AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐಗೆ ಲಷ್ಕರ್-ಎ-ತೊಯ್ಬಾದಿಂದ ಬಾಂಬ್ ಬೆದರಿಕೆ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೆ ಬೆದರಿಕೆ ಕರೆ ಬಂದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.

ಆರ್​ಬಿಐಗೆ ಲಷ್ಕರ್-ಎ-ತೊಯ್ಬಾದಿಂದ ಬಾಂಬ್ ಬೆದರಿಕೆ
ಆರ್​ಬಿಐ
ನಯನಾ ರಾಜೀವ್
|

Updated on: Nov 17, 2024 | 11:32 AM

Share

ಮುಂಬೈ, ನವೆಂಬರ್ 17: ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೆ ಬೆದರಿಕೆ ಕರೆ ಬಂದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.

ಭಾರತೀಯ ರಿಸರ್ವ್ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಕರೆ ಬಂದಿದೆ. ಫೋನ್ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ರಿಸರ್ವ್ ಬ್ಯಾಂಕ್ ನ ಭದ್ರತಾ ಸಿಬ್ಬಂದಿ ನೀಡಿದ ದೂರಿನಂತೆ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈನಲ್ಲಿರುವ ಜೆಎಸ್‌ಎ ಕಾನೂನು ಸಂಸ್ಥೆ ಬಲ್ಲಾರ್ಡ್ ಪೇರ್ ಮತ್ತು ಜೆಎಸ್‌ಎ ಕಚೇರಿ ಕಮಲಾ ಮಿಲ್ ಲೋವರ್ ಪರ್ಲ್‌ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಈ ಬೆದರಿಕೆ ಮೇಲ್ ಕಂಪನಿಯ ಇಮೇಲ್ ಐಡಿಯಲ್ಲಿ ಫರ್ಜಾನ್ ಅಹ್ಮದ್ ಎಂದು ಬರೆಯಲಾಗಿದೆ.

ಮತ್ತಷ್ಟು ಓದಿ: ಬಾಂಬ್​ ಇದೆ ಎಂದು ಆಟೋ ಸಮೇತ ಪೊಲೀಸ್ ಠಾಣೆಗೆ ಬಂದ ಚಾಲಕ: ಮುಂದೇನಾಯ್ತು?

ಜೆಎಫ್‌ಎ ಸಂಸ್ಥೆಯ ಕಚೇರಿಗಳು ಮತ್ತು ಬಲ್ಲಾರ್ಡ್ ಎಸ್ಟೇಟ್‌ನ ಕಚೇರಿಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಮೇಲ್‌ನಲ್ಲಿ ಬರೆಯಲಾಗಿದೆ. ಮಾಹಿತಿ ಬಂದ ತಕ್ಷಣ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಗುಂಪು 2008 ರ ಮುಂಬೈ ದಾಳಿಯನ್ನು ನಡೆಸಿತ್ತು, ಇದು ಭಾರತದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗಳಲ್ಲಿ ಒಂದಾಗಿದೆ.

ಕಳೆದ ಎರಡು-ಮೂರು ತಿಂಗಳಿನಿಂದ ನಿರಂತರವಾಗಿ ಶಾಲೆಗಳು, ಹೋಟೆಲ್‌ಗಳು, ವಿಮಾನ ನಿಲ್ದಾಣಗಳು, ಮಾರುಕಟ್ಟೆಗಳು, ರೈಲ್ವೆ, ಬಸ್‌ಗಳು ಇತ್ಯಾದಿಗಳಲ್ಲಿ ಬಾಂಬ್ ಬೆದರಿಕೆಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಅಕ್ಟೋಬರ್ 27 ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಜವಾನನಿಗೆ ಬೆದರಿಕೆ ಹಾಕಲಾಗಿತ್ತು. ಆಗ ವಿಮಾನ ಸ್ಫೋಟಗೊಂಡರೆ ಯಾರೂ ಬದುಕುವುದಿಲ್ಲ ಎಂದು ಹೇಳಲಾಗಿತ್ತು. ತನಿಖೆಯ ನಂತರ ಈ ಬೆದರಿಕೆ ಸುಳ್ಳು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ