AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್ ಜಾಮೀನು

Narendra Dabholkar Murder Case: 2013ರ ಆಗಸ್ಟ್‌ 20ರಂದು ಪುಣೆಯಲ್ಲಿ ನರೇಂದ್ರ ದಾಭೋಲ್ಕರ್‌ ಹತ್ಯೆಯಾಗಿತ್ತು. ಇತರ ಇಬ್ಬರು ಆರೋಪಿಗಳಾದ ಸಚಿನ್ ಅಧೂರೆ, ಶರದ್‌ ಕಲಸ್ಕರ್‌ರಿಗೆ ನೆರವಾಗಿದ್ದ ಆರೋಪದ ಅಡಿಯಲ್ಲಿ ಭಾವೆಯನ್ನು ಪೊಲೀಸರು ಬಂಧಿಸಿದ್ದರು.

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್ ಜಾಮೀನು
ನರೇಂದ್ರ ದಾಭೋಲ್ಕರ್‌
ರಶ್ಮಿ ಕಲ್ಲಕಟ್ಟ
|

Updated on: May 06, 2021 | 6:46 PM

Share

ಮುಂಬೈ: ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್‌ ಗುರುವಾರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಎಸ್‌.ಎಸ್‌ ಶಿಂಧೆ ಮತ್ತು ಮನೀಶ್‌ ಪಿತಾಳೆ ಅವರನ್ನು ಒಳಗೊಂಡ ವಿಭಾಗೀಯ ಪೀಠವು ₹1 ಲಕ್ಷದ ನಗದು ಶ್ಯೂರಿಟಿ ಬರೆಸಿಕೊಂಡು ಭಾವೆಗೆ ಜಾಮೀನು ಅನುಮತಿ ನೀಡಿದ್ದಾರೆ. ಭಾವೆ ಸದ್ಯ ಯೆರವಡಾ ಸೆಂಟ್ರಲ್ ಜೈಲಿನಲ್ಲಿದ್ದು , ಶ್ಯೂರಿಟಿ ನೀಡಿದ ನಂತರವೇ ಬಿಡುಗಡೆ ಮಾಡಲಾಗುವುದು. 2013ರ ಆಗಸ್ಟ್‌ 20ರಂದು ಪುಣೆಯಲ್ಲಿ ನರೇಂದ್ರ ದಾಭೋಲ್ಕರ್‌ ಹತ್ಯೆಯಾಗಿತ್ತು. ಇತರ ಇಬ್ಬರು ಆರೋಪಿಗಳಾದ ಸಚಿನ್ ಅಧೂರೆ, ಶರದ್‌ ಕಲಸ್ಕರ್‌ರಿಗೆ ನೆರವಾಗಿದ್ದ ಆರೋಪದ ಅಡಿಯಲ್ಲಿ ಭಾವೆಯನ್ನು ಪೊಲೀಸರು ಬಂಧಿಸಿದ್ದರು.

ಜಾಮೀನು ಪಡೆದ ನಂತರ ಭಾವೆ ಮೊದಲ ತಿಂಗಳಿನಲ್ಲಿ ಪ್ರತಿ ದಿನ ಮತ್ತು ಎರಡನೇ ತಿಂಗಳಿನಲ್ಲಿ ಪ್ರತಿ ಎರಡು ದಿನಗಳಿಗೊಮ್ಮೆ ಪುಣೆಯ ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ಹಾಜರಾಗುವಂತೆ ನ್ಯಾಯಪೀಠ ಸೂಚಿಸಿದೆ. ಅದೇ ವೇಳೆ ದಾಭೋಲ್ಕರ್‌ ಹತ್ಯೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಮತ್ತು ಯಾವುದೇ ಪುರಾವೆಗಳು ನಾಶ ಮಾಡದಂತೆ ನಿರ್ದೇಶನ ನೀಡಿದೆ.

ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದ ನಂತರ ಭಾವೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ಆದೇಶವನ್ನು ತಡೆಹಿಡಿಯಬೇಕೆಂದು ಕೋರಿ ಸಿಬಿಐ ಕೋರಿಕೆಯನ್ನು ಒಪ್ಪಿಕೊಳ್ಳಲು ನ್ಯಾಯಾಲಯ ನಿರಾಕರಿಸಿದೆ.

ಸಿಬಿಐ ಪ್ರಕಾರ, ಬಂಧಿತ ಆರೋಪಿ ಸಚಿನ್ ಅಧೂರೆ ಮತ್ತು ಶರದ್ ಕಲಾಸ್ಕರ್ 2013 ರ ಆಗಸ್ಟ್ 20 ರಂದು ಪುಣೆಯ ಓಂಕಾರೇಶ್ವರ ದೇವಸ್ಥಾನದ ಬಳಿಯ ವಿ ಆರ್ ಶಿಂಧೆ ಸೇತುವೆಯ ಮೇಲೆ ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದಾಗ ದಾಬೋಲ್ಕರ್ ಮೇಲೆ ಗುಂಡು ಹಾರಿಸಿದ್ದರು.

ಇದನ್ನೂ ಓದಿ: ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್

(Rationalist Narendra Dabholkar murder case Bombay HC grants bail to Vikram Bhave)

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು