AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷಪೂರಿತ ಭಾಷಣ ಪ್ರಕರಣ: SP ನಾಯಕ ಅಜಂ ಖಾನ್​ಗೆ ಜಾಮೀನು

ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ಅಜಂ ಖಾನ್​ಗೆ ರಾಂಪುರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ದ್ವೇಷಪೂರಿತ ಭಾಷಣ ಪ್ರಕರಣ: SP ನಾಯಕ ಅಜಂ ಖಾನ್​ಗೆ ಜಾಮೀನು
Azam Khan
TV9 Web
| Edited By: |

Updated on:Oct 27, 2022 | 6:04 PM

Share

ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ಅಜಂ ಖಾನ್​ಗೆ ರಾಂಪುರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಯೋಗಿ ಆದಿತ್ಯನಾಥ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಮತ್ತು ಮಾಜಿ ಸಚಿವ ಅಜಂ ಖಾನ್ (Azam Khan) ಅವರನ್ನು ದೋಷಿ ಎಂದು ಘೋಷಿಸಲಾಗಿತ್ತು. ರಾಂಪುರ ನ್ಯಾಯಾಲಯವು 3 ವಷಗಳ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತ್ತು. ಕಳೆದ ಮೇ ತಿಂಗಳಲ್ಲಿ ಅಜಂ ಖಾನ್ ಹೊರ ಬಂದಿದ್ದರು. ಅಂದಿನಿಂದ ಅವರು ನಿರಂತರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಪ್ರಕರಣದಲ್ಲಿ ಅಜಂ ಖಾನ್ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಲಾಗಿದೆ. ಮೂರು ಸೆಕ್ಷನ್‌ಗಳ ಅಡಿಯಲ್ಲಿ ಆಜಂ ಖಾನ್‌ಗೆ ಶಿಕ್ಷೆ ವಿಧಿಸಲಾಗಿತ್ತು. ಇದೀಗ ಅವರಿಗೆ ಜಾಮೀನು ಮಂಜೂರು ಮಾಡಿದೆ ರಾಂಪುರ ನ್ಯಾಯಾಲಯ.

ಮೋದಿ ಮತ್ತು ಯೋಗಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಅಜಂ ಖಾನ್‌ಗೆ ಶಿಕ್ಷೆ ವಿಧಿಸಲಾಗಿತ್ತು. ರಾಮ್‌ಪುರ ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿತ್ತು. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಂಪುರದಲ್ಲಿ ನಡೆದ ಸಭೆಯಲ್ಲಿ ಅಜಂ ಖಾನ್ ಅವರು ಮೋದಿ ಮತ್ತು ಯೋಗಿ ವಿರುದ್ಧ ಅಸಭ್ಯ ಟೀಕೆಗಳನ್ನು ಮಾಡಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ಇತ್ತೀಚೆಗೆ ಪೂರ್ಣಗೊಂಡಿತ್ತು. ಇಂದು ರಾಂಪುರ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಇದೀಗ 3 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಿತ್ತು. ಆದರೆ ಇದೀಗ ನ್ಯಾಯಲಯ ಜಾಮೀನು ನೀಡಿದೆ.

ಇದನ್ನು ಓದಿ: Azam Khan: ಯೋಗಿ ವಿರುದ್ಧ ಉದ್ರೇಕಕಾರಿ ಭಾಷಣ, ಅಜಂ ಖಾನ್​ಗೆ 3 ವರ್ಷ ಜೈಲು ಶಿಕ್ಷೆ

2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಿಲ್ಲತ್ ಪ್ರದೇಶದಲ್ಲಿ ಭಾಷಣ ಮಾಡುವಾಗ ಅಜಂ ಖಾನ್ ಪ್ರಧಾನಿ ಮೋದಿ ಮತ್ತು ಯೋಗಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದರು. ಪ್ರಚೋದನಕಾರಿ ಭಾಷಣ ಮಾಡಿದ ಅವರು, ದೇಶದ ಪರಿಸ್ಥಿತಿಗೆ ಪ್ರಧಾನಿ ಮೋದಿಯೇ ಕಾರಣ ಎಂದು ಆರೋಪಿಸಿದ್ದರು. ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಪ್ರಚೋದನಕಾರಿ ಹೇಳಿಕೆಯನ್ನೂ ನೀಡಿದ್ದರು. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ನಾಯಕ ಆಕಾಶ್ ಸಕ್ಸೇನಾ ಅವರು ಅಜಂ ಖಾನ್ ವಿರುದ್ಧ ಅಸಭ್ಯ ಹೇಳಿಕೆ ಪ್ರಕರಣದಲ್ಲಿ ಕೇಸ್ ದಾಖಲಿಸಿದ್ದರು

Published On - 5:52 pm, Thu, 27 October 22

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ