Swami Smaranananda Demise: ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ, ಪ್ರಧಾನಿ ಮೋದಿ ಸಂತಾಪ

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು 2017 ರಲ್ಲಿ ರಾಮಕೃಷ್ಣ ಮಿಷನ್‌ನ 16 ನೇ ಅಧ್ಯಕ್ಷರಾದರು. ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ಮರಣಾನಂದ ಅವರಿಗೆ ಮೂತ್ರನಾಳ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಜನವರಿ 29ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Swami Smaranananda Demise: ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ, ಪ್ರಧಾನಿ ಮೋದಿ ಸಂತಾಪ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Mar 27, 2024 | 9:59 AM

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ(Swami Smaranananda) ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi), ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು 2017 ರಲ್ಲಿ ರಾಮಕೃಷ್ಣ ಮಿಷನ್‌ನ 16 ನೇ ಅಧ್ಯಕ್ಷರಾದರು. ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ಮರಣಾನಂದ ಅವರಿಗೆ ಮೂತ್ರನಾಳ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಜನವರಿ 29ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾರ್ಚ್​3 ರಂದು ಅವರನ್ನು ಉಸಿರಾಟದ ಸಮಸ್ಯೆಯಿದ್ದ ಕಾರಣ ವೆಂಟಿಲೇಟರ್​ನಲ್ಲಿ ಇಡಲಾಗಿತ್ತು. ಮಾರ್ಚ್​ 2022ರಲ್ಲಿ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಸ್ಮರಣಾನಂದರು ತೀವ್ರ ಅನಾರೋಗ್ಯಕ್ಕೆ ಒಳಗಾದರು. ಆ ವೇಳೆ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಜನವರಿಯಲ್ಲಿ ಮತ್ತೆ ಅವರ ಆರೋಗ್ಯ ಹದಗೆಟ್ಟಿತ್ತು.

ಸ್ವಾಮಿ ಸ್ಮರಣಾನಂದರು 1929ರಲ್ಲಿ ತಮಿಳುನಾಡಿನ ತಾಂಜಾವೂರು ಜಿಲ್ಲೆಯ ಅಂಡಮಿ ಗ್ರಾಮದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡರು. 1946ರಲ್ಲಿ ಅವರು ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ನಾಸಿಕ್​ನಿಂದ ವಾಣಿಜ್ಯದಲ್ಲಿ ಡಿಪ್ಲೊಮಾ ಮಾಡಿದರು. 1949ರಲ್ಲಿ ಮುಂಬೈಗೆ ಸ್ಥಳಾಂತರಗೊಂಡರು. ರಾಮಕೃಷ್ಣ ಮತ್ತು ಸ್ವಾಮಿ ವಿವೇಕಾನಂದರ ವಿಚಾರಧಾರೆಯಿಂದ ಪ್ರೇರಿತರಾಗಿ ಮುಂಬೈನ ರಾಮಕೃಷ್ಣ ಮಿಷನ್​ಗೆ ಸೇರಿದರು. 1952ರಲ್ಲಿ ತಮ್ಮ 22ನೇ ವಯಸ್ಸಿನಲ್ಲಿ ಸ್ವಾಮಿಗಳು ಶಂಕರಾನಂದರಿಂದ ಧೀಕ್ಷೆ ಪಡೆದರು. ಸ್ವಾಮಿ ಸ್ಮರಣಾನಂದರು 1956ರಲ್ಲಿ ಬ್ರಹ್ಮಚರ್ಯವನ್ನು ಸ್ವೀಕರಿಸಿದರು.

ಮೋದಿ ಟ್ವೀಟ್

1958ರಲ್ಲಿ ಅವರು ಅದ್ವೈತ ಆಶ್ರಮದ ಕೋಲ್ಕತ್ತಾ ಶಾಖೆಯನ್ನು ತಲುಪಿದರು, ಅದ್ವೈತ ಶ್ರಮದ ವಿವಿಧ ಶಾಖೆಗಳಲ್ಲಿ 18 ವರ್ಷಗಳ ಕಾಲ ಕೆಲಸ ಮಾಡಿದರು. ವಿವೇಕಾನಂದರು ಆರಂಭಿಸಿದ್ದ ಪ್ರಬುದ್ಧ ಭಾರತ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿ ಕೆಲವ ವರ್ಷಗಳ ಕಾಲ ಕೆಲಸ ಮಾಡಿದ್ದರು.

ಸುಮಾರು 15 ವರ್ಷಗಳ ಕಾಲ ಕಾಮಕೃಷ್ಣ ಮಿಷನ್ ಶರದಾಪೀಠದ ಕಾರ್ಯದರ್ಶಿಯಾಗಿದ್ದರು. 1983ರಲ್ಲಿ ಅವರು ರಾಮಕೃಷ್ಣ ಮಿಷನ್​ನ ಆಡಳಿತ ಮಂಡಳಿಯ ಸದಸ್ಯರಾದರು. ಅವರು 1991ರಲ್ಲಿ ಚೆನ್ನೈನ ರಾಮಕೃಷ್ಣ ಮಿಷನ್ ಮುಖ್ಯಸ್ಥರಾಗಿ ನೇಮಕಗೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ