ಕಾಂಗ್ರೆಸ್​ಗೆ ಮತ್ತೊಂದು ಆಘಾತ, ಅಸ್ಸಾಂ ಕಾಂಗ್ರೆಸ್​ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಣಾ ಗೋಸ್ವಾಮಿ ರಾಜೀನಾಮೆ

ಅಸ್ಸಾಂ ಕಾಂಗ್ರೆಸ್​ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಣಾ ಗೋಸ್ವಾಮಿ ರಾಜೀನಾಮೆ ನೀಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸರ್ಕಾರವನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ಕಾಂಗ್ರೆಸ್​ಗೆ ಇದು ಬಹುದೊಡ್ಡ ಆಘಾತವನ್ನು ತಂದೊಡ್ಡಿದೆ.

ಕಾಂಗ್ರೆಸ್​ಗೆ ಮತ್ತೊಂದು ಆಘಾತ, ಅಸ್ಸಾಂ ಕಾಂಗ್ರೆಸ್​ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಣಾ ಗೋಸ್ವಾಮಿ ರಾಜೀನಾಮೆ
ರಾಣಾ ಗೋಸ್ವಾಮಿ
Follow us
|

Updated on:Feb 28, 2024 | 12:46 PM

ಕಾಂಗ್ರೆಸ್​ನ ಹಿರಿಯ ನಾಯಕ ರಾಣಾ ಗೋಸ್ವಾಮಿ(Rana Goswami) ಅವರು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಕ್ರಿಯ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈಗಾಗಲೇ ಹಿಮಾಚಲ ಪ್ರದೇಶದಲ್ಲಿ ಅಧಿಕಾರವನ್ನು ಕಳೆದುಕೊಳ್ಳುವ ಭಯದಲ್ಲಿರುವ ಕಾಂಗ್ರೆಸ್​ಗೆ ಈಗ ಮತ್ತೊಂದು ಆತಂಕ ಶುರುವಾಗಿದೆ.

ಅಸ್ಸಾಂನ ಸಾಂಸ್ಥಿಕ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಸ್ಸಾಂ ಕಾಂಗ್ರೆಸ್ ಹಿರಿಯ ನಾಯಕ ರಾಣಾ ಗೋಸ್ವಾಮಿ ಅವರು ಮಾರ್ಚ್ 4 ರಂದು ಬಿಜೆಪಿಗೆ ಸೇರುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇಎನ್ಇ ವರದಿ ಮಾಡಿದೆ. ರಾಣಾ ಗೋಸ್ವಾಮಿ ಅವರು ಮಾರ್ಚ್ 4 ರಂದು ಸರಿಸುಮಾರು 11.29 ಕ್ಕೆ ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ವರದಿಯ ಪ್ರಕಾರ, ರಾಣಾ ಗೋಸ್ವಾಮಿ ಫೆಬ್ರವರಿ 28 ರಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ಯೋಜಿಸಿದ್ದಾರೆ.

ಮತ್ತಷ್ಟು ಓದಿ: Himachal Pradesh Political Crisis: ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ

ವಿವಿಧ ರಾಜಕೀಯ ಕಾರಣಗಳಿಂದಾಗಿ ರಾಣಾ ಗೋಸ್ವಾಮಿ ಅವರು ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ನಿನ್ನೆ ಸಂಜೆ ರಾಣಾ ಗೋಸ್ವಾಮಿ ಅವರು ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದು, ನಂತರ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು.

ಗೋಸ್ವಾಮಿ ಪತ್ರ

ಕೆಲವು ದಿನಗಳ ಹಿಂದೆ ಅಸ್ಸಾಂನ ಕಾಂಗ್ರೆಸ್​ನ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರು ಒಕ್ಷದಲ್ಲಿ ಉಳಿದುಕೊಂಡೇ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಲು ನಿರ್ಧರಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:34 pm, Wed, 28 February 24

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ