AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಭಾರೀ ಆಕ್ರೋಶ; ಕ್ಷಮೆ ಕೋರಿದ ಬಾಬಾ ರಾಮದೇವ್

ಇತ್ತೀಚೆಗಷ್ಟೇ ಮಹಾರಾಷ್ಟ್ರದ ಪುಣೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಬಾಬಾ ರಾಮದೇವ್ ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಹೇಳಿದ್ದರು.

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಭಾರೀ ಆಕ್ರೋಶ; ಕ್ಷಮೆ ಕೋರಿದ ಬಾಬಾ ರಾಮದೇವ್
ಬಾಬಾ ರಾಮ್‌ದೇವ್
TV9 Web
| Edited By: |

Updated on: Nov 29, 2022 | 2:13 PM

Share

ಮುಂಬೈ: ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಯೋಗ ಗುರು ಬಾಬಾ ರಾಮದೇವ್ (Baba Ramdev) ಇದೀಗ ಕ್ಷಮೆ ಯಾಚಿಸಿದ್ದಾರೆ. ಇತ್ತೀಚೆಗಷ್ಟೇ ಮಹಾರಾಷ್ಟ್ರದ ಪುಣೆಯಲ್ಲಿ (Pune)  ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಬಾಬಾ ರಾಮ್‌ದೇವ್, ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಹೇಳಿದ್ದರು. ಅವರು ಈ ಹೇಳಿಕೆ ನೀಡಿದಾಗ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವಿಸ್ (Amrita Fadnavis) ಕೂಡ ಆ ವೇದಿಕೆಯಲ್ಲಿದ್ದರು.

ಆ ಹೇಳಿಕೆಗೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ವಿರೋಧ ವ್ಯಕ್ತಪಡಿಸಿ ನೋಟಿಸ್ ನೀಡಿದ್ದರು. ಶಿವಸೇನೆ ಸಂಸದ ಸಂಜಯ್ ರಾವತ್ ಕೂಡ ವಾಗ್ದಾಳಿ ನಡೆಸಿದ್ದರು. ಬಳಿಕ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಕೂಡ ಮಹಿಳೆಯರ ವಿರುದ್ಧದ ರಾಮದೇವ್ ಹೇಳಿಕೆಗಳನ್ನು ಟೀಕಿಸಿದ್ದರು. ಅದಾದ ಬಳಿಕ ಇಂದು ಬಾಬಾ ರಾಮದೇವ್ ತಮ್ಮ ಹೇಳಿಕೆಯಿಂದ ಯಾರ ಮನಸಿಗಾದರೂ ನೋವಾಗಿದ್ದರೆ ಕ್ಷಮಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Ramdev Controversy: ಮಹಿಳೆಯರ ಬಗ್ಗೆ ಬಾಬಾ ರಾಮದೇವ್ ವಿವಾದಾತ್ಮಕ ಹೇಳಿಕೆ; ಈ ರೀತಿ ನಾಲಿಗೆ ಹರಿಬಿಟ್ಟಿದ್ದು ಇದೇ ಮೊದಲನೇನಲ್ಲ!

ಪತಂಜಲಿ ಯೋಗಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ಥಾಣೆಯಲ್ಲಿ ಆಯೋಜಿಸಿದ್ದ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಾಬಾ ರಾಮ್‌ದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಮಹಿಳೆಯರು ಸಲ್ವಾರ್​ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಅವರ ಪಕ್ಕದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಇದ್ದರು. ಬಾಬಾ ರಾಮದೇವ್ ಅವರ ಈ ಹೇಳಿಕೆಯಿಂದ ವೇದಿಕೆಯಲ್ಲಿದ್ದವರು ಮುಜುಗರಕ್ಕೀಡಾಗಿದ್ದರು.

ಮಹಿಳೆಯರ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಂದ ಮಹಾರಾಷ್ಟ್ರದಲ್ಲಿ ಆಕ್ರೋಶದ ಅಲೆ ಎದ್ದಿರುವಾಗ ರಾಮ್‌ದೇವ್ ಬಾಬಾ ಈ ರೀತಿ ಅಸಂಬದ್ಧವಾಗಿ ಮಾತನಾಡುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡು ಟ್ರೋಲ್ ಮಾಡಲಾಗಿತ್ತು.

ಇದನ್ನೂ ಓದಿ: Baba Ramdev: ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ; ಮತ್ತೆ ಟ್ರೋಲ್ ಆದ ಬಾಬಾ ರಾಮದೇವ್

ಈ ಕಾರ್ಯಕ್ರಮದಲ್ಲಿ ಮಹಿಳೆಯರು ಯೋಗಕ್ಕಾಗಿ ಉಡುಪುಗಳನ್ನು ತಂದಿದ್ದರು. ಕೆಲವರು ಸೀರೆಯುಟ್ಟು ಬಂದಿದ್ದರು. ಇನ್ನು ಕೆಲವರಿಗೆ ಯೋಗದ ಬಳಿಕ ಸೀರೆಯುಡಲು ಸಮಯ ಆಗಿರಲಿಲ್ಲವಾದ್ದರಿಂದ ಯೋಗದ ಡ್ರೆಸ್​ನಲ್ಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಈ ಹಿನ್ನೆಲೆಯಲ್ಲಿ ತಮಾಷೆಯಾಗಿ ಮಾತನಾಡಿದ ಬಾಬಾ ರಾಮದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್