ಉತ್ತರ ಪ್ರದೇಶ: ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮಹಿಳೆಯ ದೇಹವನ್ನು ಕಚ್ಚಿ ತಿಂದ ಇಲಿಗಳು

ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮಹಿಳೆಯ ದೇಹವನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ಉತ್ತರ ಪ್ರದೇಶದ ಲಲಿತ್​ಪುರದಲ್ಲಿ ನಡೆದಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಡಿಸೆಂಬರ್ 2 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶ: ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮಹಿಳೆಯ ದೇಹವನ್ನು ಕಚ್ಚಿ ತಿಂದ ಇಲಿಗಳು
ಇಲಿಗಳು
Follow us
ನಯನಾ ರಾಜೀವ್
|

Updated on: Dec 07, 2023 | 7:51 AM

ಲಲಿತ್​ಪುರ, ಡಿಸೆಂಬರ್ 07: ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮಹಿಳೆಯ ದೇಹವನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ಉತ್ತರ ಪ್ರದೇಶದ ಲಲಿತ್​ಪುರದಲ್ಲಿ ನಡೆದಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಡಿಸೆಂಬರ್ 2 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಆಕೆಯ ದೇಹವನ್ನು ಅದೇ ದಿನ ರಾತ್ರಿ ಪೊಲೀಸರು ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ ಎಂದು ಜಿಲ್ಲೆಯ ಮುಖ್ಯ ವೈದ್ಯಕೀಯ ಅಧಿಕಾರಿ (CMO) ಡಾ ಇಮ್ತಿಯಾಜ್ ಅಹ್ಮದ್ ತಿಳಿಸಿದ್ದಾರೆ.

ಮಹಿಳೆಯ ದೇಹವನ್ನು ಸರಿಯಾಗಿ ಮುಚ್ಚಿಲ್ಲದ ಕಾರಣ ಇಲಿಗಳು ಮಹಿಳೆಯ ದೇಹವನ್ನು ಕಚ್ಚಿವೆ. ಶವಪರೀಕ್ಷೆ ನಡೆಸುವ ಮೊದಲು ಮಹಿಳೆಯ ಕುಟುಂಬದ ಸದಸ್ಯರು, ಪೊಲೀಸರು ಮತ್ತು ಆಸ್ಪತ್ರೆಯ ಸಿಬ್ಬಂದಿ ಕಚ್ಚಿದ ಗುರುತುಗಳನ್ನು ಗಮನಿಸಿದ ನಂತರ ಡಿಸೆಂಬರ್ 3 ರಂದು ಈ ವಿಷಯ ಬೆಳಕಿಗೆ ಬಂದಿದೆ ಎಂದು ಪಿಟಿಐ ವರದಿಯೊಂದು ತಿಳಿಸಿದೆ.

ಮತ್ತಷ್ಟು ಓದಿ: Jodhpur: ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ರೋಗಿಗಳ ಕಾಲು ಕಚ್ಚುತ್ತಿವೆ ಇಲಿಗಳು

ಮಹಿಳೆಯ ತಾಯಿ ನಂತರ ಮುಖ್ಯ ವೈದ್ಯಕೀಯ ಅಧಿಕಾರಿಗೆ (CMO) ಶವವನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿದರು. ಸಂತ್ರಸ್ತೆಯ ತಾಯಿಯ ದೂರಿನ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆಗಾಗಿ ತ್ರಿಸದಸ್ಯ ವೈದ್ಯರ ಸಮಿತಿಯನ್ನು ರಚಿಸಲಾಗಿದೆ.

ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ ವೀರೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ತಂಡವು ಕಾರ್ಯನಿರ್ವಹಿಸಲಿದೆ. ಸಮಿತಿಯು ಒಂದು ವಾರದೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಸಿಎಂಒ ಡಾ.ಇಮ್ತಿಯಾಜ್ ಅಹ್ಮದ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು