Madhya Pradesh: ಮಧ್ಯಪ್ರದೇಶದಲ್ಲಿ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ರಾತ್ರಿ ನಡೆದಿದೆ.

Madhya Pradesh: ಮಧ್ಯಪ್ರದೇಶದಲ್ಲಿ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ

Updated on: May 06, 2023 | 12:20 PM

ಛತ್ತರ್‌ಪುರ: 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ರಾತ್ರಿ ನಡೆದಿದೆ. ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 24 ವರ್ಷದ ಆರೋಪಿಯನ್ನು ಬಂಧಿಸಿರುವುದಾಗಿ ಛತ್ತರ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್ ಸಂಘಿ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಬಾಲಕಿಯನ್ನು ಗ್ವಾಲಿಯರ್ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ, ಅಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತರ್‌ಪುರದ ರಾಜನಗರ ಉಪವಿಭಾಗದ ಪೊಲೀಸ್ ಅಧಿಕಾರಿ ಮನಮೋಹನ್ ಸಿಂಗ್ ತಿಳಿಸಿರುವ ಪ್ರಕಾರ, ಮಗು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ನೆರೆಹೊರೆಯಲ್ಲಿ ವಾಸಿಸುವ ಆರೋಪಿಗಳು ಅವಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Uttar Pradesh: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಯ ಬಂಧನ

ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ