AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಜಾರ್ಖಂಡ್ ರಾಜಧಾನಿ ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಮಂಗಳವಾರ ಮಧ್ಯರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಬಾಂಬ್ ಎಸೆದಿದ್ದರೂ, ಸಕಾಲಿಕ ಕ್ರಮದಿಂದ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಹಾನಿ ಸಂಭವಿಸಿಲ್ಲ. ಸಿಸಿಟಿವಿ ದೃಶ್ಯಾವಳಿಗಳಿಂದ ದುಷ್ಕರ್ಮಿಗಳನ್ನು ಗುರುತಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Video: ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪೆಟ್ರೋಲ್ Image Credit source: X Account Sarwesh
ನಯನಾ ರಾಜೀವ್
|

Updated on: Jun 17, 2026 | 10:53 AM

Share

ರಾಂಚಿ, ಜೂನ್ 17: ಜಾರ್ಖಂಡ್ ರಾಜಧಾನಿ ರಾಂಚಿಯ ನಿವಾರಣ್‌ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಾಂತೀಯ ಕಚೇರಿಯ ಮೇಲೆ ಮಂಗಳವಾರ ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಸಕಾಲದಲ್ಲಿ ಮುನ್ನೆಚ್ಚರಿಕೆ ವಹಿಸಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಪ್ರಮಾಣದ ಆಸ್ತಿ ಹಾನಿ ಸಂಭವಿಸಿಲ್ಲ.

ಮಂಗಳವಾರ ಮಧ್ಯರಾತ್ರಿ ಸುಮಾರು 12.36 ರ ವೇಳೆಗೆ ಈ ದಾಳಿ ನಡೆದಿದೆ. ಬುಧವಾರ ಮುಂಜಾನೆ ಆರ್‌ಎಸ್‌ಎಸ್ ಸ್ವಯಂಸೇವಕರು ಪ್ರಾರ್ಥನೆಗಾಗಿ ಸಭಾಂಗಣಕ್ಕೆ ಹೋದಾಗ ಅಲ್ಲಿ ಪೆಟ್ರೋಲ್ ತುಂಬಿದ್ದ ಬಾಟಲಿಗಳು ಪತ್ತೆಯಾಗಿವೆ. ಇದರಿಂದ ಅನುಮಾನಗೊಂಡು ಕಚೇರಿಯ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಇಬ್ಬರು ಯುವಕರು ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ದಾಳಿಯ ಸಮಯದಲ್ಲಿ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ನಿದ್ರಿಸುತ್ತಿದ್ದರು.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಕೇಂದ್ರ ರಕ್ಷಣಾ ರಾಜ್ಯ ಸಚಿವ ಸಂಜಯ್ ಸೇಠ್, ಜಾರ್ಖಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಹಾಗೂ ನೂರಾರು ಆರ್‌ಎಸ್‌ಎಸ್ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದರು. ಇದು ಅತ್ಯಂತ ಗಂಭೀರವಾದ ವಿಷಯವಾಗಿದ್ದು, ಯಾವುದೋ ದೊಡ್ಡ ಸಂಚಿಗೆ ಸಿದ್ಧತೆ ನಡೆದಂತೆ ಕಾಣುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದು, ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ ಎಂದು ಬಾಬುಲಾಲ್ ಮರಾಂಡಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು

ಮಾಹಿತಿ ಸಿಗುತ್ತಿದ್ದಂತೆಯೇ ಸದರ್ ಡಿಎಸ್‌ಪಿ ನೇತೃತ್ವದ ದೊಡ್ಡ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿ ಇಡೀ ಕಚೇರಿಯನ್ನು ಸುತ್ತುವರೆದಿದೆ. ವಿಧಿವಿಜ್ಞಾನ ತಂಡವು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಕಚೇರಿಯ ಸುತ್ತಮುತ್ತಲಿನ ರಸ್ತೆಗಳ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ದಾಳಿಕೋರರ ಪತ್ತೆಗೆ ಜಾಲ ಬೀಸಿದ್ದಾರೆ.

ವಿಡಿಯೋ

ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರಲ್ಲಿ ಆತಂಕ ಮೂಡಿದ್ದು, ಮುಂಜಾಗ್ರತಾ ಕ್ರಮವಾಗಿ ಕಚೇರಿಯ ಸುತ್ತಲೂ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕೆಂದು ರಾಂಚಿ ಜಿಲ್ಲಾ ಆಡಳಿತ ಮನವಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ