ನೀವಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳುವುದು ಕಷ್ಟ, ರತನ್ ಟಾಟಾ ನಿಧನ, ಮಾಜಿ ಪ್ರೇಯಸಿ ಸಿಮಿ ಭಾವುಕ ಪೋಸ್ಟ್​

ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರ ನಿಧನದ ಹಿನ್ನೆಲೆ ಮಾಜಿ ಪ್ರೇಯಸಿ ಸಿಮಿ ಗರೆವಾಲ್​ ಭಾವುಕ ಪೋಸ್ಟ್​ ಮಾಡಿದ್ದಾರೆ. ಭಾರತದ ರತ್ನ ಎಂದು ಕರೆಯಲ್ಪಡುವ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ನೀವಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳುವುದು ಕಷ್ಟ, ರತನ್ ಟಾಟಾ ನಿಧನ, ಮಾಜಿ ಪ್ರೇಯಸಿ ಸಿಮಿ ಭಾವುಕ ಪೋಸ್ಟ್​
ಸಿಮಿ
Follow us
ನಯನಾ ರಾಜೀವ್
|

Updated on: Oct 10, 2024 | 10:27 AM

ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರ ನಿಧನದ ಹಿನ್ನೆಲೆ ಮಾಜಿ ಪ್ರೇಯಸಿ ಸಿಮಿ ಗರೆವಾಲ್​ ಭಾವುಕ ಪೋಸ್ಟ್​ ಮಾಡಿದ್ದಾರೆ. ಭಾರತದ ರತ್ನ ಎಂದು ಕರೆಯಲ್ಪಡುವ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ರತನ್ ಟಾಟಾ ಅವರ ಹಠಾತ್ ನಿಧನದ ಸುದ್ದಿ ಕೇಳಿ ಎಲ್ಲರೂ ತೀವ್ರ ದುಃಖಿತರಾಗಿದ್ದಾರೆ. ವ್ಯಾಪಾರ ಜಗತ್ತಿನೊಂದಿಗೆ ಸಂಬಂಧ ಹೊಂದಿರುವ ಪ್ರಸಿದ್ಧ ವ್ಯಕ್ತಿಗಳಿಂದ ಹಿಡಿದು ರಾಜಕೀಯ ಮತ್ತು ಬಾಲಿವುಡ್‌ ನಟರವರೆಗೂ ಎಲ್ಲರೂ ಸಂತಾಪ ವ್ಯಕ್ತಪಡಿಸಿದ್ದಾರೆ.

ರತನ್ ಟಾಟಾ ಅವರ ನಿಧನದಿಂದ ಬಾಲಿವುಡ್ ಹಿರಿಯ ನಟಿ ಸಿಮಿ ಗರೆ​ವಾಲ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಸಿಮಿ ಅವರು ರತನ್ ಟಾಟಾ ಅವರ ನಿಧನದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಬರೆಯುವ ಮೂಲಕ ಅವರಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.

ಮತ್ತಷ್ಟು ಓದಿ: Ratan Tata: ಪೋಷಕರ ವಿಚ್ಛೇದನ, ತಂದೆಯೊಂದಿಗೆ ಭಿನ್ನಾಭಿಪ್ರಾಯ, ಅಂದು ರತನ್ ಪಾಲಿಗೆ ಇದ್ದಿದ್ದು ಅಜ್ಜಿಯೊಬ್ಬರೇ

ಫೋಟೊವೊಂದನ್ನು ಅವರು ಹಂಚಿಕೊಂಡಿದ್ದಾರೆ, ನೀವು ಹೋಗಿದ್ದೀರೆಂದು ಎಲ್ಲರೂ ಹೇಳುತ್ತಿದ್ದಾರೆ, ನೀವು ನಮ್ಮ ಜತೆ ಇಲ್ಲ ಎನ್ನುವ ಸತ್ಯವನ್ನು ಅರಗಿಸಿಕೊಳ್ಳುವುದು ತುಂಬಾ ಕಷ್ಟ, ಹೋಗಿಬನ್ನಿ ನನ್ನ ಸ್ನೇಹಿತ ಎಂದು ಬರೆದಿದ್ದಾರೆ. ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರೊಂದಿಗಿನ ಸಂಬಂಧದ ಬಗ್ಗೆ 2011 ರಲ್ಲಿ ನೀಡಿದ ಸಂದರ್ಶನದಲ್ಲಿ ಖ್ಯಾತ ಹಿಂದಿ ಸಿನಿಮಾ ನಟಿ ಸಿಮಿ ಸ್ವತಃ ಬಹಿರಂಗಪಡಿಸಿದ್ದರು.

ಸಿಮಿ ಅವರು ಪರಿಪೂರ್ಣ ವ್ಯಕ್ತಿ, ಹಾಸ್ಯ ಪ್ರಜ್ಞೆ ಕೂಡ ಚೆನ್ನಾಗಿತ್ತು, ಸಭ್ಯರು, ಎಂದೂ ಶ್ರೀಮಂತಿಕೆ ತೋರ್ಪಡಿಸಿರಲಿಲ್ಲ ಎಂದು ಹೇಳಿದ್ದರು. ಇಷ್ಟು ಆತ್ಮೀಯವಾಗಿದ್ದರೂ ರತನ್ ಹಾಗೂ ಸಿಮಿಯ ಪ್ರೀತಿ ಹೆಚ್ಚು ದಿನ ಉಳಿಯಲಿಲ್ಲ, ಸಿಮಿ ಬೇರೊಬ್ಬರನ್ನು ಮದುವೆಯಾದರು, ಸಾಕಷ್ಟು ವರ್ಷಗಳ ಕಾಲ ಸಿಮಿ ಹಾಗೂ ರತನ್ ಒಳ್ಳೆಯ ಸ್ನೇಹಿತರಾಗಿದ್ದರು.

ಸಂದರ್ಶನವೊಂದರಲ್ಲಿ ಸ್ವತಃ ರತನ್ ಟಾಟಾ ಅವರು ನಾಲ್ಕು ಬಾರಿ ಪ್ರೀತಿಯಲ್ಲಿ ಬಿದ್ದಿದ್ದರೂ ಅದು ಮದುವೆಯ ಹಂತವನ್ನು ತಲುಪಲಿಲ್ಲ ಎಂದು ಬಹಿರಂಗಪಡಿಸಿದ್ದರು.

1960 ರ ದಶಕದಲ್ಲಿ ಅಮೆರಿಕದಲ್ಲಿ ಕೆಲಸ ಮಾಡುವಾಗ ರತನ್ ಟಾಟಾ ಬೇರೊಬ್ಬ ಹುಡುಗಿಯನ್ನು ಇಷ್ಟಪಟ್ಟಿದ್ದರು. 1962ರ ಭಾರತ-ಚೀನಾ ಯುದ್ಧ ಸಮಯದಲ್ಲಿ ಅದು ಕೊನೆಗೊಂಡಿತ್ತು. ಏಕೆಂದರೆ ಯುದ್ಧದ ಸಮಯದಲ್ಲಿ ಆಕೆಗೆ ಅಮೆರಿಕವನ್ನು ಬಿಟ್ಟು ಭಾರತಕ್ಕೆ ಹೋಗಲು ಪೋಷಕರು ಅನುಮತಿ ನೀಡಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?