ಉತ್ತರ ಪ್ರದೇಶ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅತ್ಯಾಚಾರ ಸಂತ್ರಸ್ತೆ

ಮೀರತ್‌ನಲ್ಲಿ ನಡೆದ ಕುಂದುಕೊರತೆ ನಿವಾರಣಾ ಕಾರ್ಯಕ್ರಮದ ವೇಳೆ ಅತ್ಯಾಚಾರ ಸಂತ್ರಸ್ತೆಯೊಬ್ಬರು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅತ್ಯಾಚಾರ ಸಂತ್ರಸ್ತೆ
ಬೆಂಕಿ
Image Credit source: India Today

Updated on: Nov 05, 2023 | 9:33 AM

ಮೀರತ್‌ನಲ್ಲಿ ನಡೆದ ಕುಂದುಕೊರತೆ ನಿವಾರಣಾ ಕಾರ್ಯಕ್ರಮದ ವೇಳೆ ಅತ್ಯಾಚಾರ ಸಂತ್ರಸ್ತೆಯೊಬ್ಬರು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಅವರ ಮಾಹಿತಿ ಪ್ರಕಾರ, ಮಹಿಳಾ ಹಾಗೂ ಆಕೆಯ ಕುಟುಂಬದವರು ಬೆಂಕಿ ಹಚ್ಚಿಕೊಳ್ಳಳು ಬೇಕಾದ ಎಲ್ಲಾ ವಸ್ತುಗಳನ್ನು ಮೊದಲೇ ತಂದಿದ್ದರು. ಅತ್ಯಾಚಾರ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು ಎಂದು ಹೇಳಿದ್ದಾರೆ.

ಹಾಗೆಯೇ ಕುಟುಂಬದವರಿಂದ ಆ ವಸ್ತುಗಳೆಲ್ಲವನ್ನೂ ಪೊಲೀಸರು ತೆಗೆದುಕೊಂಡು ಹೋಗಿದ್ದು, ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ.

ಸರೂರ್‌ಪುರ ಪೊಲೀಸರ ಪ್ರಕಾರ, ಸುಮಾರು ಆರು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಆ ಸಮಯದಲ್ಲಿ ಅಪ್ರಾಪ್ತ ಬಾಲಕಿ ತನ್ನ ಗ್ರಾಮದ ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಳು.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಈ ಸಂಬಂಧ ಈ ಹಿಂದೆ ದೂರು ದಾಖಲಾಗಿದ್ದು, ತನಿಖೆ ನಡೆಸಿದಾಗ ಆರೋಪಿಗಳು ಘಟನೆ ನಡೆದಾಗ ಸ್ಥಳದಲ್ಲಿ ಇರಲಿಲ್ಲ ಎಂದು ಹೇಳಿದ್ದಾನೆ, ಆ ಸಮಯದಲ್ಲಿ ಪಂಜಾಬ್‌ನಲ್ಲಿದ್ದೆ ಎಂದಿರುವುದಾಗಿ ಎಸ್‌ಎಸ್‌ಪಿ ತಿಳಿಸಿದ್ದಾರೆ.

ಎಸ್‌ಡಿಎಂ ಪಂಕಜ್ ಪ್ರಕಾಶ್ ರಾಥೋಡ್ ಮಾತನಾಡಿ, ಈ ಘಟನೆ ಸರೂರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ, ಈ ಪ್ರಕರಣದಲ್ಲಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ