AICC ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು
ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿಪಿ ಮಾಧವನ್ ವಿರುದ್ಧ ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ನವದೆಹಲಿ: ಸೋನಿಯಾ ಗಾಂಧಿ (Sonia Gandhi) ಅವರ ಆಪ್ತ ಕಾರ್ಯದರ್ಶಿ (Personal Secretary) ಪಿಪಿ ಮಾಧವನ್ ವಿರುದ್ಧ ದೆಹಲಿಯ (Delhi) ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ (Police Station) ಅತ್ಯಾಚಾರ ಪ್ರಕರಣ (Rape Case) ದಾಖಲಾಗಿದೆ. 26 ವರ್ಷದ ಮಹಿಳೆಗೆ (Woman) ಉದ್ಯೋಗ ನೀಡುವುದಾಗಿ ಮತ್ತು ಮದುವೆಯಾಗುವುದಾಗಿ ನಂಬಿಸಿ ಮಾಧವನ್ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಪಿಟಿಐ ವರದಿ ಮಾಡಿದೆ.
ಮಹಿಳೆ ದೆಹಲಿಯಲ್ಲಿ ವಾಸಿಸುತ್ತಿದ್ದು, ಮಹಿಳೆಯ ಪತಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಪತಿ 2020 ರಲ್ಲಿ ನಿಧನರಾಗಿದ್ದಾರೆ. ಪತಿಯ ಮರಣದ ನಂತರ ಮಹಿಳೆ ಉದ್ಯೋಗವನ್ನು ಹುಡುಕುತ್ತಿದ್ದರು. ಈ ವೇಳೆ ಮಹಿಳೆ ಪಿಪಿ ಮಾಧವನ್ ಅವರ ಸಂಪರ್ಕಕ್ಕೆ ಬಂದಿದ್ದಾರೆ. ಮಹಿಳೆಗೆ ಉದ್ಯೋಗ ಕೊಡಿಸುವುದಾಗಿ ಮತ್ತು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನು ಓದಿ: ಈ ಮೀನು ಮಾರಾಟವಾಗಿದ್ದು ಬರೋಬ್ಬರಿ 13 ಲಕ್ಷ ರೂಪಾಯಿಗೆ! ಇದರ ದರ ಯಾಕಿಷ್ಟು ದುಬಾರಿ? ಇಲ್ಲಿದೆ ಮಾಹಿತಿ
ಜೂನ್ 25 ರಂದು ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆ ನಡೆಸುತ್ತಿದ್ದೇವೆ ದ್ವಾರಕಾ ಉಪ ಪೊಲೀಸ್ ಆಯುಕ್ತ ಎಂದು ಎಂ ಹರ್ಷ ವರ್ಧನ್ ಹೇಳಿದ್ದಾರೆ. 71 ವರ್ಷದ ಮಾಧವನ್ ಮಹಿಳೆಯನ್ನು ಮದುವೆಯಾಗಲು ಬಯಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆಯ ಒಪ್ಪಿಗೆಯಿಲ್ಲದೆ ದೈಹಿಕ ಸಂಬಂಧ ಬೆಳೆಸಲು ಯತ್ನಿಸಿದ್ದರು ಎಂದು ದೂರಿನಲ್ಲಿ ದಾಖಲಾಗಿದೆ.
“ಫೆಬ್ರವರಿ 2020 ರಲ್ಲಿ ನನ್ನ ಗಂಡನ ಮರಣದ ನಂತರ, ನಾನು ಕೆಲಸ ಹುಡುಕಲು ಪ್ರಾರಂಭಿಸಿದೆ ಮತ್ತು ಮಾಧವನ್ ಅವರೊಂದಿಗೆ ಸಂಪರ್ಕದಲ್ಲಿದ್ದೆ. ಅವರು ಮೊದಲು ನನ್ನನ್ನು ಸಂದರ್ಶನಕ್ಕೆ ಕರೆದರು. ಅವರು ವೀಡಿಯೊ ಕರೆಗಳನ್ನು ಮತ್ತು ನನ್ನೊಂದಿಗೆ WhatsApp ನಲ್ಲಿ ಚಾಟ್ ಮಾಡುತ್ತಿದ್ದರು,” ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
“ಅವರು ನನ್ನನ್ನು ಉತ್ತಮ್ ನಗರ ಮೆಟ್ರೋ ನಿಲ್ದಾಣದ ಬಳಿಯಿರುವ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದರು ಮತ್ತು ಅವರ ಕಾರಿನೊಳಗೆ ನನ್ನ ಮೇಲೆ ಅತ್ಯಾಚಾರವೆಸಗಿದರು . ಫೆಬ್ರವರಿ 2022 ರಲ್ಲಿ, ಅವರು ನನ್ನನ್ನು ಸುಂದರ್ ನಗರದ ಫ್ಲಾಟ್‌ಗೆ ಕರೆದೊಯ್ದು ನನ್ನ ಒಪ್ಪಿಗೆಯಿಲ್ಲದೆ ನನ್ನ ಮೇಲೆ ಅತ್ಯಾಚಾರವೆಸಗಿದರು ಎಂದು ಮಹಿಳೆ ಆರೋಪಿಸಿದ್ದಾರೆ.