Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಮಹಾರಾಷ್ಟ್ರ ರಾಜ್ಯಪಾಲರಾಗಿ ರಮೇಶ್ ಬೈಸ್ ಪ್ರಮಾಣವಚನ

Ramesh Bais Oath taking- ಮಹಾರಾಷ್ಟ್ರದ ರಾಜ್ಯಪಾಲರಾಗಿ ರಮೇಶ್ ಬೈಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಂದ ಪ್ರಮಾಣವಚನ ಪಡೆದಿದ್ದಾರೆ.

Maharashtra: ಮಹಾರಾಷ್ಟ್ರ ರಾಜ್ಯಪಾಲರಾಗಿ ರಮೇಶ್ ಬೈಸ್ ಪ್ರಮಾಣವಚನ
ರಮೇಶ್ ಬೈಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 18, 2023 | 1:43 PM

ಮುಂಬೈ: ರಮೇಶ್ ಬೈಸ್ ಇಂದು ಶನಿವಾರ ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ (Maharashtra New Governor) ಪ್ರಮಾಣ ವಚನ ಸ್ವೀಕರಸಿದ್ದಾರೆ. ಬಾಂಬೆ ಹೈಕೋರ್ಟ್​ನ ಹಂಗಾಮಿ ಮುಖ್ಯನ್ಯಾಯಾಧೀಶ ಎಸ್.ವಿ. ಗಂಗಾಪುರ್​ವಾಲ ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಿದರು. ಬೈಸ್ ಅವರು ಮರಾಠಿ ಭಾಷೆಯಲ್ಲಿ ವಚನ ಸ್ವೀಕರಿಸಿದರೆನ್ನಲಾಗಿದೆ.

ಈ ಸಂದರ್ಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ, ಸಂಪುಟ ಸದಸ್ಯರು, ಉನ್ನತ ಹಂತದ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಜಂಟಿ ಕಾರ್ಯದರ್ಶಿಗಳಾದ ಶ್ವೇತಾ ಸಿಂಘಲ್ ಮತ್ತು ಪ್ರಾಚಿ ಜಾಂಭೇಕರ್ ಮೊದಲಾದವರೂ ಪ್ರಮಾಣವಚನ ಸಮಾರಂಭದಲ್ಲಿ ಹಾಜರಿದ್ದರು.

ಹಿಂದಿನ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಸ್ಥಾನವನ್ನು ರಮೇಶ್ ಬೈಸ್ ತುಂಬಿದ್ದಾರೆ. 2019ರಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕವಾಗಿದ್ದ ಭಗತ್ ಸಿಂಗ್ ಕೋಶ್ಯಾರಿ ಕಳೆದ ವಾರ ರಾಜೀನಾಮೆ ನೀಡಿದ್ದರು. ಕೋಶ್ಯಾರಿ ಅವರಿಗೆ ನಿನ್ನೆ ರಾಜಭವನದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿತ್ತು. ಭಾರತೀಯ ನೌಕಾಪಡೆಯ ತಂಡವೊಂದು ನಿರ್ಗಮಿತ ರಾಜ್ಯಪಾಲರಿಗೆ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Green Sunglass: ಚಿಪ್ಸ್ ಪ್ಯಾಕೆಟ್‌ಗಳಿಂದ ತಯಾರಾಗುತ್ತಿವೆ ಸಖತ್ ಸನ್‌ಗ್ಲಾಸ್‌ಗಳು! ಇಲ್ಲಿದೆ ಒಂದು ಕಂಪನಿಯ ಅದ್ಬುತ ಕತೆ

ಇನ್ನು, ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿರುವ 75 ರಮೇಶ್ ಬೈಸ್ ಅಪಾರ ರಾಜಕೀಯ ಅನುಭವ ಇರುವವರು. ಈಗಿನ ಛತ್ತೀಸ್​ಗಡ ರಾಜಧಾನಿ ರಾಯಪುರ್​ನಲ್ಲಿ ಹುಟ್ಟಿದ ಅವರು ಬಿಜೆಪಿಯ ನಾಯಕರಾಗಿ ವಿವಿಧ ಸ್ತರಗಳಲ್ಲಿ ರಾಜಕೀಯ ಚಟುವಟಿಕೆ ನಡೆಸಿದ್ದಾರೆ. ಏಳು ಬಾರಿ ಸಂಸದರಾಗಿದ್ದಾರೆ. ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವರೂ ಆಗಿದ್ದರು. ಜಾರ್ಖಂಡ್ ಮತ್ತು ತ್ರಿಪುರಾದಲ್ಲಿ ರಾಜ್ಯಪಾಲರಾಗಿಯೂ ಕರ್ತವ್ಯ ನಿಭಾಯಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ

Published On - 1:26 pm, Sat, 18 February 23

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ