ರಾಹುಲ್ ಗಾಂಧಿ ಕಂಡರೆ ಬಿಜೆಪಿಗೆ ಭಯ: ರಣದೀಪ್ ಸುರ್ಜೇವಾಲ ವ್ಯಂಗ್ಯ

| Updated By: ನಯನಾ ರಾಜೀವ್

Updated on: Jun 14, 2022 | 12:15 PM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)ಯನ್ನು ಕಂಡರೆ ಬಿಜೆಪಿಗೆ ಭಯ ಎಂದು ಕಾಂಗ್ರೆಸ್ ಮುಖ್ಯ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ(ED)ವು ಸಮನ್ಸ್ ನೀಡಿರುವ ಕುರಿತು ಮಾತನಾಡಿರುವ ಅವರು, ಯಾವಾಗಲೂ ನಿರುದ್ಯೋಗ, ಹಣದುಬ್ಬರ, ಚೀನಾದ ಒಳನುಸುಳುವಿಕೆ ವಿಷಯವನ್ನು ಪ್ರಸ್ತಾಪಿಸುತ್ತಲೇ ಇರುತ್ತಾರೆ.

ರಾಹುಲ್ ಗಾಂಧಿ ಕಂಡರೆ ಬಿಜೆಪಿಗೆ ಭಯ: ರಣದೀಪ್ ಸುರ್ಜೇವಾಲ ವ್ಯಂಗ್ಯ
Randeep Surjewala
Follow us on

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)ಯನ್ನು ಕಂಡರೆ ಬಿಜೆಪಿಗೆ ಭಯ ಎಂದು ಕಾಂಗ್ರೆಸ್ ಮುಖ್ಯ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ(ED)ವು ಸಮನ್ಸ್ ನೀಡಿರುವ ಕುರಿತು ಮಾತನಾಡಿರುವ ಅವರು, ಯಾವಾಗಲೂ ನಿರುದ್ಯೋಗ, ಹಣದುಬ್ಬರ, ಚೀನಾದ ಒಳನುಸುಳುವಿಕೆ ವಿಷಯವನ್ನು ಪ್ರಸ್ತಾಪಿಸುತ್ತಲೇ ಇರುತ್ತಾರೆ.

ರಾಹುಲ್ ಗಾಂಧಿಯು ಹಣದುಬ್ಬರ, ಪೆಟ್ರೋಲ್, ಡೀಸೆಲ್ ದರ ಏರಿಕೆ ಏರಿಕೆ ವಿಚಾರವಾಗಿ ಗಟ್ಟಿ ಧ್ವನಿಯಲ್ಲಿ ಕೇಂದ್ರ ಸರ್ಕಾರದೆದುರು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸುತ್ತಾರೆ. ಇದೇ ಕಾರಣದಿಂದಾಗಿ ರಾಹುಲ್ ಗಾಂಧಿಯನ್ನು ಕಂಡರೆ ಕೇಂದ್ರ ಸರ್ಕಾರಕ್ಕೆ ಆಗುವುದಿಲ್ಲ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯದೆದುರು ಎರಡನೇ ದಿನದ ವಿಚಾರಣೆ ಎದುರಿಸಲಿದ್ದಾರೆ.

ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ, ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿ ಇಡಿ ಕಚೇರಿ ತಲುಪಿದ್ದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಜೂ. 8ರಂದು ಹಾಗೂ ಸಂಸದ ರಾಹುಲ್ ಗಾಂಧಿಗೆ ಜೂ. 13ರಂದು ಫೆಡರಲ್ ಏಜೆನ್ಸಿಯ ಎದುರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಮಾಡಲಾಗಿತ್ತು.

ಕಾಂಗ್ರೆಸ್ ಇದನ್ನು ವಿರೋಧಿಸಿದ್ದು, ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ ಮತ್ತಿತರ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪ ಮಾಡಿತ್ತು.

‘ನ್ಯಾಷನಲ್‌ ಹೆರಾಲ್ಡ್‌’ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿಯನ್ನು ವಿಚಾರಣೆಗೆ ಒಳಪಡಿಸಿತ್ತು. ಪ್ರಥಮ ಸುತ್ತಿನಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ 50ರಲ್ಲಿ ಲಿಖಿತ ಹೇಳಿಕೆಯನ್ನು ರಾಹುಲ್‌ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನ್ಯಾಷನಲ್‌ ಹೆರಾಲ್ಡ್‌ ಆಸ್ತಿಯ ಮೂಲ ಮೌಲ್ಯ ಎಷ್ಟಿದೆ? ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ನೀವೇನು ಸ್ಪಷ್ಟನೆ ನೀಡುತ್ತೀರಿ ಎಂಬುದರ ಕುರಿತು ರಾಹುಲ್​ಗೆ ಪ್ರಶ್ನೆಗಳನ್ನು ಕೇಳಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ. ವಿಚಾರಣೆ ಪೂರ್ಣಗೊಂಡಿರದ ಕಾರಣ ಇಂದು ಮತ್ತೆ ವಿಚಾರಣೆ ನಡೆಯುತ್ತಿದೆ.

ನ್ಯಾಷನಲ್ ಹೆರಾಲ್ಡ್​ ಪ್ರಕರಣ

ನ್ಯಾಷನಲ್ ಹೆರಾಲ್ಡ್ ಪ್ರಕರಣವು ಜವಾಹರಲಾಲ್ ನೆಹರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಬಗ್ಗೆಯಿದೆ. ಇದೀಗ ಇದರ ಮಾಲೀಕತ್ವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ