AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕ್ರಿಕೆಟಿಗರಿಗೆ ದುಶ್ಚಟಗಳು ಹೆಚ್ಚು; ಜಡೇಜಾ ಪತ್ನಿ ಶಾಕಿಂಗ್ ಹೇಳಿಕೆ

ಭಾರತದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಗುಜರಾತ್ ಸಚಿವೆಯೂ ಆಗಿರುವ ರಿವಾಬಾ ಜಡೇಜಾ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತ ಕ್ರಿಕೆಟಿಗರು ವಿದೇಶದ ಪ್ರವಾಸದಲ್ಲಿದ್ದಾಗ ದುಶ್ಚಟಗಳಲ್ಲಿ ತೊಡಗುತ್ತಾರೆ ಎಂದು ಹೇಳಿದ್ದಾರೆ. ಆದರೆ, ತನ್ನ ಪತಿಗೆ ಈ ವಿಷಯದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ. ಜನವರಿ 11ರಿಂದ ಆರಂಭವಾಗುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೂಲಕ ರವೀಂದ್ರ ಜಡೇಜಾ ಮತ್ತೆ ಆಟಕ್ಕೆ ಮರಳಲಿದ್ದಾರೆ.

ಭಾರತದ ಕ್ರಿಕೆಟಿಗರಿಗೆ ದುಶ್ಚಟಗಳು ಹೆಚ್ಚು; ಜಡೇಜಾ ಪತ್ನಿ ಶಾಕಿಂಗ್ ಹೇಳಿಕೆ
Jadeja With Wife
ಸುಷ್ಮಾ ಚಕ್ರೆ
|

Updated on:Dec 12, 2025 | 4:18 PM

Share

ಅಹಮದಾಬಾದ್, ಡಿಸೆಂಬರ್ 12: ಭಾರತದ ಕ್ರಿಕೆಟ್ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರ ಪತ್ನಿ ಹಾಗೂ ಗುಜರಾತ್ ಸರ್ಕಾರದ ಸಚಿವೆ ರಿವಾಬಾ ಜಡೇಜಾ ಆಘಾತಕಾರಿ ಹೇಳಿಕೆಯೊಂದನ್ನು ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ವಿದೇಶಿ ಪ್ರವಾಸಗಳ ಸಮಯದಲ್ಲಿ ಕೆಲವು ಭಾರತೀಯ ಕ್ರಿಕೆಟಿಗರು ವಿವಿಧ ದುಶ್ಚಟಗಳಲ್ಲಿ ತೊಡಗುತ್ತಾರೆ ಎಂದು ಆರೋಪಿಸಿ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಆದರೆ, ನನ್ನ ಪತಿ ಎಂದಿಗೂ ಅಂತಹ ಯಾವುದೇ ದುಶ್ಚಟಗಳಲ್ಲಿ ಇದುವರೆಗೂ ತೊಡಗಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಿವಾಬಾ ಜಡೇಜಾ, ಕ್ರಿಕೆಟಿಗರ ಬಗ್ಗೆ ಹೆಚ್ಚು ಜನರಿಗೆ ಗೊತ್ತಿಲ್ಲದ ಅಭ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ, ಅವರ ಸುತ್ತಮುತ್ತಲಿನ ಪರಿಸರ ಆ ರೀತಿಯಾಗಿದ್ದರೂ ತನ್ನ ಪತಿಗೆ ಅಂತಹ ಯಾವುದೇ ಅಭ್ಯಾಸಗಳಿಲ್ಲ ಎಂದು ಅವರು ರವೀಂದ್ರಾ ಜಡೇಜಾ ಅವರಿಗೆ ಈ ವಿಷಯದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ.

ಇದನ್ನೂ ಓದಿ: ಗುಜರಾತ್ ಹೊಸ ಕ್ಯಾಬಿನೆಟ್: ಹರ್ಷ್ ಸಾಂಘ್ವಿ ಅತ್ಯಂತ ಕಿರಿಯ ಡಿಸಿಎಂ; ರವೀಂದ್ರ ಜಡೇಜಾ ಪತ್ನಿ ಸೇರಿ 26 ಮಂತ್ರಿಗಳು

“ನನ್ನ ಪತಿ, ಕ್ರಿಕೆಟಿಗ ರವೀಂದ್ರ ಜಡೇಜಾ ಕ್ರಿಕೆಟ್ ಆಡಲು ಲಂಡನ್, ದುಬೈ ಮತ್ತು ಆಸ್ಟ್ರೇಲಿಯಾದಂತಹ ಹಲವು ದೇಶಗಳಿಗೆ ಪ್ರಯಾಣಿಸಬೇಕಾಗುತ್ತದೆ. ಆದರೂ, ಇಂದಿಗೂ ಅವರು ಯಾವುದೇ ರೀತಿಯ ದುಶ್ಚಟಗಳನ್ನು ಮಾಡಿಲ್ಲ. ಏಕೆಂದರೆ ಅವರು ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಂಡಿದ್ದಾರೆ. ಕ್ರಿಕೆಟ್ ತಂಡದ ಉಳಿದವರೆಲ್ಲರೂ ದುಶ್ಚಟಗಳನ್ನು ರೂಢಿಸಿಕೊಂಡಿದ್ದಾರೆ. ಆದರೆ ಅವರ ಕುಟುಂಬಗಳಿಂದ ಅದಕ್ಕೆ ಯಾವುದೇ ನಿರ್ಬಂಧವಿಲ್ಲ” ಎಂದು ರಿವಾಬಾ ಹೇಳಿದ್ದಾರೆ. ಈ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.

“ಒಮ್ಮೆ ನಾವು ಜೀವನದಲ್ಲಿ ಪ್ರಗತಿ ಸಾಧಿಸಿದ ನಂತರ ನಡೆದುಬಂದ ಹಾದಿಯನ್ನು ಮರೆಯಬಾರದು. ನಮ್ಮ ಸಾಂಸ್ಕೃತಿಕ ಬೇರುಗಳನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ” ಎಂದು ರಿವಾಬಾ ಹೇಳಿದ್ದಾರೆ.

ಇದನ್ನೂ ಓದಿ: IPL 2026: ನಾನು ತಂಡಕ್ಕೆ ಬರಬೇಕೆಂದರೆ..; ರಾಜಸ್ಥಾನ್​ಗೆ ಬಿಸಿ ತುಪ್ಪವಾದ ರವೀಂದ್ರ ಜಡೇಜಾ ಷರತ್ತು

2016ರಲ್ಲಿ ಕ್ರಿಕೆಟಿಗ ಕೆ.ಎಲ್ ರಾಹುಲ್ ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಕೈಯಲ್ಲಿ ಬಿಯರ್ ಬಾಟಲಿಯನ್ನು ಹಿಡಿದುಕೊಂಡು ತಮ್ಮ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳಲ್ಲಿ ಫೋಟೋವನ್ನು ಪೋಸ್ಟ್ ಮಾಡಿದ್ದರು. ಈ ಫೋಟೋ ತಕ್ಷಣವೇ ವೈರಲ್ ಆಯಿತು. ಇದರಿಂದಾಗಿ ಬಿಸಿಸಿಐ ಆಟಗಾರರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕೆಂದು ಕ್ರಿಕೆಟಿಗರಿಗೆ ನಿರ್ದೇಶಿಸುವಂತಾಯಿತು.

2024ರ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ತಂಬಾಕು ಮತ್ತು ಆಲ್ಕೋಹಾಲ್ ಉತ್ಪನ್ನಗಳ ಜಾಹೀರಾತಿನಲ್ಲಿ ಕ್ರೀಡಾಪಟುಗಳು ಭಾಗವಹಿಸುವುದನ್ನು ತಡೆಯುವ ಕ್ರಮಗಳನ್ನು ಜಾರಿಗೆ ತರಲು ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಗೆ ಸೂಚಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Fri, 12 December 25

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ