Ranjit Savarkar: ಸಾವರ್ಕರ್ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತುಪಡಿಸಿ: ರಾಹುಲ್​ ಗಾಂಧಿಗೆ ಸಾರ್ವಕರ್ ಮೊಮ್ಮಗ ಸವಾಲು

|

Updated on: Mar 28, 2023 | 10:21 AM

ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದರು ಎಂಬುದನ್ನು ಸಾಬೀತುಪಡಿಸಿ ಎಂದು ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದಾರೆ.

Ranjit Savarkar: ಸಾವರ್ಕರ್ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತುಪಡಿಸಿ: ರಾಹುಲ್​ ಗಾಂಧಿಗೆ ಸಾರ್ವಕರ್ ಮೊಮ್ಮಗ ಸವಾಲು
ರಾಹುಲ್ ಗಾಂಧಿ
Image Credit source: Indian Express
Follow us on

ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದರು ಎಂಬುದನ್ನು ಸಾಬೀತುಪಡಿಸಿ ಎಂದು ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದಾರೆ. ಇಂತಹ ಹೇಳಿಕೆಗಳನ್ನು ಬಾಲಿಶ ಎಂದು ಕರೆದಿರುವ ರಂಜಿತ್, ಸಾವರ್ಕರ್ ಕ್ಷಮೆಯಾಚಿಸಿದ್ದರು ಎಂಬುದನ್ನು ದಾಖಲೆ ಸಮೇತ ಸಾಬೀತುಪಡಿಸಿ ಎಂದು ಹೇಳಿದ್ದಾರೆ.
ರಾಜಕೀಯ ಪ್ರಚಾರಕ್ಕಾಗಿ ದೇಶಭಕ್ತರ ಹೆಸರನ್ನು ಬಳಸುವುದು ತಪ್ಪು, ಇವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಹೇಳಿದ್ದಾರೆ.

ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ. ನಾನು ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದರು. ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ವಿಚಾರಕ್ಕೆ ಸಂಬಂಧಿಸಿದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದರು.

ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಅವರು ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ಪ್ರಧಾನಿ ಮೋದಿ ಅವರ ಕಣ್ಣುಗಳಲ್ಲಿ ನಾನು ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ ಎಂದು ಹೇಳಿದರು.

ಮತ್ತಷ್ಟು ಓದಿ: ಕನಸಿನಲ್ಲಿಯೂ ನೀವು ವೀರ್ ಸಾವರ್ಕರ್ ಆಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಟಾಂಗ್​ ಕೊಟ್ಟ ಅನುರಾಗ್ ಠಾಕೂರ್

ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತಾರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ರಾಹುಲ್‌ ಗಾಂಧಿ ಬಯಸಿದ್ದರು ಎಂಬ ಬಿಜೆಪಿಯ ಆರೋಪಗಳನ್ನು ಅವರು ನಿರಾಕರಿಸಿದ ಅವರು, ಲಂಡನ್‌ನಲ್ಲಿ ನೀಡಿದ ಹೇಳಿಕೆಗಳ ಮೇಲಿನ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಕೇಳಿದ್ದೇನೆ ಎಂದು ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ