ರಾಮಲಲ್ಲಾನ ವಿಗ್ರಹ ಫೈನಲ್, ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ: ಬಿಮಲೇಂದ್ರ

ರಾಮಲಲ್ಲಾ ಮೂರ್ತಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅವಿರೋಧವಾಗಿ ಆಯ್ಕೆಯಾದ ವಿಗ್ರಹದ 'ಪ್ರಾಣ ಪ್ರತಿಷ್ಠೆಯನ್ನು ಮುಂದಿನ ತಿಂಗಳು ಜನವರಿ 22ರಂದು ಮಾಡಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ತಿಳಿಸಿದ್ದಾರೆ. ಇನ್ನು ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ, ನೀವು ಅದನ್ನು ಒಮ್ಮೆ ನೋಡಿದ್ರೆ ಮಂತ್ರಮುಗ್ಧರಾಗುತ್ತೀರಿ ಎಂದು ಹೇಳಿದ್ದಾರೆ.

ರಾಮಲಲ್ಲಾನ ವಿಗ್ರಹ ಫೈನಲ್, ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ: ಬಿಮಲೇಂದ್ರ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 30, 2023 | 12:54 PM

ಅಸಂಖ್ಯಾತ ರಾಮಭಕ್ತರು ಎಷ್ಟು ವರ್ಷಗಳಿಂದ ಶಬರಿಯಂತೆ ಕಾಯುತ್ತಿರುವ ರಾಮಮಂದಿರ ಉದ್ಟಾಟನೆ ಜನವರಿ 22ರಂದು ನಡೆಯಲಿದೆ. ಇದಕ್ಕೂ ಮುನ್ನ ರಾಮನ ಬಾಲ್ಯದಮೂರ್ತಿ (5 ವರ್ಷದ ಮಗುವಿನ ರೂಪದ ವಿಗ್ರಹ) ಆಯ್ಕೆಯಾಗಬೇಕು, ಅದಕ್ಕಾಗಿ ನೆನ್ನೆ ರಾಮಜನ್ಮಭೂಮಿ ಟ್ರಸ್ಟ್​​ ಸಭೆಯೊಂದನ್ನು ನಡೆಸಿ, ಮತ ಹಾಕುವ ಮೂಲಕ ರಾಮಲಲ್ಲಾ ಮೂರ್ತಿಯನ್ನು ಆಯ್ಕೆ ಮಾಡಲಾಗಿದೆ. ಮೂರು ಮೂರ್ತಿಗಳಲ್ಲಿ ಈಗ ಒಂದನ್ನು ಆಯ್ಕೆ ಮಾಡಲಾಗಿದೆ. ಈ ಆಯ್ಕೆಯಾದ ವಿಗ್ರಹವನ್ನು ಅಯೋಧ್ಯೆ ರಾಮಮಂದಿರದ ಗರ್ಭ ಗುಡಿಯಲ್ಲಿ ‘ಪ್ರಾಣ ಪ್ರತಿಷ್ಠೆ ಮಾಡಲಾಗುವುದು.

ರಾಮಲಲ್ಲಾ ಮೂರ್ತಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅವಿರೋಧವಾಗಿ ಆಯ್ಕೆಯಾದ ವಿಗ್ರಹದ ‘ಪ್ರಾಣ ಪ್ರತಿಷ್ಠೆಯನ್ನು ಮುಂದಿನ ತಿಂಗಳು ಜನವರಿ 22ರಂದು ಮಾಡಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ತಿಳಿಸಿದ್ದಾರೆ. ಇನ್ನು ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ, ನೀವು ಅದನ್ನು ಒಮ್ಮೆ ನೋಡಿದ್ರೆ ಮಂತ್ರಮುಗ್ಧರಾಗುತ್ತೀರಿ ಎಂದು ಹೇಳಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಕಾರ್ಯದರ್ಶಿ ಚಂಪತ್ ರೈ ಅವರು ಮಾತನಾಡಿ, ರಾಮ ಮೂರ್ತಿ ಆಯ್ಕೆ ಬಗ್ಗೆ ಸಭೆಯನ್ನು ಮಾಡಿ, ಮತ ಹಾಕುವ ಮೂಲಕ ಮೂರ್ತಿಯನ್ನು ಆಯ್ಕೆ ಮಾಡಲಾಗಿದೆ. ನಮ್ಮ ಮುಂದೆ ಹಲವಾರು ಮೂರ್ತಿಗಳನ್ನು ಒಟ್ಟಿಗೆ ಇರಿಸಿದರೂ, ಅದರಲ್ಲಿ ಯಾವುದು ಉತ್ತಮ ಎನ್ನುವುದನ್ನು ನಾವು ಆಯ್ಕೆ ಮಾಡಬೇಕಿತ್ತು. ಇದರಲ್ಲಿ ಒಂದು ಕಾಕತಾಳೀಯವೆಂದರೆ ನಾನು ಒಂದು ವಿಗ್ರಹವನ್ನು ಇಷ್ಟಪಟ್ಟಿದೆ. ಅದೇ ವಿಗ್ರಹಕ್ಕೆ ಎಲ್ಲರೂ ಮತ ಹಾಕಿದ್ದಾರೆ. ಇದು ಒಂದು ನನಗೆ  ಸಂತೋಷದ ವಿಷಯ ಎಂದು ಹೇಳಿದ್ದಾರೆ. ಈಗ ಈ ಬಗ್ಗೆ ಎಲ್ಲರೂ ಒಂದು ನಿರ್ಧಾರವನ್ನು ತೆಗೆದುಕೊಂಡು. ಸರ್ವಾನುಮತದಿಂದ ಆಯ್ಕೆಯಾದ ಮೂರ್ತಿಯನ್ನು ಪ್ರಾಣ ಪ್ರತಿಷ್ಠೆಗೆ ತರಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಶ್ರೀಮಂತ ಪರಂಪರೆ ಸಂರಕ್ಷಿಸಲು ಬದ್ಧರಾಗಿದ್ದೇವೆ: ಪ್ರಧಾನಿ ಮೋದಿ

ಅಯೋಧ್ಯೆಯ ರಾಮಮಂದಿರದಲ್ಲಿ ರಾಮ್ ಲಲ್ಲಾನ ಪ್ರಾಣ-ಪ್ರತಿಷ್ಠೆ ಸಮಾರಂಭವು ಜನವರಿ 22, 2024 ರಂದು ಮಧ್ಯಾಹ್ನ 12:20 ಕ್ಕೆ ನಡೆಯಲಿದೆ. ಮಂದಿರದ ಗರ್ಭಗುಡಿಯಲ್ಲಿ ರಾಮನ 5 ವರ್ಷದ ಮಗುವಿನ ರೂಪದ ವಿಗ್ರಹವನ್ನು ಇರಿಸಲಾಗುತ್ತದೆ ಎಂದು ಹೇಳಿದ್ದಾರೆ. ಮಹಾಮಸ್ತಕಾಭಿಷೇಕದ ನಂತರ ಭಕ್ತರು ರಾಮ್ ಲಲ್ಲಾನ ದರ್ಶನವನ್ನು ಪಡೆಯಬಹುದು. ಗರ್ಭ ಗೃಹವು ದೇವಾಲಯದ ಪ್ರಧಾನ ದೇವತೆಯ ವಾಸಸ್ಥಾನವಾಗಿ ಕಾರ್ಯನಿರ್ವಹಿಸುವುದರಿಂದ ಅತ್ಯಂತ ಮಹತ್ವದ್ದಾಗಿದೆ. ಅಯೋಧ್ಯೆಯ ರಾಮ ಮಂದಿರವು ಅದ್ಭುತವಾದ ಗರ್ಭಗುಡಿಯನ್ನು ಹೊಂದಿದ್ದು. ಇದು ವಿಶ್ವದ ಅತಿದೊಡ್ಡ ದೇವಾಲಯಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Sat, 30 December 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ