Ratan Tata: ರತನ್ ಟಾಟಾಗೆ ಭಾರತ ರತ್ನ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಓರ್ವ ವ್ಯಕ್ತಿಗೆ ಭಾರತ ರತ್ನ ನೀಡಲು ಸರ್ಕಾರಕ್ಕೆ ಆದೇಶ ನೀಡಲು ಕೋರ್ಟ್​ಗೆ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರನ್ನೊಳಗೊಂಡ ಪೀಠ ಹೇಳಿದೆ.

Ratan Tata: ರತನ್ ಟಾಟಾಗೆ ಭಾರತ ರತ್ನ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್
ರತನ್ ಟಾಟಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Mar 31, 2022 | 6:31 PM

ನವದೆಹಲಿ: ಪ್ರಮುಖ ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರಿಗೆ ಭಾರತ ರತ್ನ (Bharat Ratna) ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಓರ್ವ ವ್ಯಕ್ತಿಗೆ ಅತ್ಯುನ್ನತ ನಾಗರಿಕ ಗೌರವವನ್ನು ನೀಡುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್​ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ನೇತೃತ್ವದ ಪೀಠ ತೀರ್ಪು ನೀಡಿದೆ. “ಇದು ಯಾವ ರೀತಿಯ ಅರ್ಜಿ? ಓರ್ವ ವ್ಯಕ್ತಿಗೆ ಭಾರತ ರತ್ನ ನೀಡಲು ಸರ್ಕಾರಕ್ಕೆ ಆದೇಶ ನೀಡಲು ಕೋರ್ಟ್​ಗೆ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರನ್ನೊಳಗೊಂಡ ಪೀಠ ಹೇಳಿದೆ.

ಇಂತಹ ವಿಷಯಕ್ಕೆಲ್ಲ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವುದು ಸರಿಯಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ. ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡ ರಾಕೇಶ್ ಅವರು ತಮ್ಮ ಮನವಿಯಲ್ಲಿ ರತನ್ ಟಾಟಾ ಅವರು ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿರುವ ಕಾರಣ ಮತ್ತು ನಿಷ್ಕಳಂಕ ಜೀವನವನ್ನು ಹೊಂದಿರುವುದರಿಂದ ಭಾರತ ರತ್ನಕ್ಕೆ ಅರ್ಹರು ಎಂದು ಹೇಳಿದ್ದಾರೆ. ರತನ್ ಟಾಟಾ ಜಗತ್ತಿನಾದ್ಯಂತ ಲಕ್ಷಾಂತರ ವೃತ್ತಿ ಆಕಾಂಕ್ಷಿಗಳನ್ನು ಪ್ರೇರೇಪಿಸುವ ಅನುಕರಣೀಯ ಜೀವನವನ್ನು ನಡೆಸಿದ್ದಾರೆ ಮತ್ತು ಅತ್ಯುತ್ತಮ ನಾಯಕ ಮತ್ತು ವ್ಯಾಪಾರ ಮಾಲೀಕರೆಂದು ಸಾಬೀತುಪಡಿಸಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

‘ಇದು ಯಾವ ರೀತಿಯ ಮನವಿ? ಓರ್ವ ವ್ಯಕ್ತಿಗೆ ಭಾರತರತ್ನ ನೀಡಲು ಸೂಚಿಸುವಂತೆ ನ್ಯಾಯಾಲಯಕ್ಕೆ ನಿರ್ದೇಶನ ನೀಡುವಂತಿದೆ ಈ ಅರ್ಜಿ’ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ವೆಚ್ಚದೊಂದಿಗೆ ಅರ್ಜಿಯನ್ನು ವಜಾಗೊಳಿಸುವುದಾಗಿ ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಅರ್ಜಿಯನ್ನು ಹಿಂಪಡೆಯಲಾಗಿದೆ.

ರತನ್ ಟಾಟಾ ಅಭಿಮಾನಿಗಳು ಭಾರತ ರತ್ನಕ್ಕೆ ಬೇಡಿಕೆಯಿಟ್ಟಿದ್ದಾರೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರಚಾರ ನಡೆಸಿದ್ದಾರೆ. ಕಳೆದ ವರ್ಷ ಫೆಬ್ರವರಿಯಲ್ಲಿ ರತನ್ ಟಾಟಾ ತಮ್ಮ ಅನುಯಾಯಿಗಳಿಗೆ ಇಂತಹ ಅಭಿಯಾನಗಳನ್ನು ನಿಲ್ಲಿಸುವಂತೆ ಮನವಿ ಮಾಡಿದ್ದರು. “ಸಾಮಾಜಿಕ ಮಾಧ್ಯಮದ ಒಂದು ವಿಭಾಗವು ಪ್ರಶಸ್ತಿಯ ವಿಷಯದಲ್ಲಿ ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಪ್ರಶಂಸಿಸುತ್ತೇನೆ. ಅಂತಹ ಅಭಿಯಾನಗಳನ್ನು ನಿಲ್ಲಿಸಬೇಕೆಂದು ನಾನು ವಿನಮ್ರವಾಗಿ ವಿನಂತಿಸಲು ಬಯಸುತ್ತೇನೆ. ಅದರ ಬದಲಿಗೆ, ಭಾರತೀಯನಾಗಿರಲು ಮತ್ತು ಭಾರತದ ಬೆಳವಣಿಗೆಗೆ ಪ್ರಯತ್ನಿಸಲು ಮತ್ತು ಕೊಡುಗೆ ನೀಡಲು ನಾನು ಅದೃಷ್ಟಶಾಲಿ ಎಂದುಕೊಂಡಿದ್ದೇನೆ” ಎಂದು ರತನ್ ಟಾಟಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ನನಗೆ ಎ.ಆರ್ ರೆಹಮಾನ್ ಯಾರೆಂದೇ ಗೊತ್ತಿಲ್ಲ, ಭಾರತರತ್ನ ಪ್ರಶಸ್ತಿ ನನ್ನಪ್ಪನ ಉಗುರಿಗೆ ಸಮ; ವಿವಾದಕ್ಕೀಡಾದ ಖ್ಯಾತ ನಟ

ಮನೆಯಲ್ಲಿದ್ದ ಆಸ್ಕರ್​ ಟ್ರೋಫಿ ಕಳೆದುಹಾಕಿದ್ದ ಎ.ಆರ್​. ರೆಹಮಾನ್​; ಸಂಗೀತ ನಿರ್ದೇಶಕನ ಸಿನಿ ಪಯಣಕ್ಕೆ 29 ವರ್ಷ

Published On - 6:30 pm, Thu, 31 March 22

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್