AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ
ನ್ಯಾಯಾಲಯದ ಆವರಣದಲ್ಲಿ ನಡೆದ ವಿವಾಹ
Lakshmi Hegde
|

Updated on:Mar 16, 2021 | 3:38 PM

Share

ಪಾಟ್ನಾ: ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿ ನಂತರ ಶಿಕ್ಷೆಯಿಂದ ಪಾರಾಗಲು ಜಿಲ್ಲಾ ಕೋರ್ಟ್​ನ ಆವರಣದಲ್ಲೇ ಆಕೆಯನ್ನು ಮದುವೆಯಾದ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ನಡೆದಿದೆ. ಇವರಿಬ್ಬರ ಕುಟುಂಬಗಳ ಮಾತುಕತೆಯ ಬಳಿಕ, ಮುಸ್ಲಿಂ ಧರ್ಮಗುರು ವಿವಾಹ ಮಾಡಿಸಿದ್ದಾರೆ. ಆರೋಪಿಯ ಹೆಸರು ಮೊಹಮ್ಮದ್​ ರಾಜಾ ಎಂದಾಗಿದ್ದು, ರಹೀಮ್​ಪುರ ರುದೌಲಿ ಗ್ರಾಮದಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ್ದ. ಈತನ ವಿರುದ್ಧ POCSO ಕಾಯ್ದೆಯಡಿ ಮುಸ್ಸಾರಿ ಘರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೊಹಮ್ಮದ್ ರಾಜಾನನ್ನು ಬಂಧಿಸಿದ್ದ ಪೊಲೀಸರು ಜೈಲಿಗೆ ಹಾಕಿದ್ದರು. ಹಾಗೇ ಪ್ರಕರಣದ ವಿಚಾರಣೆ ಪೋಕ್ಸೊ ಕೋರ್ಟ್​​ನಲ್ಲಿ ನಡೆದಿತ್ತು. ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆಯನ್ನೂ ನೀಡಬಹುದಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಯೋಚನೆ ಮಾಡಿದ. ಹೀಗಾಗಿ ಹುಡುಗಿಯ ಮನೆಯವರ ಬಳಿ, ಈತನ ಮನೆಯವರು ಮಾತುಕತೆ ನಡೆಸಿದರು. ಎರಡೂ ಕಡೆಯಿಂದ ಒಪ್ಪಿಗೆ ಸಿಕ್ಕ ಬಳಿಕ ಮೊಹಮ್ಮದ್​ ರಾಜಾ ಆಕೆಯನ್ನು ವಿವಾಹವಾಗಿದ್ದಾನೆ.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ. ಮೊಹಮ್ಮದ್​ ರಾಜಾನಿಗೆ ಜಾಮೀನು ಸಿಕ್ಕಿತೋ, ವಿಚಾರಣೆ ಮುಂದೂಡಲ್ಪಟ್ಟಿದೆಯೋ ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಅದಲ್ಲದೆ ಆಕೆ ಅಪ್ರಾಪ್ತೆ ಆಗಿದ್ದರಿಂದ ಬಾಲ್ಯ ವಿವಾಹ ಎಂದು ಪರಿಗಣಿಸಲ್ಪಡುವ ಸಾಧ್ಯತೆಯೂ ಇರತ್ತದೆ.

Published On - 3:36 pm, Tue, 16 March 21

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ