Ranjeet Murder Case: ರಂಜೀತ್ ಕೊಲೆ ಪ್ರಕರಣ, ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್ ಖುಲಾಸೆ

|

Updated on: May 28, 2024 | 11:55 AM

ರಂಜೀತ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್​ ರಹೀಮ್​ರನ್ನು ಹೈಕೋರ್ಟ್​ ಖುಲಾಸೆಗೊಳಿಸಿದೆ.

Ranjeet Murder Case: ರಂಜೀತ್ ಕೊಲೆ ಪ್ರಕರಣ, ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್ ಖುಲಾಸೆ
Follow us on

ರಂಜೀತ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್​ ರಹೀಮ್​(Gurmeet Ram Rahim) ರನ್ನು ಹೈಕೋರ್ಟ್​ ಖುಲಾಸೆಗೊಳಿಸಿದೆ. ರಂಜೀತ್​ ಸಿಂಗ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ಗುರ್ಮೀತ್​ ರಾಮ್ ರಹೀಮ್ ಸೇರಿ ಒಟ್ಟು ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ರಾಮ್​ ರಹೀಮ್​ ದೋಷಿ ಎಂದು ತೀರ್ಪು ನೀಡಿತ್ತು. ಸಿಬಿಐ ನ್ಯಾಯಲಯದ ತೀರ್ಪನ್ನು ರಾಮ್​ ರಹೀಮ್ ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು.

ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಸಿಬಿಐ ಕೋರ್ಟ್ ಪಂಚಕುಲ ಗುರ್ಮೀತ್ ರಾಮ್ ರಹೀಮ್‌ಗೆ 2021 ರಲ್ಲಿ ಜೀವಾವಧಿ ಶಿಕ್ಷೆ ಮತ್ತು 31 ಲಕ್ಷ ರೂಪಾಯಿ ದಂಡ ವಿಧಿಸಿತ್ತು. 2002ರಲ್ಲಿ ರಂಜೀತ್ ಸಿಂಗ್ ಕೊಲೆಯಾಗಿದ್ದರು.

ಇದು 22 ವರ್ಷಗಳ ಹಳೆಯ ಪ್ರಕರಣವಾಗಿದ್ದು, ಸಿಬಿಐ ನ್ಯಾಯಾಲಯವು 19 ವರ್ಷಗಳ ನಂತರ ರಾಮ್ ರಹೀಮ್ ದೋಷಿ ಎಂದು ತೀರ್ಪು ನೀಡಿತ್ತು. ಜುಲೈ 10, 2002 ರಂದು ಕುರುಕ್ಷೇತ್ರ ಜಿಲ್ಲೆಯ ಖಾನ್‌ಪುರ್ ಕೊಲ್ಯಾನ್ ಗ್ರಾಮದ ತನ್ನ ಹೊಲಗಳ ಬಳಿ ರಂಜಿತ್ ಸಿಂಗ್ ಕ್ಯಾಂಪ್‌ನ ಮ್ಯಾನೇಜರ್ ಆಗಿದ್ದರು. ರಂಜಿತ್ ಕೊಲೆಯಾದ ಒಂದು ವರ್ಷದ ನಂತರ, 2003 ರಲ್ಲಿ, ಅವರ ಕುಟುಂಬವು ಕೊಲೆಯ ತನಿಖೆಯನ್ನು ಸಿಬಿಐಗೆ ಕೇಳಿತ್ತು.

ಆದರೆ ಆಗಿನ ಸರ್ಕಾರ ಅವರ ಮಾತಿಗೆ ಕಿವಿಗೊಡಲಿಲ್ಲ. ಇದಾದ ನಂತರ ಅವರ ಕುಟುಂಬ ಸದಸ್ಯರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮೊರೆ ಹೋಗಿದ್ದರು. ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ.
ನಾಲ್ಕು ವರ್ಷಗಳ ನಂತರ, ಅಂದರೆ 2007 ರಲ್ಲಿ, ಸಿಬಿಐ ಕೆಲವು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು ಅವರ ವಿರುದ್ಧ ಪ್ರಕರಣ ದಾಖಲಿಸಿತು. ಅದೇ ಸಮಯದಲ್ಲಿ, ಈ ವರ್ಷ ಸಿಬಿಐ ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತು. ಅಂದಿನಿಂದ ಈ ಪ್ರಕರಣದ ವಿಚಾರಣೆ ನಿರಂತರವಾಗಿ ಮುಂದುವರೆಯಿತು.

ಅಕ್ಟೋಬರ್ 18, 2021 ರಂದು ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಗುರ್ಮೀತ್ ರಾಮ್ ರಹೀಮ್ ದೋಷಿ ಎಂದು ತೀರ್ಪು ನೀಡಿತ್ತು. ನ್ಯಾಯಾಲಯ ರಾಮ್ ರಹೀಮ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸೇರಿದಂತೆ 5 ಅಪರಾಧಿಗಳನ್ನು ಖುಲಾಸೆಗೊಳಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:43 am, Tue, 28 May 24