತು ಹೇಳಿದ್ದು ವಿವಾದಕ್ಕೀಡಾಗಿದೆ.

ನೀವು ನಮ್ಮ ರಾಮನನ್ನು 'ಕಪ್ಪು' ಮಾಡಿದ್ದೀರಿ: ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ
ಆದೇಶ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
|

Updated on: Feb 07, 2024 | 3:59 PM

Share

ಡೆಹ್ರಾಡೂನ್ ಫೆಬ್ರುವರಿ 07: ಉತ್ತರಾಖಂಡ (Uttarakhand) ವಿಧಾನಸಭೆಯಲ್ಲಿ ಇಂದು(ಬುಧವಾರ) ಏಕರೂಪ ನಾಗರಿಕ ಸಂಹಿತೆ (Uniform Civil Code Bill) ಮಸೂದೆಯ ಮೇಲಿನ ಚರ್ಚೆ ವೇಳೆ ಅಯೋಧ್ಯೆ ರಾಮಮಂದಿರದಲ್ಲಿರುವ ರಾಮಲಲ್ಲಾನ ವಿಗ್ರಹದ ಮೈಬಣ್ಣದ ಬಗ್ಗೆ ಹೇಳಿಕೆ ನೀಡಿ ಕಾಂಗ್ರೆಸ್ ಶಾಸಕರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.ಕಾಂಗ್ರೆಸ್ ಶಾಸಕರ ಹೇಳಿಕೆ ಸದನದಲ್ಲಿ ಗದ್ದಲಕ್ಕೆ ಕಾರಣವಾಗಿದ್ದು, ಅಲ್ಲಿದ್ದ ಶಾಸಕರು ಇದನ್ನು ಖಂಡಿಸಿದ್ದಾರೆ. ಜಸ್ಪುರ್‌ನ ಕಾಂಗ್ರೆಸ್ ಶಾಸಕ ಆದೇಶ್ ಸಿಂಗ್ ಚೌಹಾಣ್ ಅವರು ಅಯೋಧ್ಯೆಯಲ್ಲಿನ ಭವ್ಯ ಮಂದಿರವನ್ನು ಉಲ್ಲೇಖಿಸುವಾಗ ಶಾಸನದ ಕುರಿತು ಮಾತನಾಡುತ್ತಿದ್ದರು. “ಸಂಸದೀಯ ಕಾರ್ಯ ಸಚಿವರು ದೇವಾಲಯದ ಬಗ್ಗೆ ಹಲವಾರು ಉಲ್ಲೇಖಗಳನ್ನು ಮಾಡಿದರು. ನಾವು ದೇವಾಲಯದ ನಿರ್ಮಾಣವನ್ನು ಸ್ವಾಗತಿಸುತ್ತೇವೆ. ಆದರೆ ನನಗೆ ಅರ್ಥವಾಗದ ಸಂಗತಿಯೆಂದರೆ, ನಮ್ಮ ರಾಮನು ಸಾಂವ್ಲಾ ಅರ್ಥಾತ್ ಕಂದು ಬಣ್ಣ ಎಂದು ಪುಸ್ತಕಗಳಲ್ಲಿ ಓದಿದ್ದೇವೆ ಆದರೆ ಅವನನ್ನು ಅಲ್ಲಿ ‘ಕಾಲಾ’ (ಕಪ್ಪು) ಮಾಡಿದ್ದೀರಿ” ಎಂದು ಹೇಳಿದ್ದಾರೆ

ಈ ಹೇಳಿಕೆ ಭಾರೀ ಗದ್ದಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಸಚಿವರು ಮತ್ತು ಶಾಸಕರು ಪ್ರತಿಭಟನೆ ನಡೆಸಿದರು. ವಿತ್ತ ಮತ್ತು ಸಂಸದೀಯ ಕಾರ್ಯ ಸಚಿವರಾದ ಪ್ರೇಮ್ ಚಂದ್ ಅಗರ್ವಾಲ್ ಅವರು ಚೌಹಾಣ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಭಗವಾನ್ ರಾಮನ ಬಗ್ಗೆ ಈ ಈ ರೀತಿ ಹೇಳುತ್ತಿದ್ದೀರಾ ಎಂದು ಪ್ರಶ್ನಿಸಿದರು. ಬಿಜೆಪಿ ಶಾಸಕರು ಜೈ ಶ್ರೀರಾಮ್ ಘೋಷಣೆ ಕೂಗುತ್ತಿದ್ದಂತೆ ಕಾಂಗ್ರೆಸ್ ಶಾಸಕರು ವಾಗ್ವಾದ ನಡೆಸಿದರು.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪಕ್ಕದಲ್ಲಿ ಕುಳಿತಿದ್ದ ಸಚಿವರು, ಕಾಂಗ್ರೆಸ್ ಮತಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. “ಅವರು ಶ್ರೀರಾಮನ ಬಗ್ಗೆ ಇಂತಹ ಟೀಕೆಗಳನ್ನು ಮಾಡುತ್ತಿದ್ದಾರೆ. ನೀವು ಮತಕ್ಕಾಗಿ ಏನು ಬೇಕಾದರೂ ಮಾಡುತ್ತೀರಿ ಆದರೆ ಅಂತಹ ಮಾತುಗಳನ್ನು ಹೇಳಬೇಡಿ ಎಂದು ನಾನು ವಿನಂತಿಸುತ್ತೇನೆ. ಕಾಂಗ್ರೆಸ್ ಕೇವಲ ತುಷ್ಟೀಕರಣ ಮತ್ತು ಮತಬ್ಯಾಂಕ್ ರಾಜಕಾರಣ ಮಾಡಬಹುದೇ?” ಎಂದು ಕೇಳಿದ್ದಾರೆ.

ಳೆದ ತಿಂಗಳು ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾದ 51 ಇಂಚಿನ ರಾಮಲಲ್ಲಾನ ವಿಗ್ರಹವನ್ನು ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ನಿರ್ಮಿಸಿದ್ದು, ಇದನ್ನು ಕಪ್ಪು ಕಲ್ಲಿನಿಂದ ಕೆತ್ತಲಾಗಿದೆ.

ಇದನ್ನೂ ಓದಿ: ಲಿವ್ ಇನ್ ರಿಲೇಷನ್​​ಶಿಪ್ ನೋಂದಾಯಿಸಿ ಇಲ್ಲವೇ 6 ತಿಂಗಳ ಜೈಲು ಶಿಕ್ಷೆ ಎದುರಿಸಿ: ಉತ್ತರಾಖಂಡ ಸಿವಿಲ್ ಕೋಡ್

ವಿಗ್ರಹವನ್ನು ಕೆತ್ತಿದ ಕಲ್ಲು ಕರ್ನಾಟಕದಿಂದ ತಂದ ವಿಶೇಷವಾದ ಕಪ್ಪು ಗ್ರಾನೈಟ್ ಆಗಿದೆ. ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್‌ನ ನಿರ್ದೇಶಕ ಎಚ್‌ಎಸ್ ವೆಂಕಟೇಶ್ ಅವರು ಈ ಕಲ್ಲು 2.5 ಶತಕೋಟಿ ವರ್ಷಗಳಷ್ಟು ಹಳೆಯದು ಎಂದು ಹೇಳಿದ್ದಾರೆ. ಈ ಪ್ರತಿಮೆಯು ಐದು ವರ್ಷದ ರಾಮನನ್ನು ಪ್ರತಿನಿಧಿಸುತ್ತದೆ. ದೇವಾಲಯದ ಮೊದಲ ಮಹಡಿಯಲ್ಲಿ ಸೀತೆ, ಲಕ್ಷ್ಮಣ ಮತ್ತು ಹನುಮಾನ್ ಸಹಿತ ರಾಮನ ವಿಗ್ರಹಗಳನ್ನು ಹೊಂದಿದ್ದು ದೇವಾಲಯ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್