ಮಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ; 10 ಪ್ರಯಾಣಿಕರ ಸಾವು
Bharat Gaurav Special Train: ರಾಮೇಶ್ವರನಿಂದ ಕನ್ಯಾಕುಮಾರಿಗೆ ಹೊರಟ್ಟಿದ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹತ್ತು ಜನ ಸಾವನ್ನಪ್ಪಿದ್ದಾರೆ. ಇನ್ನು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಧುರೈ ಆ.26: ಮಧುರೈ (Madurai) ರೈಲು (Train) ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ಘಟನೆಯಲ್ಲಿ ಹತ್ತು ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಮೃತರು ಉತ್ತರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಮದುರೈನಲ್ಲಿ ನಿಲ್ಲಿಸಿದ್ದ ಈ ರೈಲು ತಿರುಪತಿ-ರಾಮೇಶ್ವರಂ-ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು.
ಪ್ರಾಥಮಿಕ ಮಾಹಿತಿ ಪ್ರಕಾರ ಈ ರೈಲಿನಲ್ಲಿದ್ದ ಭಕ್ತರು ಗ್ಯಾಸ್ ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ. ಒಂದು ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೇರೆ ಬೋಗಿಗಳಿಗೆ ಬೆಂಕಿ ವ್ಯಾಪಿಸಿದೆ. ರೈಲಿನಲ್ಲಿ 60ಕ್ಕೂ ಹೆಚ್ಚು ಮಂದಿ ಇದ್ದರು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನೂ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ. ಮೃತದೇಹಗಳನ್ನು ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ರವಾನಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: Indian Railway News: ರೈಲ್ವೆ ಇಲಾಖೆಯಿಂದ ಈ ಬಾರಿ ಹೆಚ್ಚು ಗಣಪತಿ ವಿಶೇಷ ರೈಲುಗಳ ಸಂಚಾರ
ಇಂದು ಮುಂಜಾನೆ 5:30 ರ ಸುಮಾರಿಗೆ ಮಧುರೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರಲ್ಲಿ ಉತ್ತರ ಪ್ರದೇಶದಿಂದ ಬಂದ ಯಾತ್ರಾರ್ಥಿಗಳು ಇದ್ದರು. ಕಾಫಿ ಮಾಡಲು ಗ್ಯಾಸ್ ಸ್ಟವ್ ಹೊತ್ತಿಸಿದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸದ್ಯಕ್ಕೆ ನಾವು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದ್ದೇವೆ ಎಂದು ಮಧುರೈ ಜಿಲ್ಲಾಧಿಕಾರಿ ಎಂಎಸ್ ಸಂಗೀತಾ ಹೇಳಿದ್ದಾರೆ.
ಶುಕ್ರವಾರ ನಾಗರ್‌ಕೋಯಿಲ್ ಜಂಕ್ಷನ್‌ನಲ್ಲಿ ರೈಲಿಗೆ ಖಾಸಗಿ ಕೋಚ್ ಅನ್ನು ಜೋಡಿಸಲಾಯಿತು. ಅಲ್ಲಿಂದ ರೈಲು ಮಧುರೈಗೆ ಬಂದ್ದು ನಿಂತಿದೆ. ಖಾಸಗಿ ಕೋಚ್‌ನಲ್ಲಿದ್ದ ಪ್ರಯಾಣಿಕರು ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಸಾಗಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ದಕ್ಷಿಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ಗುಗನೇಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾಸಗಿ ಪಾರ್ಟಿ ಕೋಚ್‌ನಲ್ಲಿನ ಪ್ರಯಾಣಿಕರು ಗ್ಯಾಸ್ ಸಿಲಿಂಡರ್ ಅನ್ನು ಕಳ್ಳಸಾಗಣೆ ಮಾಡಿದ್ದಾರೆ. ಇದರಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯನ್ನು ಗಮನಿಸಿದ ಅನೇಕ ಪ್ರಯಾಣಿಕರು ಕೋಚ್‌ನಿಂದ ಹೊರಬಂದಿದ್ದಾರೆ. ಕೆಲವು ಪ್ರಯಾಣಿಕರು ಪ್ಲಾಟ್‌ಫಾರ್ಮ್‌ನಲ್ಲಿಯೇ ಉಳಿದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:37 am, Sat, 26 August 23