AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolkata: 7 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಮರಣದಂಡನೆ

ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ರಾಜೀವ್ ಘೋಷ್‌ಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪನ್ನು ನೀಡಿದೆ. ಈ ಘಟನೆಯನ್ನು ಅಪರೂಪದಲ್ಲಿ ಅಪರೂಪ ಎಂದು ನ್ಯಾಯಾಲಯ ಘೋಷಿಸಿದೆ. ಮಗುವಿನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿದೆ.

Kolkata: 7 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಮರಣದಂಡನೆ
ತೀರ್ಪು Image Credit source: The Amikus Qriae
ನಯನಾ ರಾಜೀವ್
|

Updated on: Feb 19, 2025 | 2:56 PM

Share

ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ರಾಜೀವ್ ಘೋಷ್‌ಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪನ್ನು ನೀಡಿದೆ. ಈ ಘಟನೆಯನ್ನು ಅಪರೂಪದಲ್ಲಿ ಅಪರೂಪ ಎಂದು ನ್ಯಾಯಾಲಯ ಘೋಷಿಸಿದೆ. ಮಗುವಿನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿದೆ.

ಘಟನೆ ಬಗ್ಗೆ ವಿವರ ಈ ಭಯಾನಕ ಘಟನೆ 2024ರ ನವೆಂಬರ್​ನಲ್ಲಿ ನಡೆದಿದೆ. ಕೋಲ್ಕತ್ತಾದ ಬರ್ತೊಲ್ಲಾ ಪ್ರದೇಶದಲ್ಲಿ ನಡೆದಿದೆ. ಈ ದಂಪತಿಗೆ ಸರಿಯಾದ ಸೂರಿರಲಿಲ್ಲ, ಫುಟ್​ಬಾತ್​ನಲ್ಲೇ ಮಲಗಿಕೊಳ್ಳುತ್ತಿದ್ದರು. ಶಿಶು ಕಾಣೆಯಾಗಿತ್ತು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಕೆಲ ಗಂಟೆಗಳ ಬಳಿಕ ತೀವ್ರ ಗಾಯಗಳಿಂದ ಮಳಲುತ್ತಿದ್ದ ಮಗು ಫುಟ್​ಪಾತ್​ನಲ್ಲಿ ಮಲಗಿ ಅಳುತ್ತಿರುವುದು ಕಂಡುಬಂದಿತ್ತು. ವೈದ್ಯಕೀಯ ಪರೀಕ್ಷೆ ವೇಳೆ ಗುಪ್ತಾಂಗದಲ್ಲಿ ಗಾಯಗಳು ಕಂಡುಬಂದಿದ್ದವು. ಆಗ ಅತ್ಯಾಚಾರ ನಡೆದಿದೆ ಎಂಬುದು ದೃಢಪಟ್ಟಿತ್ತು.

ಮತ್ತಷ್ಟು ಓದಿ: ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ; ಗಲ್ಲು ಶಿಕ್ಷೆ ನೀಡಲು ಇದು ಅತ್ಯಪರೂಪದ ಕೇಸಲ್ಲ ಎಂದ ಕೋರ್ಟ್

ಘಟನೆ ಬಳಿಕ ಪೊಲೀಸರು ಪ್ರದೇಶದ ಸುತ್ತಮುತ್ತಲಿನ ದೃಶ್ಯಾವಳಿಗಳನ್ನು ಬಳಸಿಕೊಂಡು ಆರೋಪಿ ರಾಜೀವ್​ ಘೋಷ್​ನನ್ನು ಪತ್ತೆ ಮಾಡಿದ್ದರು. ಅಪರಾಧ ನಡೆದ ಕೆಲವು ದಿನಗಳ ನಂತರ, ಕಳೆದ ವರ್ಷ ಡಿಸೆಂಬರ್ 4 ರಂದು ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ನಲ್ಲಿ ಘೋಷ್‌ನನ್ನು ಬಂಧಿಸಲಾಯಿತು.

ತನಿಖೆಯನ್ನು ತ್ವರಿತವಾಗಿ ಮುಗಿಸಿ, 26 ದಿನಗಳಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಯಿತು. ಪ್ರಕರಣವನ್ನು ತ್ವರಿತವಾಗಿ ವಿಚಾರಣೆಗೆ ಒಳಪಡಿಸಲಾಯಿತು, ಇದು ತ್ವರಿತ ವಿಚಾರಣೆಗೆ ಕಾರಣವಾಯಿತು. ಫೆಬ್ರವರಿ 17, 2025 ರಂದು, ನ್ಯಾಯಾಲಯವು ಘೋಷ್ ಅವರನ್ನು ಪೋಕ್ಸೋ ಕಾಯ್ದೆಯ ಸೆಕ್ಷನ್ 6 ಅಡಿಯಲ್ಲಿ ತಪ್ಪಿತಸ್ಥನೆಂದು ಘೋಷಿಸಿತು.

ಮಗುವಿನ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದು, ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ