ಲಲಿತ್ಪುರ, ಡಿಸೆಂಬರ್ 07: ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮಹಿಳೆಯ ದೇಹವನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ಉತ್ತರ ಪ್ರದೇಶದ ಲಲಿತ್ಪುರದಲ್ಲಿ ನಡೆದಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಡಿಸೆಂಬರ್ 2 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.
ಆಕೆಯ ದೇಹವನ್ನು ಅದೇ ದಿನ ರಾತ್ರಿ ಪೊಲೀಸರು ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ ಎಂದು ಜಿಲ್ಲೆಯ ಮುಖ್ಯ ವೈದ್ಯಕೀಯ ಅಧಿಕಾರಿ (CMO) ಡಾ ಇಮ್ತಿಯಾಜ್ ಅಹ್ಮದ್ ತಿಳಿಸಿದ್ದಾರೆ.
ಮಹಿಳೆಯ ದೇಹವನ್ನು ಸರಿಯಾಗಿ ಮುಚ್ಚಿಲ್ಲದ ಕಾರಣ ಇಲಿಗಳು ಮಹಿಳೆಯ ದೇಹವನ್ನು ಕಚ್ಚಿವೆ. ಶವಪರೀಕ್ಷೆ ನಡೆಸುವ ಮೊದಲು ಮಹಿಳೆಯ ಕುಟುಂಬದ ಸದಸ್ಯರು, ಪೊಲೀಸರು ಮತ್ತು ಆಸ್ಪತ್ರೆಯ ಸಿಬ್ಬಂದಿ ಕಚ್ಚಿದ ಗುರುತುಗಳನ್ನು ಗಮನಿಸಿದ ನಂತರ ಡಿಸೆಂಬರ್ 3 ರಂದು ಈ ವಿಷಯ ಬೆಳಕಿಗೆ ಬಂದಿದೆ ಎಂದು ಪಿಟಿಐ ವರದಿಯೊಂದು ತಿಳಿಸಿದೆ.
ಮತ್ತಷ್ಟು ಓದಿ: Jodhpur: ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ರೋಗಿಗಳ ಕಾಲು ಕಚ್ಚುತ್ತಿವೆ ಇಲಿಗಳು
ಮಹಿಳೆಯ ತಾಯಿ ನಂತರ ಮುಖ್ಯ ವೈದ್ಯಕೀಯ ಅಧಿಕಾರಿಗೆ (CMO) ಶವವನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿದರು.
ಸಂತ್ರಸ್ತೆಯ ತಾಯಿಯ ದೂರಿನ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆಗಾಗಿ ತ್ರಿಸದಸ್ಯ ವೈದ್ಯರ ಸಮಿತಿಯನ್ನು ರಚಿಸಲಾಗಿದೆ.
ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ ವೀರೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ತಂಡವು ಕಾರ್ಯನಿರ್ವಹಿಸಲಿದೆ. ಸಮಿತಿಯು ಒಂದು ವಾರದೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಸಿಎಂಒ ಡಾ.ಇಮ್ತಿಯಾಜ್ ಅಹ್ಮದ್ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ