Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತಪುರ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾ ಹಾಕಿದ್ದ ಕಾಮಾಂಧ ಅಟೆಂಡರ್

Hidden Camera: ಅನಂತಪುರ ಜಿಲ್ಲೆಯ ಯಾಡಿಕಿ ಮಂಡಲದ ರಾಯಲ ಚೆರುವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ಅಟೆಂಡರ್ ಹಿಡನ್ ಕ್ಯಾಮೆರಾ ಹಾಕಿರುವ ಪ್ರಸಂಗ ನಡೆದಿದೆ. 

ಅನಂತಪುರ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾ ಹಾಕಿದ್ದ ಕಾಮಾಂಧ ಅಟೆಂಡರ್
ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾ ಹಾಕಿದ್ದ ಕಾಮಾಂಧ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 15, 2023 | 6:13 PM

ಅನಂತಪುರ ಜಿಲ್ಲೆಯ ಯಾಡಿಕಿ ಮಂಡಲದ ರಾಯಲ ಚೆರುವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ಅಟೆಂಡರ್ ಹಿಡನ್ ಕ್ಯಾಮೆರಾ (Hidden Camera) ಹಾಕಿರುವ ಪ್ರಸಂಗ ನಡೆದಿದೆ. ಹೌದು ಮಹಿಳೆಯರು ಎಷ್ಟೇ ಎಚ್ಚರಿಕೆ ವಹಿಸಿದರೂ ಎಲ್ಲೋ ಒಂದು ಕಡೆ ಹುಚ್ಚರಿಗೆ ಬಲಿಯಾಗುವುದು ಸಾಮಾನ್ಯವಾಗಿದೆ. ಅನಂತಪುರ (Anantapur) ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್‌ಸಿ -PHC) ನಡೆದಿರುವ ಘಟನೆ ಮಹಿಳಾ (Women) ಸಿಬ್ಬಂದಿಯನ್ನು ಆತಂಕಕ್ಕೆ ದೂಡಿದೆ. ಇತ್ತೀಚೆಗಷ್ಟೇ ಯಾಡಿಕಿ ಮಂಡಲದ ರಾಯಲ ಚೆರುವು ಪಿಎಚ್‌ಸಿಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುತ್ತಿದ್ದ ವೇಳೆ ಅಟೆಂಡರ್ ಒಬ್ಬ ರಹಸ್ಯವಾಗಿ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಾರ್ಡ್​​ಬೋರ್ಡ್​​ ಬಾಕ್ಸ್‌ಗೆ ಸೆಲ್‌ ಫೋನ್‌ ಇಟ್ಟು ವಿಡಿಯೋ ಮಾಡಲಾಗುತ್ತಿತ್ತು ಎಂಬ ಆರೋಪವಿದೆ.

ಮಹಿಳಾ ಸಿಬ್ಬಂದಿಯ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ಗುಪ್ತವಾಗಿ ಸೆಲ್‌ಫೋನ್‌ ಅಳವಡಿಸಿ ಕೆಲ ದಿನಗಳಿಂದ ನರೇಂದ್ರ ಈ ದುಷ್ಕೃತ್ಯ ನಡೆಸುತ್ತಿದ್ದಾನೆ ಎಂದು 40 ಮಹಿಳಾ ಸಿಬ್ಬಂದಿ ದೂರಿದಾಗ ವಿಷಯ ಬೆಳಕಿಗೆ ಬಂದಿದೆ. ಇನ್ನು, ಯಾರದೆಲ್ಲಾ ವಿಡಿಯೋಗಳು ಇವೆ ಎಂಬುದು ತಿಳಿಯದ ಕಾರಣ ಮಹಿಳಾ ಉದ್ಯೋಗಿಗಳು ಒಬ್ಬೊಬ್ಬರಾಗಿ ಕಂಗಾಲಾಗಿದ್ದಾರೆ.

Also Read:

ಮುಟ್ಟಿನ ರಜೆಗೆ ಪಿಐಎಲ್; ಫೆಬ್ರವರಿ 24ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿದ ಸಿಜೆಐ ಪೀಠ

ಈ ಘಟನೆಯನ್ನು ಹಿರಿಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ತಕ್ಷಣ ತನಿಖೆಗೆ ಆದೇಶಿಸಲಾಗಿದೆ. ಈ ಪ್ರಕರಣವನ್ನು ಮಹಿಳಾ ವಿಶೇಷ ತಂಡದ ಶಿ ಟೀಮ್‌ಗೆ (SHE Team) ಹಸ್ತಾಂತರಿಸುವ ಸಾಧ್ಯತೆಗಳಿವೆ. ಮಹಿಳಾ ಸಿಬ್ಬಂದಿ ಆತನ ಫೋನನ್ನು ವಶಕ್ಕೆ ಪಡೆದು ಮಹಿಳಾ ಉದ್ಯೋಗಿಗಳ ಗೌರವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಆ ವಿಡಿಯೋಗಳು ಅವನ ಬಳಿಯೇ ಇದ್ದವಾ? ಅಥವಾ ಯಾರೊಂದಿಗಾದರೂ ಅವನು ಹಂಚಿಕೊಂಡಿದ್ದಾನಾ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Wed, 15 February 23

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್