ಭಾರತದ ಅಭಿವೃದ್ಧಿ ಪಯಣದಲ್ಲಿ ರತನ್ ಟಾಟಾ ಕೊಡುಗೆ ಅವಿಸ್ಮರಣೀಯ: ಮೋಹನ್ ಭಾಗವತ್

ಭಾರತದ ಅಭಿವೃದ್ಧಿ ಪಯಣದಲ್ಲಿ ರತನ್ ಟಾಟಾ ಕೊಡಗು ಅವಿಸ್ಮರಣೀಯವಾದದ್ದು ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಕೂಡ ಸಂತಾಪ ಸೂಚಿಸಿದ್ದಾರೆ.

ಭಾರತದ ಅಭಿವೃದ್ಧಿ ಪಯಣದಲ್ಲಿ ರತನ್ ಟಾಟಾ ಕೊಡುಗೆ ಅವಿಸ್ಮರಣೀಯ: ಮೋಹನ್ ಭಾಗವತ್
ಮೋಹನ್ ಭಾಗವತ್Image Credit source: PTI
Follow us
|

Updated on: Oct 10, 2024 | 12:06 PM

ಭಾರತದ ಅಭಿವೃದ್ಧಿ ಪಯಣದಲ್ಲಿ ರತನ್ ಟಾಟಾ ಕೊಡಗು ಅವಿಸ್ಮರಣೀಯವಾದದ್ದು ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಕೂಡ ಸಂತಾಪ ಸೂಚಿಸಿದ್ದಾರೆ.

ರತನ್ ಟಾಟಾ ಅವರ ಕೊಡುಗೆ ಸ್ಮರಣೀಯವಾಗಿ ಉಳಿಯುತ್ತದೆ ಮತ್ತು ಅವರು ಉದ್ಯಮದಲ್ಲಿ ಅನೇಕ ಮಾನದಂಡಗಳನ್ನು ಸ್ಥಾಪಿಸಿದ್ದಾರೆ ಎಂದು ಹೇಳಿದರು. ದೇಶದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ನಿಧನವು ಅತ್ಯಂತ ದುಃಖಕರವಾಗಿದೆ.

ಅವರ ನಿಧನದಿಂದ ದೇಶ ತನ್ನ ಅಮೂಲ್ಯ ರತ್ನವೊಂದನ್ನು ಕಳೆದುಕೊಂಡಿದೆ.ಭಾರತದ ಅಭಿವೃದ್ಧಿ ಪಯಣಕ್ಕೆ ಅವರ ಕೊಡುಗೆ ಸ್ಮರಣೀಯವಾಗಿ ಉಳಿಯುತ್ತದೆ. ಉದ್ಯಮದ ಪ್ರಮುಖ ಕ್ಷೇತ್ರಗಳಲ್ಲಿ ಅನೇಕ ಹೊಸ ಮತ್ತು ಪರಿಣಾಮಕಾರಿ ಉಪಕ್ರಮಗಳ ಜೊತೆಗೆ ರತನ್ ಟಾಟ್ ಅನೇಕ ಉತ್ತಮ ಮಾನದಂಡಗಳನ್ನು ಸ್ಥಾಪಿಸಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Ratan Tata: ಪೋಷಕರ ವಿಚ್ಛೇದನ, ತಂದೆಯೊಂದಿಗೆ ಭಿನ್ನಾಭಿಪ್ರಾಯ, ಅಂದು ರತನ್ ಪಾಲಿಗೆ ಇದ್ದಿದ್ದು ಅಜ್ಜಿಯೊಬ್ಬರೇ

ಸಮಾಜದ ಹಿತಾಸಕ್ತಿಗಳಿಗೆ ಅನುಕೂಲಕರವಾದ ಎಲ್ಲಾ ರೀತಿಯ ಕೆಲಸಗಳಲ್ಲಿ ಅವರ ನಿರಂತರ ಸಹಕಾರ ಮತ್ತು ಭಾಗವಹಿಸುವಿಕೆ ಇದ್ದೇ ಇತ್ತು. ದೇಶದ ಏಕತೆ ಮತ್ತು ಭದ್ರತೆಯ ವಿಷಯವಾಗಲಿ ಅಥವಾ ಅಭಿವೃದ್ಧಿಯ ಯಾವುದೇ ಅಂಶವಾಗಲಿ ಅಥವಾ ಅವರ ಉದ್ಯೋಗಿಗಳ ಕಲ್ಯಾಣವಾಗಲಿ, ರತನ್ ಟಾಟಾ ಅವರು ತಮ್ಮ ವಿಶಿಷ್ಟ ಚಿಂತನೆ ಮತ್ತು ಕೆಲಸದಿಂದ ಸ್ಪೂರ್ತಿದಾಯಕವಾಗಿದ್ದರು.

ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ತಡರಾತ್ರಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಪದ್ಮವಿಭೂಷಣ ರತನ್ ಟಾಟಾ ಅವರು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ರಾತ್ರಿ 11.30ಕ್ಕೆ ನಿಧನರಾದರು. ರತನ್ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ರವರೆಗೆ ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್‌ಸಿಪಿಎ) ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರತನ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ಅವರು ಭಾರತ ಸರ್ಕಾರದ ಪರವಾಗಿ ರತನ್ ಟಾಟಾ ಅವರಿಗೆ ಗೌರವ ಸಲ್ಲಿಸಲಿದ್ದಾರೆ.

ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಲಾವೋಸ್‌ಗೆ ತೆರಳುತ್ತಿರುವ ಕಾರಣ ಅಮಿತ್ ಶಾ ಅವರು ಕೈಗಾರಿಕೋದ್ಯಮಿಯ ಅಂತಿಮ ಸಂಸ್ಕಾರಕ್ಕಾಗಿ ಮುಂಬೈಗೆ ತೆರಳಲಿದ್ದಾರೆ. ರತನ್ ಟಾಟಾ ಅವರ ನಿಧನದ ನಂತರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ಇಂದು ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ