Gurmeet Ram Rahim ರಂಜಿತ್ ಸಿಂಗ್ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದಾದ ಗುರ್ಮೀತ್ ರಾಮ್ ರಹೀಮ್, ಇತರ ನಾಲ್ಕು ಮಂದಿಗೆ ಜೀವಾವಧಿ ಶಿಕ್ಷೆ

Ranjit Singh murder case ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಡೇರಾ ಸಚ್ಚಾ ಸೌದಾದ (Dera Sacha Sauda) ಗುರ್ಮೀತ್ ರಾಮ್ ರಹೀಮ್ (Gurmeet Ram Rahim) ಮತ್ತು ಇತರ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Gurmeet Ram Rahim ರಂಜಿತ್ ಸಿಂಗ್ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದಾದ ಗುರ್ಮೀತ್ ರಾಮ್ ರಹೀಮ್, ಇತರ ನಾಲ್ಕು ಮಂದಿಗೆ ಜೀವಾವಧಿ ಶಿಕ್ಷೆ
ಗುರ್ಮೀತ್ ರಾಮ್ ರಹೀಮ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 18, 2021 | 5:32 PM

ದೆಹಲಿ: ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ (Ranjit Singh murder case) ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಡೇರಾ ಸಚ್ಚಾ ಸೌದಾದ (Dera Sacha Sauda) ಗುರ್ಮೀತ್ ರಾಮ್ ರಹೀಮ್ (Gurmeet Ram Rahim) ಮತ್ತು ಇತರ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಮ್ ರಹೀಮ್​​ಗೆ 31 ಲಕ್ಷ ರೂ ಮತ್ತು ಉಳಿದ ಆರೋಪಿಗಳಿಗೆ 50 ಸಾವಿರ ದಂಡ ವಿಧಿಸಲಾಗಿದೆ. ಕ್ರಿಶನ್ ಲಾಲ್, ಜಸ್ಬೀರ್ ಸಿಂಗ್, ಅವತಾರ್ ಸಿಂಗ್ ಮತ್ತು ಸಬ್ದಿಲ್ ಈ ಅಪರಾಧಕ್ಕೆ ಶಿಕ್ಷೆಗೊಳಗಾದ ಇತರ ಆರೋಪಿಗಳು. ಡೇರಾ ಮಾಡಿದ ಕಲ್ಯಾಣ ಕಾರ್ಯಗಳನ್ನು ಉಲ್ಲೇಖಿಸಿ ದೇರಾ ಮುಖ್ಯಸ್ಥರು ವಿನಮ್ರತೆಯನ್ನು ಕೋರಿದ್ದರು. ಆದರೆ, ಸಿಬಿಐ ಇದನ್ನು ವಿರೋಧಿಸಿತು ಮತ್ತು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ‘ಗರಿಷ್ಠ ಶಿಕ್ಷೆ’ಗೆ ಒತ್ತಾಯಿಸಿತು. ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಕಳೆದ ವಾರ ಅವರನ್ನು ದೋಷಿಗಳೆಂದು ಘೋಷಿಸಿತ್ತು.

ಬಿಗಿ ಭದ್ರತೆ ವ್ಯವಸ್ಥೆಗಳ ನಡುವೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.  2017 ರಲ್ಲಿ ತನ್ನ ಇಬ್ಬರು ಶಿಷ್ಯರನ್ನು ಅತ್ಯಾಚಾರ ಮಾಡಿದ ಆರೋಪದ ನಂತರ ಪ್ರಸ್ತುತ ರೋಹ್ಟಕ್‌ನ ಸುನಾರಿಯಾ ಜೈಲಿನಲ್ಲಿರುವ ಡೇರಾ ಮುಖ್ಯಸ್ಥರ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾದರು, ಇತರ ನಾಲ್ವರು ನ್ಯಾಯಾಲಯದಲ್ಲಿ ಹಾಜರಿದ್ದರು.

ಕೊಲೆ ಪ್ರಕರಣದ ಓರ್ವ ಆರೋಪಿ ಒಂದು ವರ್ಷದ ಹಿಂದೆ ಮೃತಪಟ್ಟಿದ್ದ.  ಮಾಜಿ ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಈ ಪಂಥದ ಅನುಯಾಯಿಯೂ ಆಗಿದ್ದು, 2002 ರಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟರು.

ಅನಾಮಧೇಯ ಪತ್ರದ ಪ್ರಸಾರದಲ್ಲಿ ಆತನ ಶಂಕಿತ ಪಾತ್ರಕ್ಕಾಗಿ ಆತನನ್ನು ಕೊಲೆ ಮಾಡಲಾಗಿದೆ. ಈ ಪತ್ರವು ಇದು ಡೇರಾ ಮುಖ್ಯಸ್ಥರಿಂದ ಮಹಿಳೆಯರನ್ನು ಹೇಗೆ ಲೈಂಗಿಕವಾಗಿ ಶೋಷಣೆಗೊಳಗಾಗುತ್ತಿದ್ದಾರೆ ಎಂಬುದನ್ನು ವಿವರಿಸುತ್ತದೆ.

ಸಿಬಿಐ ಚಾರ್ಜ್ ಶೀಟ್ ಪ್ರಕಾರ ಡೇರಾ ಮುಖ್ಯಸ್ಥರು ಅನಾಮಧೇಯ ಪತ್ರದ ಚಲಾವಣೆಯ ಹಿಂದೆ ರಂಜಿತ್ ಸಿಂಗ್ ಇದ್ದಾರೆ ಎಂದು ನಂಬಿದ್ದರು ಮತ್ತು ಆತನನ್ನು ಕೊಲ್ಲಲು ಸಂಚು ರೂಪಿಸಿದ್ದರು. ಎರಡು ವರ್ಷಗಳ ಹಿಂದೆ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆಗಾಗಿ ಗುರ್ಮೀತ್​​ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಇದನ್ನೂ ಓದಿ: ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಸ್ವಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್ ದೋಷಿ

Published On - 5:05 pm, Mon, 18 October 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್